ಧನ್ನೆಗಾಂವ್ ಜಲಾಶಯದಿಂದ 1,300 ಕ್ಯುಸೆಕ್ ನೀರು ಬಿಡುಗಡೆ – ಮಾಂಜ್ರಾ ನದಿಪಾತ್ರದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣ

Public TV
1 Min Read
manjra river

ಬೀದರ್: ಮಹಾರಾಷ್ಟ್ರದ (Maharashtra) ಧನ್ನೆಗಾಂವ್ ಜಲಾಶಯದಿಂದ (Dhanegaon) ಮಾಂಜ್ರಾ ನದಿಗೆ (Manjra River) ಅಪಾರ ಪ್ರಮಾಣ ನೀರು ಬಿಡುಗಡೆಯಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜೀವನದಿ ಮಾಂಜ್ರಾ ಉಕ್ಕಿ ಹರಿಯುತ್ತಿದೆ. 1,300ಕ್ಕೂ ಅಧಿಕ ಕ್ಯುಸೆಕ್ ನೀರು ಮಾಂಜ್ರಾ ನದಿಗೆ ಬಿಡಲಾಗಿದ್ದು, ಇದರ ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ

manjra river 1

ಐದಾರು ವರ್ಷಗಳ ಬಳಿಕ ಮೈದುಂಬಿ ಹರಿಯುತ್ತಿರುವ ಮಾಂಜ್ರಾ ನದಿಯನ್ನು ಕಣ್ತುಂಬಿಕೊಂಡು ಜನರು ಖುಷಿ ಪಡುತ್ತಿದ್ದಾರೆ. ಜೊತೆಗೆ ಮಾಂಜ್ರಾ ಉಕ್ಕಿ ಹರಿಯುತ್ತಿರುವ ಪರಿಣಾಮ ನದಿ ಪಾತ್ರದಲ್ಲಿ ಅಕ್ಷರಶಃ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ: ಇಸ್ಲಾಂಗೆ ಮತಾಂತರವಾಗುವಂತೆ ವೈದ್ಯನಿಂದ ಕಿರುಕುಳ – ಉಡುಪಿಯಲ್ಲಿ ಆರೋಪಿ ಬಂಧನ

ಮೈದುಂಬಿ ಹರಿಯುತ್ತಿರುವ ಮಾಂಜ್ರಾ ನದಿ ಪಕ್ಕದಲ್ಲಿರುವ ರೈತರ ಜಮೀನುಗಳು ಕೂಡ ಸಂಪೂರ್ಣ ಜಲಾವೃತಗೊಂಡಿವೆ. ಜಿಲ್ಲೆಯಲ್ಲಿ ಇಂದು ಕೂಡಾ ಮಳೆ ಮುಂದುವರಿದಿದ್ದು, ಮಹಾರಾಷ್ಟ್ರದಲ್ಲಿ ಮತ್ತೆ ಮಹಾ ಮಳೆಯಾದರೆ ಗಡಿ ಜಿಲ್ಲೆ ಬೀದರ್‌ನಲ್ಲಿ ಮಹಾ ಪ್ರವಾಹ ಸೃಷ್ಟಿಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಈ ಸರ್ಕಾರ ಪಾಪರ್ ಸರ್ಕಾರ- ಗುಂಡಿ ಮುಚ್ಚೋಕು ಕಾಸಿಲ್ಲ: ಅಶೋಕ್ ಕಿಡಿ

Share This Article