ಅಯೋಧ್ಯೆ (ಉತ್ತರ ಪ್ರದೇಶ): ಬಾಲರಾಮನ ಪ್ರಾಣಪ್ರತಿಷ್ಠೆ (Ram lalla Pran Pratishtha) ಸಂಪನ್ನಗೊಂಡಿದ್ದು, ಬರೋಬ್ಬರಿ 500 ವರ್ಷಗಳ ಕಾಯುವಿಕೆಗೆ ಇದೀಗ ಅಂತ್ಯ ಬಿದ್ದಿದೆ.
ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram Mandir) ಮಧ್ಯಾಹ್ನ 12 ಗಂಟೆ 30 ನಿಮಿಷ 32 ಸೆಕೆಂಡ್‌ಗಳ ಮಧ್ಯೆ ಅಭಿಜಿತ್ ಮುಹೂರ್ತದಲ್ಲಿ (ಅಭಿಜಿತ್ʼ ಅಂದ್ರೆ ʼವಿಜಯಶಾಲಿʼ ಎಂದರ್ಥ) ಶಾಸ್ತ್ರೋಕ್ತವಾಗಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನೆರವೇರಿದೆ. ಅರ್ಚಕರು, ಪಂಡಿತರು ಹಾಗೂ ಯಜಮಾನ ಸ್ಥಾನದಲ್ಲಿದ್ದ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಪ್ರಾಣಪ್ರತಿಷ್ಠೆ ನೆರವೇರಿದೆ. ಈ ವೇಳೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಸಿಎಂ ಯೋಗಿ ಆದಿತ್ಯನಾಥ್, ಗುಜರಾತ್ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮೊದಲಾದವರು ಉಪಸ್ಥಿತರಿದ್ದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ
ದೇಶದ ಮೂಲೆ ಮೂಲೆಗಳಿಂದ ಸುಮಾರು 8 ಸಾವಿರಕ್ಕೂ ಅಧಿಕ ಗಣ್ಯರನ್ನ ಆಹ್ವಾನಿಸಲಾಗಿತ್ತು. ಅಂತೆಯೇ ಮುಕೇಶ್ ಅಂಬಾನಿ ಕುಟುಂಬಸ್ಥರು ಸಹ ಈ ಸಂಪನ್ನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಂತಸ ಹಂಚಿಕೊಂಡರು. ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ, ಪತ್ನಿ ನೀತಾ ಅಂಬಾನಿ, ಮಗ ಆಕಾಶ್ ಅಂಬಾನಿ ಮತ್ತು ಸೊಸೆ ಶ್ಲೋಕಾ ಮೆಹ್ತಾ ಕುಟುಂಬ ಸಮೇತರಾಗಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಸರಯೂ ನದಿ ತಟದಲ್ಲಿ ವಿಶೇಷ ದೈವಿಕ ಅನುಭವ ಹಂಚಿಕೊಂಡ ಪಿ.ಟಿ ಉಷಾ
ಪ್ರಾಣಪ್ರತಿಷ್ಠೆ ನೇರವೇರುತ್ತಿದ್ದ ಸಮಯಕ್ಕೆ ಭಾರತೀಯ ವಾಯುಪಡೆಯ (ಐಎಎಫ್) ಹೆಲಿಕಾಪ್ಟರ್‌ಗಳು ಅಯೋಧ್ಯೆಯ ಶ್ರೀ ರಾಮಮಂದಿರ ಆವರಣದಲ್ಲಿ ಹಾಗೂ ರಾಮಮಂದಿರದ ಮೇಲ್ಭಾಗದಲ್ಲಿ ಪುಷ್ಪಾರ್ಚನೆ ಸಲ್ಲಿಸಿದವು. ಈ ವೇಳೆ ರಾಮಭಕ್ತರಿಂದ ʻಜೈ ಶ್ರೀರಾಮ್ʼ ಉದ್ಘೋಷಗಳು ಕೇಳಿಬಂದಿತು. ಸಾವಿರಾರು ಭಕ್ತರಿಂದ ರಾಮನಾಮ ಝೇಂಕಾರ ಇದಕ್ಕೆ ಸಾಕ್ಷಿಯಾಯಿತು. ಇದನ್ನೂ ಓದಿ: ಈ ಭೂಮಿ ಮೇಲಿನ ಅದೃಷ್ಟಶಾಲಿ ವ್ಯಕ್ತಿ ನಾನು: ಅಯೋಧ್ಯೆಯಲ್ಲಿ ಶಿಲ್ಪಿ ಅರುಣ್ ಯೋಗಿರಾಜ್ ಮಾತು
ಪ್ರಾಣಪ್ರತಿಷ್ಠಾಪನೆ ನೆರವೇರುವ ಸಮಯಕ್ಕೆ ದೇಶಾದ್ಯಂತ ರಾಮನ ದೇವಸ್ಥಾನಗಳಲ್ಲಿಯೂ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ದೇಶಾದ್ಯಂತ ವಿವಿಧೆಡೆ ಪ್ರಾಣಪ್ರತಿಷ್ಠೆ ಕಣ್ತುಂಬಿಕೊಳ್ಳಲು ನೇರಪ್ರಸಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಎಕ್ಸ್ ಖಾತೆಯಲ್ಲೂ ಪ್ರಾಣಪ್ರತಿಷ್ಠೆ ಕಾರ್ಯಕ್ರಮವನ್ನು ನೇರಪ್ರಸಾರ ಮಾಡಲಾಯಿತು. ಇದನ್ನೂ ಓದಿ: ಅಯೋಧ್ಯೆಯಲ್ಲಿ ತಾರಾ ದಂಡು: ಭಾಗಿಯಾದವರು ಯಾರೆಲ್ಲ?