ಬೆಂಗಳೂರು: ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಸಿಬಿಐ (CBI) ತನಿಖೆ ವಹಿಸಿ ಹೊರಡಿಸಿದ್ದ ಆದೇಶ ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಆ ಮೂಲಕ ಡಿ.ಕೆ.ಶಿವಕುಮಾರ್‌ಗೆ (D.K.Shivakumar) ಬಿಗ್ ರಿಲೀಫ್ ಸಿಕ್ಕಿದೆ.
ಬುಧವಾರ ಹೈಕೋರ್ಟ್‌ನಲ್ಲಿ (Karnataka High Court) ಡಿಸಿಎಂ ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ ವಿಚಾರಣೆ ನಡೆಯಿತು. ಸಿಜೆ ಪಿ.ಬಿ.ವರಾಲೆ, ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಲಾಯಿತು. ಇದನ್ನೂ ಓದಿ: ಮೊದಲ ಬಾರಿಗೆ ಶಾಸಕರಾದವರಿಗೆ ನಿಗಮ-ಮಂಡಳಿ ಸ್ಥಾನ ಇಲ್ಲ: ಡಿಕೆಶಿ
Advertisement
Advertisement
ವಿಚಾರಣೆ ವೇಳೆ ಸರ್ಕಾರದ ಆದೇಶವನ್ನು ಎಜಿ ಶಶಿಕಿರಣ್ ಶೆಟ್ಟಿ ಅವರು ಹೈಕೋರ್ಟ್ ಗಮನಕ್ಕೆ ತಂದರು. ಈ ವೇಳೆ ಸಿಬಿಐ ಪರ ಪ್ರಸನ್ನ ಕುಮಾರ್ ಹಾಗೂ ಡಿ.ಕೆ.ಶಿವಕುಮಾರ್ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಹಾಜರಿದ್ದರು.
Advertisement
ಸಿಬಿಐಗೆ ಅನುಮತಿ ನೀಡಿರುವ ಅನುಮೋದನೆ ಹಿಂಪಡೆಯಲಾಗಿದೆ ಎಂದು ಮನು ಸಿಂಘ್ವಿ ಕೋರ್ಟ್ ಗಮನಕ್ಕೆ ತಂದರು. ಸರ್ಕಾರದ ಆದೇಶ ಪ್ರತಿಯನ್ನು ಓದಿದ ಹೈಕೋರ್ಟ್, ನೀವು ಈಗ ಹೊಸ ತೀರ್ಮಾನ ತೆಗೆದುಕೊಂಡು ಬಂದಿದ್ದೀರಿ. ಇದು ಕಾನೂನುಬದ್ಧವಾಗಿದ್ಯಾ ಎಂದು ಸಿಜೆ ಪ್ರಶ್ನಿಸಿದರು. ಈ ಹಿಂದೆ ರಾಜ್ಯ ಸರ್ಕಾರದ ಅನುಮತಿ ಇರಲಿಲ್ಲ. ರಾಜ್ಯ ಸರ್ಕಾರ ಕೆಲವೊಂದು ನಿಯಮ ಉಲ್ಲಂಘನೆ ಮಾಡಿದೆ ಎಂದು ಶಶಿಕಿರಣ್ ಶೆಟ್ಟಿ ಜೊತೆ ಬಂದಿದ್ದ ಕಪಿಲ್ ಸಿಬಲ್ ವಾದಿಸಿದರು.
Advertisement
ಒಂದು ಪಕ್ಷ ಅಧಿಕಾರ ಹೊಂದಿರಬಹುದು. ‘ಬಿ’ ಪಕ್ಷ ಅಧಿಕಾರಕ್ಕೆ ಬರಬಹುದು. ಈ ರೀತಿ ಪದೇ ಪದೆ ಆದರೆ, ಇದು ಆಡಳಿತಕ್ಕೆ ಅಡ್ಡಿ ಉಂಟು ಮಾಡುವುದಿಲ್ಲವೇ? ಪ್ರತಿ ಪಕ್ಷ ಬದಲಾದಾಗ ಈ ರೀತಿ ಆದೇಶ ಮಾಡಿದರೆ ತನಿಖೆ ಮೇಲೆ ಪ್ರಭಾವ ಬೀರುವುದಿಲ್ಲವೇ ಎಂದು ಹೈಕೋರ್ಟ್ ಪ್ರಶ್ನಿಸಿತು. ಇದನ್ನೂ ಓದಿ: ಡಿಕೆಶಿ ಕೇಸ್ ವಾಪಸ್; ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್
ಸರ್ಕಾರ ಕಾನೂನುಬದ್ಧವಾಗಿ ಈ ಪ್ರಕರಣ ವಾಪಸ್ ಪಡೆದುಕೊಂಡಿದೆ ಎಂದು ಕಪಿಲ್ ಸಿಬಲ್ ವಾದ ಮಂಡಿಸಿದರು. ಆದರೆ ಸಿಬಿಐ ಪರ ವಕೀಲರು ಸರ್ಕಾರದ ಆದೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಸರ್ಕಾರದ ಆದೇಶ ಈ ಹಂತದಲ್ಲಿ ಅಸಮಂಜಸ ಎಂದು ಸಿಬಿಐ ಪರ ವಕೀಲರು ಹೇಳಿದರು.
