ತಿರುವನಂತಪುರ: ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ಕೇರಳ ಪೊಲೀಸರು ಸಾಮಾಜಿಕ ಕಾರ್ಯಕರ್ತೆ ರೆಹನಾ ಫಾತಿಮಾರನ್ನು ಬಂಧಿಸಿದ್ದಾರೆ.
ಹೌದು, ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಪ್ರವೇಶಿಲು ಯತ್ನಿಸಿ ಸುದ್ದಿಯಾಗಿದ್ದ ರೆಹನಾ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿದ್ದಾರೆ ಎಂಬ ಕೇಸಿಗೆ ಸಂಬಂಧಪಟ್ಟಂತೆ ಕೇರಳ ಹೈಕೋರ್ಟ್ ರೆಹನಾ ಫಾತೀಮಾರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದರ ಬೆನ್ನಲ್ಲೇ ಪತ್ತನಂಪಟ್ಟಿ ಪೊಲೀಸರು ಮಂಗಳವಾರ ಕೊಚ್ಚಿಯಲ್ಲಿ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
Advertisement
Kerala: Woman activist Rehana Fathima has been arrested by Pathanamthitta Police. The arrest was made on charges of allegedly hurting religious sentiment through a Facebook post. (file pic) pic.twitter.com/WMWoGkGIl1
— ANI (@ANI) November 27, 2018
Advertisement
ಏನಿದು ಪ್ರಕರಣ?
ರೆಹನಾ ಫಾತಿಮಾರ ಕೆಲವೊಂದು ಫೇಸ್‍ಬುಕ್ ಪೋಸ್ಟ್‍ಗಳು ಧಾರ್ಮಿಕ ಮನೋಭಾವನೆಗೆ ಧಕ್ಕೆಯುಂಟು ಮಾಡುವಂತಿದೆ ಎಂದು ಆರೋಪಿಸಿ ರಾಧಾಕೃಷ್ಣ ಮೆನನ್ ಎಂಬವರು ಪತ್ತನಂಪಟ್ಟಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ ಪೊಲೀಸರು ಫಾತಿಮಾ ಮೇಲೆ ಐಪಿಸಿ ಸೆಕ್ಷನ್ 295ಎ ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದರು.
Advertisement
ಪ್ರಕರಣ ದಾಖಲಾಗಿದ್ದರಿಂದ ಬಂಧನ ಭೀತಿಯಲ್ಲಿದ್ದ ರೆಹನಾ ಕೇರಳ ಹೈಕೋರ್ಟ್ ಗೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ರೆಹನಾರ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿತ್ತು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv