ಜುಲೈ 3 ರಿಂದ ಜಿಯೋದಿಂದ ಹೊಸ ಅನ್‌ಲಿಮಿಟೆಡ್ ಪ್ಲಾನ್‌

Public TV
2 Min Read
Reliance Jio

ಮುಂಬೈ : ದೂರಸಂಪರ್ಕ ಕ್ಷೇತ್ರದ ಅತಿದೊಡ್ಡ ಕಂಪನಿ ರಿಲಯನ್ಸ್ ಜಿಯೋ (Reliance Jio) ಇನ್ಫೊಕಾಮ್ ಲಿಮಿಟೆಡ್, ಜುಲೈ 3 ರಿಂದ ಜಾರಿಗೆ ಬರುವಂತೆ ಹಲವು ಹೊಸ ಅನಿಯಮಿತ ಯೋಜನೆ (Unlimited Tariff) ಪ್ರಕಟಿಸಿದೆ.

ಹೊಸ ಯೋಜನೆಗಳ ಮೂಲಕ ಕಡಿಮೆ ದರಕ್ಕೆ ಇಂಟರ್ನೆಟ್ ಸೇವೆ (Internet Service) ಒದಗಿಸುವ ತನ್ನ ಬದ್ಧತೆಯನ್ನು ಕಂಪನಿ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಭಾರತದಲ್ಲಿ (India) ತನ್ನ 5ಜಿ ಸಂಪರ್ಕವು ಬಹಳ ವೇಗವಾಗಿ ಬೆಳೆಯುತ್ತಿದ್ದು 85% ಪ್ರದೇಶಗಳಿಗೆ ತಲುಪಿದೆ ಎಂದು ತಿಳಿಸಿದೆ.

ತಿಂಗಳ ಯೋಜನೆ 189 ರೂ.ಗೆ 2ಜಿಬಿ ಇದ್ದು ವಾರ್ಷಿಕ ಯೋಜನೆ 3,599 ರೂ. ದಿನಕ್ಕೆ 2.5 ಜಿಬಿ ಡೇಟಾ ಸಿಗಲಿದೆ. ದಿನಕ್ಕೆ 2 ಜಿಬಿ ಮತ್ತು ಅದಕ್ಕಿಂತ ಹೆಚ್ಚಿನ 5ಜಿ ಡೇಟಾದ ಎಲ್ಲಾ ಯೋಜನೆಗಳನ್ನೂ ಇದು ಒಳಗೊಂಡಿದೆ.

Reliance Jio mukesh ambani akash ambani 2

ಅನಿಯಮಿತ 5ಜಿ ಡೇಟಾ ಸೇವೆಯು ದಿನಕ್ಕೆ 2 ಜಿಬಿ ಅಥವಾ ಅದಕ್ಕಿಂತ ಹೆಚ್ಚಿನದ್ದಕ್ಕೆ ಅನ್ವಯಿಸುತ್ತದೆ ಎಂದು ಕಂಪನಿ ತಿಳಿಸಿದೆ. ಇದನ್ನೂ ಓದಿ: ಡೇಟಾ ಟ್ರಾಫಿಕ್‌- ಚೀನಾ ಕಂಪನಿ ಹಿಂದಿಕ್ಕಿದ ರಿಲಯನ್ಸ್‌

ಗರಿಷ್ಠ ಗುಣಮಟ್ಟದ, ಕೈಗೆಟಕುವ ಇಂಟರ್ನೆಟ್ ಸೌಲಭ್ಯವು ಡಿಜಿಟಲ್ ಇಂಡಿಯಾದ ಬೆನ್ನೆಲುಬಾಗಿದೆ. ಇದಕ್ಕೆ ಹೆಚ್ಚಿನ ಕೊಡುಗೆ ನೀಡುತ್ತಿರುವುದಕ್ಕೆ ಜಿಯೋ ಹೆಮ್ಮೆಪಡುತ್ತದೆ. ನಮ್ಮ ದೇಶ ಮತ್ತು ಗ್ರಾಹಕರು ಕಂಪನಿಯ ಆದ್ಯತೆಯಾಗಿದೆ. ಭಾರತಕ್ಕಾಗಿ ಹೂಡಿಕೆ ಮಾಡುವುದನ್ನು ಕಂಪನಿ ಮುಂದುವರಿಸಲಿದೆ ಎಂದು ರಿಲಯನ್ಸ್ ಜಿಯೋ ಅಧ್ಯಕ್ಷ ಆಕಾಶ್ ಎಂ. ಅಂಬಾನಿ (Akash Ambani) ಹೇಳಿದರು.

