ಹುಬ್ಬಳ್ಳಿ: ಮತಾಂತರಕ್ಕೆ ಯತ್ನಿಸಿದ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಅಕ್ಟೋಬರ್ 17 ರಂದು ಹುಬ್ಬಳ್ಳಿಯ ನವನಗರದಲ್ಲಿ ಪ್ರತಿಭಟನೆ ನಡೆಸಿದ್ದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.
Advertisement
ಭೈರಿದೇವರಕೊಪ್ಪ ಪ್ರಾರ್ಥನಾ ಮಂದಿರದ ಗಂಗಾ ಎಂಬುವರು 70 ಕ್ಕೂ ಹೆಚ್ಚು ಪ್ರತಿಭಟನಾಕಾರರ ವಿರುದ್ಧ ದೂರು ನೀಡಿದ್ದಾರೆ. 70ಕ್ಕೂ ಹೆಚ್ಚು ಜನರು ಪ್ರಾರ್ಥನಾ ಸ್ಥಳಕ್ಕೆ ಬಂದು ಗಲಾಟೆ ಮಾಡಿದ್ದಾರೆ. ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಆಮಿಷ ಒಡ್ಡಿ ಮತಾಂತರ – ಹುಬ್ಬಳ್ಳಿಯಲ್ಲಿ ರಾತ್ರಿ ಪ್ರತಿಭಟನೆ
Advertisement
Advertisement
ಘಟನೆ ಹಿನ್ನೆಲೆ: ಮತಾಂತರಕ್ಕೆ ಮುಂದಾಗಿದ್ದ ಆರೋಪದ ಮೇಲೆ ಸುತಗಟ್ಟಿಯ ಸೋಮು ಅವರಾದಿ ಎಂಬ ವ್ಯಕ್ತಿಯನ್ನು ಅಕ್ಟೋಬರ್ 17 ರಂದು ಹಿಂದೂ ಪರ ಸಂಘಟನೆಯವರು ಎಪಿಎಂಸಿ ಠಾಣೆ ಪೊಲೀಸರಿಗೆ ಒಪ್ಪಿಸಿದ್ದರು. ಈತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳದೇ ಹಾಗೇ ಬಿಟ್ಟು ಕಳುಹಿಸಿದ್ದಾರೆಂದು ಆರೋಪಿಸಿ ಅಂದು ಸಂಜೆ ಹಿಂದೂಪರ ಸಂಘಟನೆಯವರು ನವನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ಮತಾಂತರ ಮಾಡುತ್ತಿರುವವರನ್ನು ಒದ್ದು ಓಡಿಸಬೇಕು: ಪ್ರಮೋದ್ ಮುತಾಲಿಕ್
Advertisement
ಶಾಸಕ ಅರವಿಂದ ಬೆಲ್ಲದ್ ಅವರೂ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಬಳಿಕ ಪೊಲೀಸರು ಆರೋಪಿ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದರು. ಆದರೆ ಆರೋಪಿಯನ್ನು ಬಂಧಿಸದ ಪರಿಣಾಮ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಸ್ವತಃ ಪೊಲೀಸ್ ಆಯುಕ್ತರು ಸ್ಥಳಕ್ಕೆ ಬಂದು ಆರೋಪಿಯನ್ನು ಬಂಧಿಸುವ ಭರವಸೆ ನೀಡಿದ್ದರು. ಪ್ರತಿಭಟನೆ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ನಿಂದಿಸಿದ್ದಾರೆಂದು ಆರೋಪಿಸಿ ಡಿಸಿಪಿ ಕೆ. ರಾಮರಾಜನ್ ಎಪಿಎಂಸಿ- ನವನಗರ ಠಾಣೆಯಲ್ಲಿ ಅಶೋಕ್ ಅನ್ವೇಕರ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದೀಗ ಮತ್ತೊಂದು ಪ್ರಕರಣ ಹಿಂದೂ ಪರ ಕಾರ್ಯಕರ್ತರ ಮೇಲೆ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.