ಈಗಾಗಲೇ ಸರ್ಕಾರ ಪ್ರಕರಣ ವಾಪಸ್ ಪಡೆದಿದೆ. ಈ ಪ್ರಕರಣದಲ್ಲಿ ಹೈಕೋರ್ಟ್ ಅರ್ಜಿ ವಿಚಾರಣೆ ಅನೂರ್ಜಿತ. ಈ ಸಂದರ್ಭದಲ್ಲಿ ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಬೇಕಿಲ್ಲ ಎಂದು ಡಿಕೆಶಿ ಪರ ವಕೀಲರು ವಾದಿಸಿದರು. ಈ ವೇಳೆ ಹೈಕೋರ್ಟ್, ಸಂಪುಟದಲ್ಲಿ ಅಂತಿಮ ತೀರ್ಮಾನ ಆಗಿದೆಯಾ? ಸಂಪುಟದ ತೀರ್ಮಾನ ಸಿಬಿಐ ಪ್ರಶ್ನೆ ಮಾಡುತ್ತಿದೆಯಾ ಎಂದು ಕೇಳಿತು. ಆಗ ಡಿಕೆ ಪರ ವಕೀಲ, ಇಲ್ಲ ಸಿಬಿಐ ಇದುವರೆಗೂ ಸರ್ಕಾರದ ಆದೇಶ ಪ್ರಶ್ನಿಸಿಲ್ಲ. ಸಿಬಿಐ ಪೂರ್ವಾನುಮತಿ ಹಿಂಪಡೆದಿದೆ. ನಾವು ವಾದ ಮಾಡುವ ಅವಶ್ಯಕತೆ ಇಲ್ಲ. ನಾವು ಮೇಲ್ಮನವಿ ಹಿಂಪಡೆಯುತ್ತೇವೆ ಎಂದು ತಿಳಿಸಿದರು.
ಈಗಾಗಲೇ ತನಿಖೆ ಪೂರ್ಣ ಆಗುವ ಹಂತದಲ್ಲಿ ಇದೆ. ಸಿಬಿಐ ಎಫ್‌ಐಆರ್ ದಾಖಲಿಸಿದ ಮೇಲೆ ಅನುಮೋದನೆ ನೀಡಿರುವುದನ್ನು ಹಿಂಪಡೆಯಬಹುದೇ ಎಂಬ ಪ್ರಶ್ನೆಯೂ ಇದೆ. ಈ ಬಗ್ಗೆ ಸಾಕಷ್ಟು ಪ್ರಶ್ನೆಗಳು ಇದ್ದಾವೆ ಎಂದು ಸಿಬಿಐ ಪರ ವಕೀಲರು ಹೇಳಿದರು. ಇದಕ್ಕೆ ಹೈಕೋರ್ಟ್, ದಿನಪತ್ರಿಕೆ ಸುದ್ದಿಯ ಮೇಲೆ ವಿಚಾರಣೆ ಮಾಡಲು ಸಾಧ್ಯವಿಲ್ಲ. ಕಾನೂನು ಏನು ಹೇಳುತ್ತೆ ಎಂಬುದರ ಮೇಲೆ ವಿಚಾರಣೆ ನಡೆಯಲಿದೆ ಎಂದು ತಿಳಿಸಿತು. ಇದನ್ನೂ ಓದಿ: ಡಿಕೆಶಿಯಂತೆ ನಾಗೇಂದ್ರ ಮೇಲಿನ ಕೇಸ್ ಹಿಂಪಡೆಯಲಿ – ಸರ್ಕಾರಕ್ಕೆ ರೆಡ್ಡಿ ಆಗ್ರಹ
ಈಗಾಗಲೇ ಬೇರೆ ಪ್ರಕರಣದಲ್ಲಿ ಅನುಮತಿ ವಾಪಸ್ ಪಡೆದು ಕೋರ್ಟ್ ಮಧ್ಯ ಪ್ರವೇಶ ಮಾಡಿದೆ. ಹಳೆಯ ಆದೇಶದ ಪ್ರಕಾರ ಸಿಬಿಐ ಕೊಟ್ಟ ಅನುಮತಿ ವಾಪಸ್ ಪಡೆಯಲು ಸಾಧ್ಯವಿಲ್ಲ ಎಂದು ವಾದಿಸಿದ ಸಿಬಿಐ ಪರ ವಕೀಲರು, 1994 ರಲ್ಲಿ ಸುಪ್ರೀಂ ನೀಡಿದ್ದ ಕಾಜಿ ಡೋರ್ಜಿ ಪ್ರಕರಣ ತೀರ್ಪು ಓದಿದರು. ಈ ಪ್ರಕರಣದಲ್ಲಿ ಒಮ್ಮೆ ನೀಡಿದ ಅನುಮತಿ ವಾಪಸ್ ಪಡೆಯಲು ಸಾಧ್ಯವಿಲ್ಲ ಎಂದು ವಾದಿಸಿದರು.
