ನವದೆಹಲಿ: ಅನಿಲ್ ಅಂಬಾನಿ ನೇತೃತ್ವದ ರಿಲಯನ್ಸ್ ಕಮ್ಯೂನಿಕೇಶನ್ 2ಜಿ ಕರೆ ಸೇವೆಯನ್ನು ಡಿಸೆಂಬರ್ 1ರಿಂದ ಸ್ಥಗಿತಗೊಳಿಸಲು ನಿರ್ಧರಿಸಿದೆ.
ಇನ್ನು ಮುಂದೆ ಕೇವಲ 4ಜಿ ಸೇವೆಯನ್ನು ಮಾತ್ರ ನೀಡಲಾಗುವುದು. 4ಜಿ ಸೇವೆ ಬಳಸುತ್ತಿರುವ ಗ್ರಾಹಕರು ರಿಲಯನ್ಸ್ ಸೇವೆಯನ್ನು ಮುಂದುವರಿಸಬಹುದು ಎಂದು ಹೇಳಿದೆ. 2ಜಿ ಸೇವೆಯನ್ನು ಇನ್ನು ಮುಂದೆ ನೀಡಲು ಸಾಧ್ಯವಿಲ್ಲ. 2ಜಿ ಸೇವೆ ಬೇಕಿದ್ದಲ್ಲಿ ಬೇರೆ ಟೆಲಿಕಾಂ ಕಂಪೆನಿಗೆ ಹೋಗಬಹುದು ಎಂದು ಹೇಳಿದೆ.
Advertisement
ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಇತರ ಕಂಪೆನಿಗಳಿಗೆ ರಿಲಯನ್ಸ್ ಗ್ರಾಹಕರು ನಂಬರ್ ಪೋರ್ಟಿಂಗ್ ಅರ್ಜಿ ಹಾಕಿದರೆ ಪೋರ್ಟಿಂಗ್ ಮನವಿಯನ್ನು ಸ್ವೀಕರಿಸುವಂತೆ ಸೂಚಿಸಿದೆ.
Advertisement
2ಜಿ ಮತ್ತು 4ಜಿ ಸೇವೆಗಳನ್ನು ಒದಗಿಸುತ್ತಿರುವ ರಿಲಯನ್ಸ್ 46 ಸಾವಿರ ಕೋಟಿ ರೂ. ನಷ್ಟದಲ್ಲಿದೆ. ಇತ್ತೀಚೆಗೆ ಏರ್‍ಸೆಲ್ ಕಂಪೆನಿಯನ್ನು ಖರೀದಿಸಲು ರಿಲಯನ್ಸ್ ಪ್ರಯತ್ನ ನಡೆಸಿತ್ತು. ಆದರೆ ಅದರಲ್ಲಿ ಯಶಸ್ವಿಯಾಗಿರಲಿಲ್ಲ.
Advertisement
ಆಂಧ್ರಪ್ರದೇಶ, ಹರ್ಯಾಣ, ಮಹಾರಾಷ್ಟ್ರ, ಉತ್ತಪ್ರದೇಶ ಪೂರ್ವ ಮತ್ತು ಪಶ್ಚಿಮ, ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳದಲ್ಲಿ 2ಜಿ ಮತ್ತು 4ಜಿ ಸೇವೆ ಯನ್ನು ರಿಲಯನ್ಸ್ ನೀಡುತ್ತಿದೆ.
Advertisement