ಮಡಿಕೇರಿ: ಕೊಡಗಿನ ಜನರಿಗೆ ಸ್ವಲ್ಪ ನಿರಾಳರಾಗಿದ್ದು, ಮಹಾಮಳೆಯ ತೀವ್ರತೆಯ ಪ್ರಮಾಣ ಕಡಿಮೆಯಾಗಿದೆ.
ಶುಕ್ರವಾರ ಬೆಳಗ್ಗೆಯಿಂದ ಇಂದು ಶನಿವಾರದವರೆಗೆ 28 ಮಿಮೀ ಮಳೆಯಾಗಿದೆ. ಇದು ಸರಾಸರಿ ಮಳೆಯ ಪ್ರಮಾಣಯಾಗಿದ್ದು, ಮೊನ್ನೆ 100 ಮಿಮೀ ಮಳೆಯಾಗಿತ್ತು. ಸದ್ಯ ಈಗ ಶೇ. 70ರಷ್ಟು ಮಳೆಯ ಪ್ರಮಾಣ ಕಡಿಮೆಯಾಗಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಮಳೆಯ ತೀವ್ರತೆ ಕಡಿಮೆಯಾಗುತ್ತೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.
Advertisement
Advertisement
ಇತ್ತ ಚಿಕ್ಕಮಗಳೂರಿನಲ್ಲಿ ಮಳೆ ನಿಂತ ಮೇಲೆ ಮಲೆನಾಡಿನ ಭಾರೀ ಗಾಳಿ ಬೀಸುತ್ತಿದೆ. ಕೊಪ್ಪ ತಾಲೂಕಿನ ಹೇರೂರು ಗ್ರಾಮದಲ್ಲಿ ತಡೆಗೋಡೆ ಸಮೇತ ಧರೆ ಕುಸಿದು ಬಿದಿದ್ದೆ. ಅಲ್ಲದೇ ರಸ್ತೆ ಪಕ್ಕದಲ್ಲೇ ಭೂ ಕುಸಿತವಾಗಿದೆ. ಭೂ ಕುಸಿತವಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಭಯದಲ್ಲಿ ಚಲಿಸುತ್ತಿದ್ದಾರೆ.
Advertisement
ದೂಬಳ ಕೈಮರದಿಂದ ದೂಬಳ ಎಸ್ಟೇಟ್ ನ ರಸ್ತೆ ಇದ್ದಾಗಿದ್ದು, ಐದಕ್ಕೂ ಅಧಿಕ ಗ್ರಾಮಗಳಿಗೆ ಮಾರ್ಗ ಸಂಪರ್ಕ ಕಲ್ಪಿಸುತ್ತದೆ. ರಸ್ತೆ ಪಕ್ಕದಲ್ಲೇ ಕುಸಿದಿರೋದ್ರಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಅಲ್ಲದೇ ಸಿಮೆಂಟ್ ತಡೆಗೋಡೆ ಇಪ್ಪತ್ತು ಅಡಿಯಾಚೆಗೆ ಕುಸಿದು ಹೋಗಿದೆ. ಸಿಮೆಂಟ್ ತಡೆಗೋಡೆ ದಾರಿಗಿಂತ ಕೆಳಭಾಗಕ್ಕೆ ಕುಸಿದಿದ್ದು, ಬದಲಿ ಮಾರ್ಗವಿಲ್ಲದ ಕಾರಣ ಜನಸಾಮಾನ್ಯರು ಆತಂಕದಲ್ಲಿದ್ದಾರೆ. ಇದನ್ನೂ ಓದಿ: ಕೊಡಗು ಸಂತ್ರಸ್ತರಿಗೆ ಸಹಾಯ ಮಾಡಿ- ಏನು ಕೊಡಬಹುದು? ಯಾರನ್ನು ಸಂಪರ್ಕಿಸಬಹುದು? ಇಲ್ಲಿದೆ ವಿವರ
Advertisement
ಮಹಾಮಳೆಯಲ್ಲಿ ಸಿಲುಕಿದ್ದ 3 ಸಾವಿರ ಜನರನ್ನು ರಕ್ಷಿಸಲಾಗಿದೆ. ಇನ್ನೂ 600 ಮಂದಿಯ ರಕ್ಷಣೆಯಾಗಬೇಕಿದೆ, ಜಿಲ್ಲೆಯಲ್ಲಿ 31 ಗಂಜಿಕೇಂದ್ರಗಳನ್ನು ತೆರೆಯಲಾಗಿದೆ. ರಕ್ಷಣಾ ತಂಡಗಳಿಂದ ಭರದ ಕಾರ್ಯಾಚರಣೆ ನಡೀತಿದೆ ಅಂತ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಹೇಳಿದ್ದಾರೆ.
ಇಂದು ಸಿಎಂ ಕುಮಾರಸ್ವಾಮಿ ಕೊಡಗು ಜಿಲ್ಲೆಗೆ ಭೇಟಿ ನೀಡಿ ಪರಿಹಾರ ಕಾರ್ಯಾಚರಣೆ ಪರಿಶೀಲನೆ ನಡೆಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ನಂತರ ಕೊಡಗು ಜಿಲ್ಲೆಗೆ ತೆರಳಲಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv