ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ನ 41ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ, ಮುಖೇಶ್ ಅಂಬಾನಿ ಅವರ ಮಗಳು ಇಶಾ ಅಂಬಾನಿ ಮತ್ತು ಮಗ ಆಕಾಶ್ ಅಂಬಾನಿಯವರು ನೂತನ ಜಿಯೋ ಫೋನ್- 2 ಅನ್ನು ಮಾರುಕಟ್ಟೆಗೆ ಪರಿಚಯಿಸಿದ್ದಾರೆ.
ಈ ಬಾರಿ ಜಿಯೋ ಫೋನ್- 2 ನಲ್ಲಿ ಹಲವಾರು ಹೊಸ ವೈಶಿಷ್ಟ್ಯಗಳನ್ನು ಸೇರಿಸಲಾಗಿದೆ. ಫೇಸ್ಬುಕ್, ವಾಟ್ಸಪ್ ಮತ್ತು ಯೂಟ್ಯೂಬ್ ನಂತಹ ಅತ್ಯಂತ ಜನಪ್ರಿಯ ಅಪ್ಲಿಕೇಶನ್ ಗಳನ್ನು ಒಳಗೊಂಡಿದೆ.
Advertisement
ರಿಲಯನ್ಸ್ ಕಂಪನಿಯ ನೂತನ ಜಿಯೋ ಫೋನ್-2, ಆಗಸ್ಟ್ 15 ರಿಂದ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ. ಇದರ ಪ್ರಾರಂಭಿಕ ಬೆಲೆ 2,999 ರೂಪಾಯಿಗಳಾಗಿದೆ. ಇದಲ್ಲದೆ ಕಂಪನಿಯು ತನ್ನ ಹಳೆಯ ಜಿಯೋ ಫೋನ್ ಗ್ರಾಹಕರನ್ನು ಆಕರ್ಷಿಸುವ ಸಲುವಾಗಿ ಅವರಿಗಾಗಿಯೇ ನೂತನ ಕೊಡುಗೆಯನ್ನು ನೀಡಿದೆ. ಈ ಕೊಡುಗೆಯಲ್ಲಿ ಗ್ರಾಹಕರು ತಮ್ಮ ಬಳಿ ಇರುವ ಹಳೆಯ ಜಿಯೋ ಫೋನನ್ನು ಕಂಪೆನಿಗೆ ಹಿಂದುರಿಗಿಸಿ 501 ರೂಪಾಯಿಯನ್ನು ಮಾತ್ರ ನೀಡಿ ಹೊಸ ಜಿಯೋ ಫೋನ್-2 ಖರೀದಿಸಬಹುದಾಗಿದೆ.
Advertisement
Advertisement
ಜಿಯೋ ಫೋನ್-2ರ ಗುಣವೈಶಿಷ್ಟ್ಯಗಳು:
* ಕ್ವರ್ಟಿ ಕೀ ಪ್ಯಾಡ್ ನ 2.4 ಇಂಚ್ ಸ್ಕೀನ್ ಡಿಸ್ಪ್ಲೇ (240X340 ಪಿಕ್ಸೆಲ್)
* ಜಿಯೋ ಫೋನ್’ನ ಧ್ವನಿ ಆಜ್ಞೆ (ವಾಯ್ಸ್ ಕಮ್ಯಾಂಡ್) ವೈಶಿಷ್ಟ್ಯವನ್ನು
* ಫೇಸ್ಬುಕ್, ವಾಟ್ಸಪ್, ಯುಟ್ಯೂಬ್, ವೈ-ಫೈ ಮತ್ತು ಜಿಪಿಎಸ್ ಸೌಲಭ್ಯ.
* 512 MB RAM 4 ಜಿಬಿ ಆಂತರಿಕ ಮೆಮೊರಿ ಹೊಂದಿದೆ. ಮೆಮೊರಿ ಕಾರ್ಡ್ ಮೂಲಕ 128 ಜಿಬಿವರೆಗೆ ವಿಸ್ತರಿಸಬಹುದು.
