ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡುವಂತೆ ಒತ್ತಾಯಿಸಿ ಕೇಂದ್ರ ಸಚಿವ ನಾರಾಯಣ ಸ್ವಾಮಿ ಮತ್ತು ಯಲಹಂಕ ಶಾಸಕ ವಿಶ್ವನಾಥ್‍ಗೆ ಶ್ರೀರಾಮಸೇನೆ ಸಂಘಟನೆ ಮುಖಂಡರು ಮನವಿ ಸಲ್ಲಿಸಿದ್ದಾರೆ.
Advertisement
ಜಾಲಹಳ್ಳಿಯಲ್ಲಿ ನಾರಾಯಣ ಸ್ವಾಮಿಯನ್ನು ಭೇಟಿ ಮಾಡಿ ಶ್ರೀರಾಮ ಸೇನೆ ಬೆಂಗಳೂರು ಘಟಕದ ಮುಖಂಡರು ಮನವಿ ಸಲ್ಲಿಸಿದ್ದಾರೆ. ನೂರಾರು ವರ್ಷಗಳಿಂದ ನಡೆದು ಬಂದ ಸಾರ್ವಜನಿಕ ಗಣೇಶೋತ್ಸವ ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ ನಿರ್ಬಂಧ ವಿಧಿಸಿದೆ. ಆದರೆ ಎಲ್ಲಾ ಜೀವನ ಚಟುವಟಿಕೆ ಸಾಮಾನ್ಯ ಸ್ಥಿತಿಗೆ ಮರಳಿದ್ದರೂ ನಿರ್ಬಂಧ ವಿಧಿಸಿದ್ದು ಈ ಹಬ್ಬವನ್ನೇ ಅವಲಂಬಿಸಿರುವ ಸಾವಿರಾರು ಕುಟುಂಬಕ್ಕೆ ಹೊಟ್ಟೆಯ ಮೇಲೆ ಹೊಡೆದ ಹಾಗೆ ಆಗುತ್ತದೆ. ಮೂರ್ತಿ ತಯಾರಕರು ನಾಲ್ಕಾರು ತಿಂಗಳ ಮುಂಚಿತವಾಗಿ ಮೂರ್ತಿ ತಯಾರಿಸುತ್ತಾರೆ. ಅವರ ಸ್ಥಿತಿ ಏನು? ಶಾಮಿಯಾನ, ವಿದ್ಯುತ್ ದೀಪ, ವಾದ್ಯವೃಂದ ಮುಂತಾದವರು ಗಣೇಶೋತ್ಸವವನ್ನೆ ಅವಲಂಬಿತರಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗುತ್ತದೆ ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಹಿಂದೂ ಸಂಘಟನೆಗಳ ಒತ್ತಡಕ್ಕೆ ಮಣಿದ ಸರ್ಕಾರ – ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ?
Advertisement
Advertisement
ಕೋವಿಡ್ ನಿಯಮ ಪಾಲಿಸಿ ಹೇಗೆ ಮಾಲ್ ಚಿತ್ರಮಂದಿರ, ಚುನಾವಣೆ, ರಾಜಕೀಯ ಸಮಾವೇಶ, ಶಾಲಾ-ಕಾಲೇಜು ಮುಂತಾದವು ನಡೆಯುತ್ತಿವೆಯೋ ಅದೇ ರೀತಿ ಗಣೇಶೋತ್ಸವ ಆಚರಿಸಲು ಅನುಮತಿ ನೀಡಬೇಕೆಂದು ಆಗ್ರಹಿಸುತ್ತೇವೆ. ನಮ್ಮ ಧಾರ್ಮಿಕ ಆಚರಣೆಗೆ ಚ್ಯುತಿ ಬರದಂತೆ ಕೋವಿಡ್ ನಿಯಮ ಉಲ್ಲಂಘನೆ ಆಗದಂತೆ ತಾವು ಶೀಘ್ರ ನಿರ್ಬಂಧ ಮರಳಿ ಪಡೆಯಬೇಕೆಂದು ಆಗ್ರಹಿಸುತ್ತೇವೆ ಎಂದು ಮನವಿ ಪತ್ರದ ಮೂಲಕ ಸರ್ಕಾರದ ಗಮನಕ್ಕೆ ತರುವಂತೆ ಸಚಿವರು ಮತ್ತು ಶಾಸಕರಿಗೆ ಆಗ್ರಹಿಸಿದ್ದಾರೆ.
Advertisement
ಈ ಸಂದರ್ಭದಲ್ಲಿ ಬೆಂಗಳೂರು ನಗರ ಅಧ್ಯಕ್ಷರಾದ ಚಂದ್ರಶೇಖರ್ ಹಾಗೂ ಪ್ರಧಾನ ಕಾರ್ಯದರ್ಶಿ ಸುಂದರೇಶ್ ನರ್ಗಲ್, ಸಂಘಟನಾ ಕಾರ್ಯದರ್ಶಿ ಅಮರನಾಥ್ ಮತ್ತು ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಇದನ್ನೂ ಓದಿ: ಸಭೆಯಲ್ಲಿ ಲಸಿಕೆ, ಹಬ್ಬಗಳ ನಡುವೆ ವೈರಸ್ ನಿಯಂತ್ರಣ ಕುರಿತು ಚರ್ಚೆ: ಗೌರವ್ ಗುಪ್ತ