ಬೆಂಗಳೂರು: ತಮಿಳುನಾಡಿಗೆ (TamilNadu) ಮತ್ತೆ 15 ದಿನಗಳ ಕಾಲ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ (CWRC) ಸೂಚಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ (Karnataka Government) ಇಕ್ಕಟ್ಟಿಗೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಮುಂದಿನ ತೀರ್ಮಾನ ಕೈಗೊಳ್ಳುವ ಸಲುವಾಗಿ ರಾಜ್ಯ ಸರ್ಕಾರ ಇಂದು ವಿಶೇಷ ಸರ್ವಪಕ್ಷ ಸಭೆ (All Party Meeting) ಕರೆದಿದೆ.
ಸಿಎಂ ಸಿದ್ದರಾಮಯ್ಯ (CM Siddaramaiah) ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮಧ್ಯಾಹ್ನ 12:30ಕ್ಕೆ ವಿಶೇಷ ಸರ್ವಪಕ್ಷ ಸಭೆ ನಡೆಯಲಿದೆ. ವಿಪಕ್ಷಗಳ ಸದನ ನಾಯಕರು, ಕಾವೇರಿ ಜಲಾನಯನ ಕ್ಷೇತ್ರಗಳ ಸಂಸದರು, ಶಾಸಕರು, ಪರಿಷತ್ ಸದಸ್ಯರು, ಮಾಜಿ ಸಿಎಂಗಳಿಗೆ ಸಭೆಗೆ ಬರುವಂತೆ ಆಹ್ವಾನಿಸಲಾಗಿದೆ. ಇದನ್ನೂ ಓದಿ: ಕರ್ನಾಟಕಕ್ಕೆ ಕುಡಿಯುವ ನೀರಿನ ಚಿಂತೆ; ತಮಿಳುನಾಡಿಗೆ ಬೆಳೆ ಬಾಡುವ ಚಿಂತೆ – 15 ದಿನ 5,000 ಕ್ಯೂಸೆಕ್ ಹರಿಸಲು CWRC ಸೂಚನೆ
Advertisement
Advertisement
ಸಿಡಬ್ಲ್ಯೂಆರ್‌ಸಿ ಶಿಫಾರಸು ಪಾಲನೆ ಮಾಡದಿರುವ ಸಂಬಂಧ ಸಭೆಯಲ್ಲಿ ಎಲ್ಲರೂ ಸೇರಿ ತೀರ್ಮಾನ ಮಾಡಲಿದ್ದಾರೆ. ಜತೆಗೆ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕೊಂಡೊಯ್ಯುವ ಬಗ್ಗೆ ಮುಹೂರ್ತ ನಿಗದಿ ಮಾಡುವ ಸಾಧ್ಯತೆ ಇದೆ.
Advertisement
ಸಭೆ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ದೆಹಲಿಗೆ ತೆರಳಲಿದ್ದು, ಕೇಂದ್ರದ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ರಾಜ್ಯದ ಪರಿಸ್ಥಿತಿ ಮನವರಿಕೆ ಮಾಡಿ ಕೇಂದ್ರದ ಮಧ್ಯಪ್ರವೇಶಕ್ಕೆ ಒತ್ತಾಯಿಸುವ ಸಾಧ್ಯತೆ ಇದೆ.
Advertisement
Web Stories