* ಹಿಂದುಗಡೆ 2 ಮೆಗಾಪಿಕ್ಸೆಲ್ ಕ್ಯಾಮೆರಾ ಮುಂದುಗಡೆ 0.3 ಮೆಗಾಪಿಕ್ಸೆಲ್(ವಿಜಿಎ) ಕ್ಯಾಮೆರಾ.
* ಫೋನ್ ಡ್ಯೂಯಲ್ ಸಿಮ್ ವೈಶಿಷ್ಟ್ಯವನ್ನು ಹಾಗೂ ಲೌಡ್ ಮೆನೋ ಸ್ಪೀಕರ್
* 2000 ಎಂಎಎಚ್ ಬ್ಯಾಟರಿ ಸಾಮರ್ಥ್ಯ.
Advertisement
ಜಿಯೋ ಮೊದಲ ಫೋನಿನಲ್ಲಿ ನೀಡಿದಂತೆ ಎಫ್‍ಎಂ ರೇಡಿಯೋ, ವೈಫೈ, ಎನ್‍ಎಫ್‍ಸಿ, ಬ್ಲೂಟೂತ್, ಜಿಪಿಎಸ್ ಹೊಂದಿದ್ದು, ಕನ್ನಡ ಸೇರಿದಂತೆ ದೇಶದ 22 ಭಾಷೆಗಳನ್ನು ಈ ಫೋನ್ ಸಪೋರ್ಟ್ ಮಾಡುತ್ತದೆ. ಮೈ ಜಿಯೋ, ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಚಾಟ್, ಜಿಯೋ ಮ್ಯೂಸಿಕ್, ಜಿಯೋ ಎಕ್ಸ್ ಪ್ರೆಸ್ ನ್ಯೂಸ್ ಅಪ್ಲಿಕೇಶನ್‍ಗಳು ಪ್ರಿಲೋಡೆಡ್ ಆಗಿ ಇರಲಿದೆ.
ಜಿಯೋ ಫೋನ್ -1ರ ಗುಣವೈಶಿಷ್ಟ್ಯ ಏನಿತ್ತು?
ಸಿಂಗಲ್ ನ್ಯಾನೋ ಸಿಮ್ 2.4 ಇಂಚಿನ (240X320 ಪಿಕ್ಸೆಲ್), ಟಾರ್ಚ್ ಲೈಟ್ ಹೊಂದಿರುವ ಈ ಫೀಚರ್ ಫೋನ್ ಕೈ ಆಪರೇಟಿಂಗ್ ಸಿಸ್ಟಂ( KaiOS ) ನೀಡಿತ್ತು.
1.2 GHz ಡ್ಯುಯಲ್ ಕೋರ್ ಎಸ್‍ಪಿಆರ್ಡಿ ಪ್ರೋಸೆಸರ್ ಹೊಂದಿರುವ ಈ ಫೋನ್ ಮಲಿ 400 ಗ್ರಾಫಿಕ್ಸ್ ಪ್ರೋಸೆಸರ್ ಇದೆ. 2000 ಎಂಎಎಚ್ ಲಿಪೋ ಬ್ಯಾಟರಿ ಹೊಂದಿರುವ ಈ ಫೋನ್ 4ಜಿಬಿ ಆಂತರಿಕ ಮೆಮೊರಿ, 128 ಜಿಬಿವರೆಗೆ ಮೆಮೊರಿ ವಿಸ್ತರಿಸುವ ಸಾಮರ್ಥ್ಯ, ಹಿಂದುಗಡೆ 2 ಎಂಪಿ ಕ್ಯಾಮೆರಾ, ಮುಂದುಗಡೆ ವಿಜಿಎ ಕ್ಯಾಮೆರಾ ಇದ್ದು, ವಿಡಿಯೋ ರೆಕಾರ್ಡಿಂಗ್ ನೀಡಿತ್ತು.