ನ್ಯೂಯಾರ್ಕ್: ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ಮುಂದೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಹಮಾಸ್ (Hamas) ಬಂಡುಕೋರರಿಗೆ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಎಚ್ಚರಿಕೆ ನೀಡಿದ್ದಾರೆ.
2025ರ ಜ.20ರ ಒಳಗಾಗಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು. ಒಂದು ವೇಳೆ ಬಿಡುಗಡೆ ಮಾಡದಿದ್ದರೆ ಮುಂದಿನ ಪರಿಣಾಮ ಎದುರಿಸಬೇಕಾಗುತ್ತೆ. ಮಧ್ಯಪ್ರಾಚ್ಯ ಬಹುದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ವಾರ್ನಿಂಗ್ ನೀಡಿದ್ದಾರೆ. ಟ್ರಂಪ್ ಇಸ್ರೇಲ್‌ಗೆ ಬೆಂಬಲವಾಗಿ ನಿಲ್ಲುವುದಾಗಿ ತಿಳಿಸಿದ್ದಾರೆ. ಬೈಡೆನ್ ಅವರ ಸಾಂದರ್ಭಿಕ ಟೀಕೆಗಳನ್ನು ತ್ಯಜಿಸಲು ಪ್ರತಿಜ್ಞೆ ಮಾಡಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರ | ಭದ್ರತಾ ಪಡೆ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತ್ಯೆ
Advertisement
Advertisement
2023ರ ಅ.7 ರಂದು ಹಮಾಸ್, ಇಸ್ರೇಲ್ ಮೇಲೆ ಅತ್ಯಂತ ಭೀಕರ ದಾಳಿಯನ್ನು ನಡೆಸಿತು. ಈ ದಾಳಿಯಲ್ಲಿ 1,208 ಮಂದಿ ಮೃತಪಟ್ಟರು. ದಾಳಿಯ ಸಂದರ್ಭದಲ್ಲಿ ಉಗ್ರರು 251 ಒತ್ತೆಯಾಳುಗಳನ್ನು ವಶಕ್ಕೆ ಪಡೆದಿದ್ದರು. ಅವರಲ್ಲಿ ಕೆಲವರು ಈಗಾಗಲೇ ಮೃತಪಟ್ಟಿದ್ದಾರೆ. ಆ ಪೈಕಿ 97 ಮಂದಿಯನ್ನು ಇನ್ನೂ ಗಾಜಾದಲ್ಲಿ ಬಂಧಿಸಲಾಗಿದ್ದು, ಇದರಲ್ಲಿ 35 ಮಂದಿ ಸಾವಿಗೀಡಾಗಿದ್ದಾರೆ ಎಂದು ಸೇನೆ ಹೇಳಿದೆ.
Advertisement
Advertisement
ಇಸ್ರೇಲ್‌ನ ಪ್ರತೀಕಾರದ ಅಭಿಯಾನವು ಗಾಜಾದಲ್ಲಿ 44,429 ಜನರ ಸಾವಿಗೆ ಕಾರಣವಾಗಿದೆ ಎಂದು ಪ್ರದೇಶದ ಆರೋಗ್ಯ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: Kerala| ಸಾರಿಗೆ ಬಸ್‌ಗೆ ಕಾರು ಡಿಕ್ಕಿ – ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ, ಇಬ್ಬರು ಗಂಭೀರ