ಬೆಂಗಳೂರು: ಸೋಮವಾರದ ಒಳಗೆ ಬರ ಪರಿಹಾರ (Drought Relief) ಕೊಡುವ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರದ ನಿರ್ಧಾರ ಹಿನ್ನೆಲೆಯಲ್ಲಿ ಇಂದು ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ ಪ್ರತಿಭಟನೆಗೆ (Protest) ನಿರ್ಧರಿಸಿದೆ.
ಇಂದು (ಮಂಗಳವಾರ) ಬೆಳಗ್ಗೆ 10 ಗಂಟೆಗೆ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಸಚಿವರು, ಶಾಸಕರು ಪ್ರತಿಭಟನೆ ನಡೆಸಲಿದ್ದಾರೆ. ಇದುವರೆಗೆ ಕೇಂದ್ರ ಮಾಡಿರುವ ಅನ್ಯಾಯ ಖಂಡಿಸಿ ಪ್ರತಿಭಟಿಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಬರ ಪರಿಹಾರ ಬಿಡುಗಡೆಗೆ ಈ ವಾರದಲ್ಲಿ ಕ್ರಮ – ಸುಪ್ರೀಂಗೆ ಕೇಂದ್ರ ಸರ್ಕಾರದ ಭರವಸೆ
Advertisement
Advertisement
ಬರ ಪರಿಹಾರ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಈ ವಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರದ ಪರ ವಕೀಲ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಸೋಮವಾರ ಸುಪ್ರೀಂಕೋರ್ಟ್‌ಗೆ ಹೇಳಿದ್ದಾರೆ. ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಬಿ.ಆರ್ ಗವಾಯಿ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿತು. ಇದನ್ನೂ ಓದಿ: ರಾಜ್ಯ ಕ್ಯಾಂಪೇನ್‍ಗೆ ಪ್ರಿಯಾಂಕಾ ಗಾಂಧಿ- ಬೆಂಗಳೂರು, ಚಿತ್ರದುರ್ಗದಲ್ಲಿ ಪ್ರಚಾರ
Advertisement