Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಣ್ಣ ವರ್ತಕರಿಗೆ ರಿಲೀಫ್‌ | 3 ವರ್ಷದ ಬಾಕಿ ತೆರಿಗೆ ವಸೂಲಿ ಮಾಡಲ್ಲ: ಸಿದ್ದರಾಮಯ್ಯ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಣ್ಣ ವರ್ತಕರಿಗೆ ರಿಲೀಫ್‌ | 3 ವರ್ಷದ ಬಾಕಿ ತೆರಿಗೆ ವಸೂಲಿ ಮಾಡಲ್ಲ: ಸಿದ್ದರಾಮಯ್ಯ ಘೋಷಣೆ

Districts

ಸಣ್ಣ ವರ್ತಕರಿಗೆ ರಿಲೀಫ್‌ | 3 ವರ್ಷದ ಬಾಕಿ ತೆರಿಗೆ ವಸೂಲಿ ಮಾಡಲ್ಲ: ಸಿದ್ದರಾಮಯ್ಯ ಘೋಷಣೆ

Public TV
Last updated: July 23, 2025 5:23 pm
Public TV
Share
2 Min Read
siddaramaiah 1 3
SHARE

ಬೆಂಗಳೂರು: ಜಿಎಸ್‌ಟಿ ನೋಟಿಸ್‌ (GST)  ಪಡೆದ ವರ್ತಕರಿಂದ 3 ವರ್ಷದ ತೆರಿಗೆ ಬಾಕಿ ವಸೂಲಾತಿ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಘೋಷಣೆ ಮಾಡಿದ್ದಾರೆ.

40 ಲಕ್ಷ ರೂ. ವ್ಯವಹಾರ ನಡೆಸಿದ್ದಕ್ಕೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯ ವರ್ತಕರಿಗೆ ನೋಟಿಸ್‌ ಜಾರಿ ಮಾಡಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಸಿದ್ದರಾಮಯ್ಯ ಇಂದು ತೆರಿಗೆ ಇಲಾಖೆಯ ಅಧಿಕಾರಿಗಳು, ವರ್ತಕ ಸಂಘದ ಪ್ರತಿನಿಧಿಗಳ ಜೊತೆ ಸಭೆ ನಡೆಸಿದರು.

ಸಭೆಯ ಬಳಿಕ ಮಾತನಾಡಿ, ನೋಟಿಸ್‌ ನೀಡಿದ ವರ್ತಕರಿಂದ ಬಾಕಿ ತೆರಿಗೆಯನ್ನು ವಸೂಲಿ ಮಾಡುವುದಿಲ್ಲ. ಆದರೆ ವರ್ತಕರು ನೋಂದಣಿ ಮಾಡಿಕೊಳ್ಳಬೇಕು. ಈಗ ಕೊಟ್ಟಿರುವ ನೋಟೀಸ್ ಮೇಲೆ ವಸೂಲಾತಿ, ಕ್ರಮ ಕೈಗೊಳ್ಳುವುದಿಲ್ಲ ಎಂದು ಹೇಳಿದರು.

ಮೂರು ವರ್ಷಗಳ ಬಾಕಿ ವಸೂಲಾತಿಗೆ ನೋಟಿಸ್ ಕೊಟ್ಟಿದ್ರು, ಅದನ್ನ ಮುಂದುವರಿಸುವುದಿಲ್ಲ. ಕಡ್ಡಾಯ ಜಿಎಸ್‌ಟಿ ನೋಂದಣಿಗೆ ಒಪ್ಪಿದ್ದಾರೆ. ಜಿಎಸ್‌ಟಿ ಗೊಂದಲಕ್ಕೆ ಸಹಾಯವಾಣಿ ತೆರೆಯುತ್ತೇವೆ. ಜಿಎಸ್‌ಟಿ ಬಗ್ಗೆ ಜಾಗೃತಿ ಕಾರ್ಯಕ್ರಮಗಳು ಮಾಡಲು ತೀರ್ಮಾನ ಮಾಡಿದ್ದೇವೆ. ವರ್ತಕರು ಯುಪಿಐ ಬಳಸಲು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು.  ಇದನ್ನೂ ಓದಿ: ಕಲಾಸಿಪಾಳ್ಯ ಬಿಎಂಟಿಸಿ ಬಸ್‌ಸ್ಟಾಪ್‌ನಲ್ಲಿ 6 ಜಿಲೆಟಿನ್ ಕಡ್ಡಿಗಳು ಪತ್ತೆ

 

ಸಿಎಂ ಹೇಳಿದ್ದೇನು?
ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್‌ಟಿ ನೋಟಿಸ್‌ ಕುರಿತು ಗೊಂದಲ ಇದೆ. ಸಾಲದ ಮೊತ್ತ ಕೂಡಾ ಇದರಲ್ಲಿ ಸೇರಿಕೊಂಡಿದೆ. ವೈಯಕ್ತಿಕ ವಹಿವಾಟು ಹಣ ಸಹ ಇದರಲ್ಲಿ ಸೇರಿದೆ. ಜಿಎಸ್‌ಟಿ ನೋಟಿಸ್‌ ನೀಡುವುದು ತಪ್ಪಲ್ಲ. ಆದರೆ ವ್ಯಾಪಾರಿಗಳಿಗೆ ಪರಿಹಾರ ತೆರಿಗೆ ಪಾವತಿಸಲು ಅವಕಾಶ ನೀಡಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡದೆ, ವ್ಯಾಪಾರಿಗಳು ನೇರವಾಗಿ ಇಲಾಖೆ ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಕೆಲವು ಪ್ರತಿನಿಧಿಗಳು ಮನವಿ ಮಾಡಿದ್ದಾರೆ.