ಎಲ್ಲ ವಾದ-ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್ ಕೆಲ ನಿಮಿಷಗಳ ಕಾಲ ವಿಚಾರಣೆಯನ್ನು ಮುಂದೂಡಿತು. ಮತ್ತೆ ವಿಚಾರಣೆ ಆರಂಭಿಸಿ ಹೈಕೋರ್ಟ್ ತೀರ್ಪು ಪ್ರಕಟಿಸಿತು. ಮೇಲ್ಮನವಿ ಹಿಂಪಡೆದ ಮನವಿಯನ್ನು ಹೈಕೋರ್ಟ್ ಪರಿಗಣಿಸಿತು. ಅಲ್ಲದೇ, ರಾಜ್ಯ ಸರ್ಕಾರದ ಆದೇಶವನ್ನು ಈವರೆಗೂ ಯಾರೂ ಪ್ರಶ್ನಿಸಿಲ್ಲ. ಹೀಗಾಗಿ ಸಿಬಿಐ ಪರ ವಕೀಲರ ವಾದ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ತೀರ್ಪಿನಲ್ಲಿ ತಿಳಿಸಿತು. ಈ ವೇಳೆ, ಕಾಜಿ ಡೋರ್ಜಿ ಪ್ರಕರಣ ಉಲ್ಲೇಖಿಸಿ ಸಿಬಿಐ ಪರ ವಕೀಲರು ವಾದಿಸಿದ್ದನ್ನು ಹೈಕೋರ್ಟ್ ಪರಿಗಣಿಸಲಿಲ್ಲ. ಹೈಕೋರ್ಟ್ ತೀರ್ಪಿನಿಂದ ಡಿ.ಕೆ.ಶಿವಕುಮಾರ್‌ಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಹೈಕೋರ್ಟ್‌ನಲ್ಲಿ ಬಾಕಿ ಇದ್ದ ರಿಟ್ ಅರ್ಜಿ ಮತ್ತು ಈ ಸಂಬಂಧದ ಮೇಲ್ಮನವಿಯನ್ನು ಡಿಸಿಎಂ ಡಿಕೆಶಿ ಹಿಂಪಡೆದಿದ್ದಾರೆ. ವಿಚಾರಣೆ ವೇಳೆ ಸರ್ಕಾರದ ಪರ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಕಪಿಲ್ ಸಿಬಲ್ ಹಾಜರಾಗಿದ್ದರು. ಸರ್ಕಾರದ ಅಧಿಸೂಚನೆಯನ್ನು ನ್ಯಾಯಪೀಠಕ್ಕೆ ಮೆಮೊ ಮೂಲಕ ಸಲ್ಲಿಸಿದರು. ಅಂತೆಯೇ, ರಿಟ್ ಅರ್ಜಿ ಮತ್ತು ಮೇಲ್ಮನವಿಯನ್ನು ಹಿಂಪಡೆಯುವುದಾಗಿಯೂ ಶಿವಕುಮಾರ್ ಪರ ವಕೀಲರು ನ್ಯಾಯಪೀಠಕ್ಕೆ ಲಿಖಿತ ಮೆಮೊ ಸಲ್ಲಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಮೆಮೊ ಪರಿಗಣಿಸಿ ಅರ್ಜಿ ಹಿಂಪಡೆಯುವ ನಿರ್ಧಾರಕ್ಕೆ ಅಸ್ತು ಎಂದು ಆದೇಶಿಸಿತು.