ಉಡುಪಿ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ನಾಳೆ (ಜು.25) ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿಯ (Udupi) ಶಾಲಾ-ಕಾಲೇಜುಗಳಿಗೆ ನಾಳೆ (ಜುಲೈ 25) ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಿರುವ ಹಿನ್ನೆಲೆ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಈ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: 12 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಯಾದಗಿರಿ ಕೋರ್ಟ್‌ನಿಂದ ಐತಿಹಾಸಿಕ ತೀರ್ಪು – 17 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಅಂಗನವಾಡಿಯಿಂದ ದ್ವಿತೀಯ ಪಿಯುಸಿ, ಡಿಪ್ಲೋಮಾ ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ-ಕಾಲೇಜುಗಳಿಗೆ ಶನಿವಾರ ರಜೆ ಘೋಷಿಸಿ ಡಿಸಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿದ್ದಾರೆ.