ದೇಶದಲ್ಲಿ ಡೇಟಾ ಬಳಕೆ ಮತ್ತು ಸ್ಮಾರ್ಟ್‌ಫೋನ್ ಬಳಕೆ ಹೆಚ್ಚಿಸಲು ಜಿಯೋ ಕಂಪನಿಯು ಮಹತ್ವದ ಕೊಡುಗೆ ನೀಡುತ್ತಿದೆ. ಕಂಪನಿಯು ದೂರಸಂಪರ್ಕ ಕ್ಷೇತ್ರಕ್ಕೆ ಕಾಲಿಟ್ಟಿದ್ದರಿಂದ ಪ್ರತಿಸ್ಪರ್ಧಿ ಕಂಪನಿಗಳು ರಿಚಾರ್ಜ್ ದರ ತಗ್ಗಿಸುವಂತೆ ಮತ್ತು ಡೇಟಾ ಕೊಡುಗೆಯಲ್ಲಿ ಸುಧಾರಣೆ ತರುವಂತೆ ಆಗಿದೆ.

jio 5g

ಎರಡು ಹೊಸ ಆ್ಯಪ್: ಜಿಯೋ ಕಂಪನಿಯು ತನ್ನ ಡಿಜಿಟಲ್ ಸೌಲಭ್ಯದ ವ್ಯಾಪ್ತಿಯನ್ನೂ ವಿಸ್ತರಿಸಿದೆ. ಜಿಯೋ ಸೇಫ್ (Jio Safe) ಮತ್ತು ಜಿಯೋ ಟ್ರಾನ್ಸ್‌ಲೇಟ್ (Jio Translate) ಎಂಬ ಎರಡು ಅಪ್ಲಿಕೇಷನ್‌ಗಳನ್ನು ಬಿಡುಗಡೆ ಮಾಡಿದೆ. ಜಿಯೋ ಸೇಫ್ ತಿಂಗಳ ದರ 199 ರೂ. ಇದ್ದು, ಸುರಕ್ಷಿತ ಕರೆ, ಮೆಸೇಜಿಂಗ್ ಮತ್ತು ಫೈಲ್ ಟ್ರಾನ್ಸ್‌ಫರ್ ಸೇವೆಯನ್ನು ಒದಗಿಸುತ್ತದೆ. ‌ಜಿಯೋ ಟ್ರಾನ್ಸ್‌ಲೇಟ್ ಆ್ಯಪ್‌ನಲ್ಲಿ ತಿಂಗಳಿಗೆ 99 ರೂ. ನೀಡಿದರೆ, ಕೃತಕ ಬಿದ್ದಿಮತ್ತೆಯಿಂದ ಚಾಲಿತ ಆ್ಯಪ್ ವಾಯ್ಸ್, ಕಾಲ್, ಮೆಸೇಜ್, ಟೆಕ್ಸ್ಟ್ ಮತ್ತು ಇಮೇಜ್‌ಗಳನ್ನು ಟ್ರಾನ್ಸ್‌ಲೇಟ್ ಮಾಡಬಲ್ಲದು. ಜಿಯೋ ಬಳಕೆದಾರರಿಗೆ ಒಂದು ವರ್ಷದವೆರೆಗೆ ಈ ಎರಡೂ ಆ್ಯಪ್‌ಗಳು ಉಚಿತವಾಗಿರಲಿವೆ.

Share This Article