ಮುಂಬೈ: ರಿಲಯನ್ಸ್ ಜಿಯೋ ಎಲ್‍ಟಿಇ ಟೆಕ್ನಾಲಜಿ ಸಪೋರ್ಟ್ ಮಾಡುವ ಫೀಚರ್ ಫೋನ್ ತಯಾರಿಸುತ್ತಿರುವ ವಿಚಾರ ನಿಮಗೆ ಗೊತ್ತೆ ಇದೆ. ಈಗ ಗೂಗಲ್ ಜೊತೆಗೂಡಿ ಆಂಡ್ರಾಯ್ಡ್ ಫೋನ್ ತಯಾರಿಸಲು ಮುಂದಾಗಿದೆ.
ಈ ವರ್ಷದ ಜನವರಿಯಲ್ಲಿ ಗೂಗಲ್ ಸಿಇಒ ಸುಂದರ್ ಪಿಚೈ ಭಾರತಕ್ಕೆ ಬಂದಿದ್ದಾಗ ಕಡಿಮೆ ಬೆಲೆಯಲ್ಲಿ ಆಂಡ್ರಾಯ್ಡ್ ಫೋನ್ ತಯಾರಿಸಲಾಗುವುದು ಎಂದು ತಿಳಿಸಿದ್ದರು. ಭಾರತಕ್ಕೆ 30 ಡಾಲರ್(2 ಸಾವಿರ ರೂ.) ಬೆಲೆಯ ಆಂಡ್ರಾಯ್ಡ್ ಫೋನ್ ಅಗತ್ಯವಿದೆ ಎಂದು ಹೇಳಿದ್ದರು. ಇದಕ್ಕೆ ಪೂರಕ ಎಂಬಂತೆ ಜಿಯೋ ಕಂಪೆನಿ ಮತ್ತು ಗೂಗಲ್ ಜೊತೆಗೂಡಿ ಆಂಡ್ರಾಯ್ಡ್ ಫೋನ್ ತಯಾರಿಸಲಿದೆ ಎಂದು ಟೆಕ್ ಮೂಲಗಳ ಮಾಹಿತಿಯನ್ನು ಆಧರಿಸಿ ಮಾಧ್ಯಮವೊಂದು ವರದಿ ಮಾಡಿದೆ.
Advertisement
ಈ ಫೋನಿನಲ್ಲಿ ಪ್ರಿಲೋಡೆಡ್ ಜಿಯೋ ಅಪ್ಲಿಕೇಶನ್ ಇರಲಿದ್ದು, ಈ ವರ್ಷದ ಅಂತ್ಯಕ್ಕೆ ಈ ಫೋನ್ ಮಾರುಕಟ್ಟೆಗೆ ಬಿಡುಗಡೆಯಾಗುವ ಸಾಧ್ಯತೆಯಿದೆ. ಅಷ್ಟೇ ಅಲ್ಲದೇ ಗೂಗಲ್ ಮತ್ತು ಜಿಯೋ ಸ್ಮಾರ್ಟ್ ಟಿವಿಗಾಗಿ ವಿಶೇಷವಾಗಿ ಅಪ್ಲಿಕೇಶನ್ ತಯಾರು ಮಾಡಲಿದೆ ಎಂದು ವರದಿ ತಿಳಿಸಿದೆ.
Advertisement
ಈ ಸುದ್ದಿಗೆ ಸಂಬಂಧಿಸಿದಂತೆ ಮಾಧ್ಯಮಗಳು ಗೂಗಲ್ ಮತ್ತು ರಿಲಯನ್ಸ್ ಜಿಯೋ ಸಂಪರ್ಕಿಸಿದ್ದು, ಅಲ್ಲಿಂದ ಯಾವುದೇ ಪ್ರತ್ರಿಕಿಯೆ ಬಂದಿಲ್ಲ.
Advertisement
ಗೂಗಲ್ ಈ ಹಿಂದೆ ಏಷ್ಯಾ, ಆಫ್ರಿಕಾ ಖಂಡದಲ್ಲಿ ಮಾರುಕಟ್ಟೆ ವಿಸ್ತರಿಸಲು ಆಂಡ್ರಾಯ್ಡ್ ಓಎಸ್ ಆಧಾರಿತ ಆಂಡ್ರಾಯ್ಡ್ ಒನ್ ಫೋನ್‍ಗಳನ್ನು ಬಿಡುಗಡೆ ಮಾಡಿತ್ತು. ಈ ಫೋನ್‍ಗಳ ಬೆಲೆ ಕಡಿಮೆ ಇದ್ದು, ಗೂಗಲ್ ಮಾನದಂಡಕ್ಕೆ ಅನುಗುಣವಾಗಿ ಹಾರ್ಡ್‍ವೇರ್ ಮತ್ತು ಸಾಫ್ಟ್ ವೇರ್‍ಗಳನ್ನು ಹೊಂದಿದ ಈ ಫೋನ್‍ಗಳನ್ನು ಕಂಪೆನಿಗಳು ತಯಾರಿಸಬೇಕಿತ್ತು. ವಿಶ್ವದಲ್ಲೇ ಮೊದಲ ಬಾರಿಗೆ 2014ರಲ್ಲಿ ಭಾರತದಲ್ಲಿ ಆಂಡ್ರಾಯ್ಡ್ ಓನ್ ಫೋನ್‍ಗಳು ಬಿಡುಗಡೆಯಾಗಿತ್ತು. ಭಾರತದಲ್ಲಿ ಕಾರ್ಬನ್, ಮೈಕ್ರೋಮ್ಯಾಕ್ಸ್, ಸ್ಪೈಸ್ ಕಂಪೆನಿಗಳು ಆಂಡ್ರಾಯ್ಡ್ ಓನ್ ಅಡಿಯಲ್ಲಿ ಫೋನ್ ತಯಾರಿಸಿತ್ತು.
Advertisement
ಜಿಯೋ 999 ರೂ.ನಿಂದ ಆರಂಭವಾಗಿ 1500 ರೂ ಒಳಗಡೆ ಕೀ ಪ್ಯಾಡ್ ಹೊಂದಿರುವ ಎಲ್‍ಟಿಇ ತಂತ್ರಜ್ಞಾನಕ್ಕೆ ಸಪೋರ್ಟ್ ಮಾಡುವ ಫೀಚರ್ ಫೋನ್‍ಗಳನ್ನು ಬಿಡುಗಡೆ ಮಾಡಲಿದೆ ಎನ್ನುವ ವರದಿ ಈ ಹಿಂದೆ ಮಾಧ್ಯಮಗಳಲ್ಲಿ ಪ್ರಕಟಗೊಂಡಿತ್ತು. ಪ್ರಸ್ತುತ ಜಿಯೋ ಎಲ್‍ವೈಎಫ್ ಹೆಸರಿನಲ್ಲಿ ಆಂಡ್ರಯ್ಡ್ ಫೋನ್‍ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದೆ.
ಇದನ್ನೂ ಓದಿ: ಪ್ರೈಮ್ ಗ್ರಾಹಕರಿಗೆ ಗುಡ್‍ನ್ಯೂಸ್: ಜಿಯೋದಿಂದ ಈಗ ಬೈ ಒನ್ ಗೆಟ್ ಒನ್ ಡೇಟಾ ಆಫರ್