ಅಹ್ಮದಾಬಾದ್: ದೇಶವೇ ಎದುರು ನೋಡುತ್ತಿರುವ ವಿಶ್ವಕಪ್ ಮಹಾಸಮರಕ್ಕೆ ಇನ್ನೊಂದು ದಿನ ಬಾಕಿಯಿದೆ. ಕೋಟ್ಯಂತರ ಅಭಿಮಾನಿಗಳು ಫೈನಲ್ (World Cup Final) ಪಂದ್ಯ ವೀಕ್ಷಣೆ ಮಾಡಲು ಕಾದು ಕುಳಿತಿದ್ದಾರೆ. ಲೀಗ್ ಸುತ್ತಿನಿಂದಲೂ ಒಂದೇ ಒಂದು ಪಂದ್ಯ ಸೋಲದ ಭಾರತ ಸರಿಸಾಟಿಯೇ ಇಲ್ಲದಂತೆ ಮುನ್ನುಗ್ಗುತ್ತಿದೆ.
Rehersal going on for the air show at the Narendra Modi Stadium.pic.twitter.com/skODyxcZ43
— Mufaddal Vohra (@mufaddal_vohra) November 17, 2023
Advertisement
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ಭಾನುವಾರ ಭಾರತ ಮತ್ತು ಆಸ್ಟ್ರೇಲಿಯಾ (Ind vs Aus) ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ನವೆಂಬರ್ 19 ರಂದು ಮಧ್ಯಾಹ್ನ 2 ಗಂಟೆ ವೇಳೆಗೆ ಪಂದ್ಯ ಆರಂಭವಾಗಲಿದ್ದು, 20 ವರ್ಷಗಳ ಬಳಿಕ ಭಾರತ ಕಾಂಗರೂ ಪಡೆ ವಿರುದ್ಧ ಸೇಡು ತೀರಿಸಿಕೊಳ್ಳಲು ತುದಿಗಾಲಿನಲ್ಲಿ ನಿಂತಿದೆ. ಆದ್ರೆ ಪಂದ್ಯ ಆರಂಭಕ್ಕೂ ಮುನ್ನವೇ ಭಾರತ ತಂಡಕ್ಕೆ (Team India) ಸ್ಫೂರ್ತಿ ತುಂಬಲು ಹಲವು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಹಲವು ನೃತ್ಯಪಟುಗಳು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಬೀಡುಬಿಟ್ಟಿದ್ದು, ನೃತ್ಯ ಅಭ್ಯಾಸ ನಡೆಸುತ್ತಿದ್ದಾರೆ.
Advertisement
The carnival is 2 nights away…!!!!
– ‘Jeetega, India Jeetega’. pic.twitter.com/XnsaIIFZ2Z
— Mufaddal Vohra (@mufaddal_vohra) November 17, 2023
Advertisement
ಟೀಂ ಇಂಡಿಯಾವನ್ನು ಮತ್ತಷ್ಟು ಹುರಿದುಂಬಿಸಲು ʻಜೀತೇಗ ಇಂಡಿಯಾ ಜೀತೇಗʼ (Jeetega, India Jeetega) ವಿಶೇಷ ಗೀತೆಯೊಂದಿಗೆ ನೃತ್ಯ ಪ್ರದರ್ಶನವನ್ನೂ ಏರ್ಪಡಿಸಲಾಗಿದೆ. ಅಲ್ಲದೇ ಬಾಲಿವುಡ್ ತಾರೆಯರಿಂದ ನೃತ್ಯ ಪ್ರದರ್ಶನ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ. ಇದಕ್ಕೂ ಮುನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ವಿಶ್ವಕಪ್ ಟೂರ್ನಿಯ ಫೈನಲ್ ಸಮಾರಂಭದಲ್ಲಿ ಭಾರತೀಯ ವಾಯುಪಡೆಯಿಂದ ವಿಶೇಷ ಏರ್‌ಶೋ ಪ್ರದರ್ಶನ ನಡೆಯಲಿದೆ. ಇದು ಕ್ರಿಕೆಟ್ ಅಭಿಮಾನಿಗಳ ಕಣ್ಣಿಗೆ ಹಬ್ಬವನ್ನುಂಟುಮಾಡಲಿದೆ. ಇಂದು ಮೊದಲ ಹಂತದ ರಿಹರ್ಸಲ್ ಕೂಡ ನಡೆದಿದೆ. ಇದನ್ನೂ ಓದಿ: ಟೀಂ ಇಂಡಿಯಾ ಹೀನಾಯವಾಗಿ ಸೋಲುತ್ತೆ, ಆಸ್ಟ್ರೇಲಿಯಾ ಟ್ರೋಫಿ ಎತ್ತಿ ಹಿಡಿಯುತ್ತೆ – ಮಿಚೆಲ್ ಮಾರ್ಷ್ ಭವಿಷ್ಯವಾಣಿ ವೈರಲ್
Advertisement
ಮೋದಿ ಮುಖ್ಯ ಆಕರ್ಷಣೆ: ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಜರಾಗಲಿದ್ದಾರೆ. ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನರೇಂದ್ರ ಮೋದಿ ಕ್ರೀಡಾಂಗಣವು ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನವಾಗಿದ್ದು, ರೋಚಕ ಪಂದ್ಯ ವೀಕ್ಷಿಸಲು 1.30 ಲಕ್ಷಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ. ಈ ವೇಳೆ ಹಲವಾರು ಗಣ್ಯರು ಮೈದಾನದಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಗಣ್ಯರೊಂದಿಗೆ ಫೈನಲ್ ಪಂದ್ಯ ವೀಕ್ಷಿಸಲಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯ ಸಾಧಿಸಿದ ನಂತ್ರ ಆಸ್ಟ್ರೇಲಿಯಾ 8ನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಭಾರತ ಮತ್ತು ಆಸ್ಟ್ರೇಲಿಯಾ ರೋಚಕ ಕದನ ವೀಕ್ಷಿಸಲು ಕೋಟ್ಯಂತರ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಇದನ್ನೂ ಓದಿ: 2023 World Cup Final – 20 ವರ್ಷದ ಹಿಂದಿನ ಸೇಡನ್ನು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
ಏನೇನು ವಿಶೇಷ..?
ನವೆಂಬರ್ 19ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ಭಾರತೀಯ ವಾಯುಪಡೆಯು ವಿಶೇಷ ಏರ್ ಶೋ ಪ್ರದರ್ಶನ ನಡೆಸಿಕೊಡಲಿದೆ. ಇದರೊಂದಿಗೆ ಖ್ಯಾತ ಬಾಲಿವುಡ್ ತಾರೆಯರು ಮೋದಿ ಕ್ರೀಡಾಂಗಣಕ್ಕೆ ಮತ್ತಷ್ಟು ರಂಗು ತರಲಿದ್ದಾರೆ. ನೃತ್ಯ, ಸಂಗೀತ, ವಿಶೇಷ ಲೈಟಿಂಗ್ ಶೋ ಕಾರ್ಯಕ್ರಮಗಳು ನಡೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.