ಗಾಂಧಿನಗರ: ವನ್‍ತಾರಾ (Vantara) ಪ್ರಾಣಿ ಸಂರಕ್ಷಣಾ ಕೇಂದ್ರದ ಕುರಿತು ಎಸ್‍ಐಟಿ (SIT) ತನಿಖೆಗೆ ಸುಪ್ರೀಂ ಕೋರ್ಟ್ (Supreme Court) ಆದೇಶ ಮಾಡಿದೆ.
ರಿಲಯನ್ಸ್ ಫೌಂಡೇಶನ್ ನಡೆಸುತ್ತಿರುವ ಗುಜರಾತ್‍ನ ಜಾಮ್‍ನಗರದಲ್ಲಿರುವ ವಂತಾರಾ ಪ್ರಾಣಿಗಳ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರದ ವ್ಯವಹಾರಗಳ ಕುರಿತ ತನಿಖೆಗೆ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ಚೆಲಮೇಶ್ವರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಆದೇಶಿಸಿದೆ. ಸಿಆರ್ ಜಯಾ ಸುಕಿನ್ ಎಂಬ ವಕೀಲರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಂಕಜ್ ಮಿಥಲ್ ಮತ್ತು ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ನೇತೃತ್ವದ ಸುಪ್ರೀಂ ಕೋರ್ಟ್‍ನ ದ್ವಿಸದಸ್ಯ ಪೀಠ ಈ ಆದೇಶವನ್ನು ಹೊರಡಿಸಿದೆ. ಇದನ್ನೂ ಓದಿ: ಮೋದಿ ಪದವಿಯ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್
ಸೆಪ್ಟೆಂಬರ್ 12ರೊಳಗೆ ವರದಿ ಸಲ್ಲಿಸುವಂತೆ ಎಸ್‍ಐಟಿ ತಂಡಕ್ಕೆ ಕೋರ್ಟ್ ಸೂಚನೆ ನೀಡಿದೆ. ಭಾರತ ಮತ್ತು ವಿದೇಶಗಳಿಂದ ಪ್ರಾಣಿಗಳನ್ನು, ವಿಶೇಷವಾಗಿ ಆನೆಗಳನ್ನು ತರಿಸುವ ವೇಳೆ ವನ್ಯಜೀವಿ ಸಂರಕ್ಷಣಾ ಕಾಯ್ದೆ ಮತ್ತು ಇತರ ಸಂಬಂಧಿತ ಕಾನೂನುಗಳ ನಿಬಂಧನೆಗಳ ಅನುಸರಣೆ ಬಗ್ಗೆ ತನಿಖೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿ ತಿಳಿಸಿದೆ.
ಎಸ್‍ಐಟಿ ರಚನೆಯನ್ನು ಸ್ವಾಗತಿಸಿರುವ ವನ್‍ತಾರಾ, ಸುಪ್ರೀಂ ಕೋರ್ಟ್ ಆದೇಶವನ್ನು ನಾವು ಅತ್ಯಂತ ಗೌರವದಿಂದ ಸ್ವೀಕರಿಸುತ್ತೇವೆ ಎಂದಿದೆ. ಇದನ್ನೂ ಓದಿ: ಅಂಗವಿಕಲರ ಬಗ್ಗೆ ತಮಾಷೆ – ಸ್ಟ್ಯಾಂಡ್ ಅಪ್ ಕಾಮಿಡಿಯನ್‌ಗಳಿಗೆ ಸುಪ್ರೀಂ ತರಾಟೆ