ಯುಪಿಐ ಅಡಿ 40 ಲಕ್ಷ ರೂ. ಅಧಿಕ ವಹಿವಾಟು ಮಾಡಿರುವವರಿಗೆ ಮಾತ್ರ ಜಿಎಸ್ಟಿ ನೊಟೀಸ್ ನೀಡಲಾಗಿದೆ. ಆರಂಭದಲ್ಲಿ ಜಿಎಸ್‌ಟಿ ನೊಂದಣಿ ಮಾಡುವಂತೆ ನೋಟಿಸ್ ನೀಡಲಾಗಿತ್ತು. ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ. ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು.

ನೋಟಿಸ್ ನೀಡಲಾಗಿರುವ ಹಳೆಯ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಅದನ್ನು ಸರ್ಕಾರ ವಸೂಲು ಮಾಡುವುದಿಲ್ಲ. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್ಟಿ ನೋಂದಣಿ ಮಾಡಬೇಕು. ಯುಪಿಐ ವಹಿವಾಟು ಕೈಬಿಟ್ಟರೆ ವಹಿವಾಟಿನ ಮೇಲೆ ಪರಿಣಾಮ ಬೀರಲಿದೆ. ರಾಜ್ಯದಲ್ಲಿ ಕೇವಲ 9 ಸಾವಿರ ವ್ಯಾಪಾರಿಗಳಿಗೆ ಕಳೆದ 2-3 ವರ್ಷಗಳ ಅವಧಿಗೆ ಸಂಬಂಧಿಸಿದಂತೆ 18ಸಾವಿರ ನೋಟಿಸ್‌ ಜಾರಿಗೊಳಿಸಲಾಗಿದೆ.

ವ್ಯಾಪಾರ ವಹಿವಾಟುಗಳನ್ನು ಕಾನೂನು ಬದ್ಧವಾಗಿ ಸರ್ಕಾರ ಎಲ್ಲಾ ನೆರವು ನೀಡಲಿದೆ. ತೆರಿಗೆ ಸರಿಯಾಗಿ ಪಾವತಿಸಲು ಸಹಕಾರ ನೀಡಲಿದೆ. ವ್ಯಾಪಾರಿಗಳಿಗೆ ತೊಂದರೆ ನೀಡಬೇಕೆಂಬುವುದು ಸರ್ಕಾರದ ಉದ್ದೇಶವಲ್ಲ. ಸರ್ಕಾರ ಸಣ್ಣ ವ್ಯಾಪಾರಿಗಳ ಪರವಾಗಿದೆ.

ಜಿಎಸ್‌ಟಿ ತೆರಿಗೆಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಈ ತೆರಿಗೆ ಸಂಗ್ರಹದಲ್ಲಿ 50% ರಷ್ಟನ್ನು ರಾಜ್ಯಕ್ಕೆ ನೀಡಲಾಗುತ್ತದೆ. ದೇಶದಲ್ಲೇ ಕರ್ನಾಟಕ ಜಿಎಸ್ಟಿ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ.

ಸರ್ಕಾರ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಿದ್ದು, ಯಾರಿಗೂ ತೊಂದರೆಯಾಗದಂತೆ ಖಾತ್ರಿಪಡಿಸಲಾಗುವುದು. ವ್ಯಾಪಾರಿಗಳಿಗೆ ನೆರವು ನೀಡಲು ಈಗಲೇ ಸಹಾಯವಾಣಿ ಇದ್ದು, ಇದನ್ನು ಪರಿಣಾಮಕಾರಿಯಾಗಿಸಬೇಕು. ವ್ಯಾಪಾರ ವಹಿವಾಟು ಬಂದ್‌ಗೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ ಎಂದು ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ. ಈ ಕುರಿತಾಗಿ ನಡೆಸಲು ನಿರ್ಧರಿಸಿದ್ದ ಎಲ್ಲಾ ರೀತಿಯ ಪ್ರತಿಭಟನೆಗಳನ್ನು ಕೈಬಿಡಲಾಗುವುದು ಎಂದು ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಿಳಿಸಿದರು.

TAGGED:gstkarnatakasiddaramaiahಜಿಎಸ್‍ಟಿತೆರಿಗೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
7 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
7 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
8 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
8 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
8 hours ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?