ರಾಂಚಿ: ಅಮಿತ್ ಶಾ (Amit shah) ವಿರುದ್ಧದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಜಾರ್ಖಂಡ್ ಹೈಕೋರ್ಟ್‌ನ ನಿರ್ದೇಶನದ ಪ್ರಕಾರ ಇಂದು (ಆ.6) ಬೆಳಿಗ್ಗೆ 10:55ರ ಸುಮಾರಿಗೆ ರಾಹುಲ್ ಗಾಂಧಿ ನ್ಯಾಯಾಲಯದ ಮುಂದೆ ಖುದ್ದು ಹಾಜರಾದರು. ಇದಕ್ಕೂ ಮುನ್ನ ಜೂ.26ರಂದು ಖುದ್ದು ಹಾಜರಾಗುವಂತೆ ವಿಶೇಷ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಜಾರ್ಖಂಡ್ ಹೈಕೋರ್ಟ್‌ಗೆ ಮೊರೆ ಹೋಗಿದ್ದರು.ಇದನ್ನೂ ಓದಿ: ಕೈಗಾ ಅಣುಸ್ಥಾವರದ ವಿಕಿರಣದಿಂದ ಜನರಲ್ಲಿ ಕ್ಯಾನ್ಸರ್ ಪತ್ತೆಯಾಗಿಲ್ಲ: ಅಣು ವಿದ್ಯುತ್ ಸ್ಥಾವರದ ನಿರ್ದೇಶಕ ಸ್ಪಷ್ಟನೆ
ರಾಹುಲ್ ಗಾಂಧಿ ಪರ ವಕೀಲರು, ತಮ್ಮ ಕಕ್ಷಿದಾರರು ನಿಗದಿತ ದಿನದಂದು ಹಾಜರಾಗಲು ಸಾಧ್ಯವಾಗುವುದಿಲ್ಲ. ಬದಲಿಗೆ ಆ.6ರಂದು ಹಾಜರಾಗಲು ಅವಕಾಶ ನೀಡುವಂತೆ ಜೂ.10ರಂದು ಕೇಳಿಕೊಂಡಿದ್ದರು. ಅದರಂತೆ ಇದೀಗ ಜಾರ್ಖಂಡ್‌ನ ಚೈಬಾಸಾದ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
2018ರ ಚುನಾವಣಾ ರ‍್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿಯವರು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ಪ್ರತಾಪ್ ಕುಮಾರ್ ಎಂಬ ವ್ಯಕ್ತಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.ಇದನ್ನೂ ಓದಿ: ಯೂಟ್ಯೂಬರ್‌ಗಳಿಗೆ ಥಳಿತ, ಅಪಪ್ರಚಾರಿಗಳನ್ನು ಬಂಧಿಸಿ – ಸಿಡಿದ ಧರ್ಮಸ್ಥಳದ ಭಕ್ತರು