Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೀದಿ ನಾಯಿಗಳ ಕಾಟ ತಡೆಯಲು ಆಸ್ಪತ್ರೆ, ಶಾಲೆ, ಕಾಲೇಜುಗಳಿಗೆ ಬೇಲಿ ಹಾಕಿ – ಸುಪ್ರೀಂ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬೀದಿ ನಾಯಿಗಳ ಕಾಟ ತಡೆಯಲು ಆಸ್ಪತ್ರೆ, ಶಾಲೆ, ಕಾಲೇಜುಗಳಿಗೆ ಬೇಲಿ ಹಾಕಿ – ಸುಪ್ರೀಂ ಸೂಚನೆ

Latest

ಬೀದಿ ನಾಯಿಗಳ ಕಾಟ ತಡೆಯಲು ಆಸ್ಪತ್ರೆ, ಶಾಲೆ, ಕಾಲೇಜುಗಳಿಗೆ ಬೇಲಿ ಹಾಕಿ – ಸುಪ್ರೀಂ ಸೂಚನೆ

Public TV
Last updated: November 7, 2025 12:21 pm
Public TV
Share
2 Min Read
DC Office Dog 4
SHARE

– ಹೆದ್ದಾರಿಗಳಿಂದ ಬಿಡಾಡಿ ದನಗಳನ್ನ ಮುಕ್ತಗೊಳಿಸಿ; ಗಸ್ತಿಗೆ ತಂಡಗಳನ್ನ ರಚಿಸಿ
– ಎಲ್ಲಾ ರಾಜ್ಯಗಳು ಆದೇಶವನ್ನ ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ತಾಕೀತು

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ (Stray Dogs) ಕಾಟ ಹಾಗೂ ಬಿಡಾಡಿ ದನಗಳ ಹಾವಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ (Supreme Court) ಇಂದು ಮಹತ್ವದ ಆದೇಶ ನೀಡಿದೆ. ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಬಸ್ ನಿಲ್ದಾಣಗಳು, ಕ್ರೀಡಾಂಗಣಗಳು ಹಾಗೂ ರೈಲ್ವೆ ನಿಲ್ದಾಣಗಳಿಂದ ಬೀದಿ ನಾಯಿಗಳನ್ನ ಸ್ಥಳಾಂತರಿಸುವಂತೆ ಸೂಚನೆ ನೀಡಿದೆ. ಜೊತೆಗೆ ಹೆದ್ದಾರಿಗಳನ್ನ ಬಿಡಾಡಿ ದನಗಳಿಂದ ಮುಕ್ತಗೊಳಿಸುವಂತೆಯೂ ತಾಕೀತು ಮಾಡಿದೆ.

Supreme Court 1

ಸ್ವಯಂ ಪ್ರೇರಿತ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ (Vikram Nath), ಸಂದೀಪ್ ಮೆಹ್ತಾ ಮತ್ತು ಎನ್‌ವಿ ಅಂಜಾರಿಯಾ ಅವರ ಪೀಠವು ಇಂದು ʻರಸ್ತೆಗಳಿಂದ ಬಿಡಾಡಿ ದನಗಳು ಹಾಗೂ ನಾಯಿಗಳನ್ನು ತೆರವುಗೊಳಿಸಬೇಕೆಂಬʼ ರಾಜಸ್ಥಾನ ಹೈಕೋರ್ಟ್ ನಿರ್ದೇಶನಗಳನ್ನ ಪುನರುಚ್ಚರಿಸಿದೆ. ಆ ಆದೇಶವನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಜೊತೆಗೆ ಹೆದ್ದಾರಿಗಳಿಂದ ಪ್ರಾಣಿಗಳ ಸ್ಥಳಾಂತರ ಖಚಿತಪಡಿಸಿಕೊಳ್ಳಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI), ಲೋಕೋಪಯೋಗಿ ಇಲಾಖೆ, ಪುರಸಭೆ ಅಧಿಕಾರಿಗಳು, ರಸ್ತೆ ಮತ್ತು ಸಾರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

DC Office Dog 3

ಎಲ್ಲಾ ರಾಜ್ಯಗಳಿಗೂ ಕಟ್ಟುನಿಟ್ಟಿನ ಸೂಚನೆ
ಹೆದ್ದಾರಿಗಳು ಮತ್ತು ಇತರ ಎಕ್ಸ್‌ಪ್ರೆಸ್‌ ವೇಗಳಲ್ಲಿ ಬಿಡಾಡಿ ದನಗಳು, ನಾಯಿಗಳನ್ನ ಹಿಡಿಯಲು ಹೈವೆ ಪ್ಯಾಟ್ರೋಲ್‌ ತಂಡ (ಗಸ್ತು ತಂಡ) ರಚಿಸಬೇಕು. ಬಿಡಾಡಿ ಪ್ರಾಣಿಗಳ (Stray Animals) ಬಗ್ಗೆ ದೂರು ನೀಡಲು ಸಹಾಯವಾಣಿ ಸಂಖ್ಯೆ ಆರಂಭಿಸಬೇಕು. ಎಲ್ಲಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳು ಈ ನಿರ್ದೇಶನವನ್ನ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಆದೇಶಿಸಿದೆ.

ವಿಶೇಷವಾಗಿ ಬೀದಿ ನಾಯಿಗಳ ಕಾಟ ತಡೆಯಲು ಮತ್ತು ಕಡಿತವನ್ನ ತಡೆಗಟ್ಟಲು ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕಾಲೇಜುಗಳಿಗೆ ಬೇಲಿ ಹಾಕಬೇಕು. ಬೇಲಿ ಅಗತ್ಯವಿರುವ ಎಲ್ಲ ಸಂಸ್ಥೆಗಳನ್ನು ಎಲ್ಲಾ ರಾಜ್ಯ ಸರ್ಕಾರಗಳು‌ ಮತ್ತು ಕೇಂದ್ರಾಡಳಿತ ಪ್ರದೇಶಗಳು 2 ವಾರಗಳ ಅವಧಿಯಲ್ಲಿ ಗುರುತಿಸಬೇಕು ಎಂದು ನಿರ್ದೇಶಿಸಿದೆ.

UER II Dwarka

ಅದಾದ ಬಳಿಕ ಬೀದಿ ನಾಯಿಗಳ ಎಂಟ್ರಿ ತಡೆಯಲು ಆವರಣಗಳನ್ನ ಬೇಲಿಯಿಂದ ಸುರಕ್ಷಿತಗೊಳಿಸಲಾಗಿದೆಯೇ ಎಂಬುದನ್ನು ರಾಜ್ಯಗಳು ಖಚಿತಪಡಿಸಿಕೊಳ್ಳಬೇಕು. ಅಷ್ಟೇ ಅಲ್ಲ ಬೀದಿ ನಾಯಿಗಳನ್ನ ಎತ್ತಿಕೊಂಡ ನಂತ್ರ ಅವುಗಳನ್ನ ಅದೇ ಸ್ಥಳದಲ್ಲಿ ಬಿಡಬಾರದು, ಇದರಿಂದ ಸಮಸ್ಯೆ ನಿಯಂತ್ರಿಸಲು ರೂಪಿಸಿದ ಯೋಜನೆ ವಿಫಲವಾಗುತ್ತೆ. ಜೊತೆಗೆ ಅವುಗಳ ನಿರ್ವಹಣೆಗಾಗಿ ನೋಡಲ್‌ ಅಧಿಕಾರಿಗಳನ್ನ ನೇಮಿಸಬೇಕು. ಸ್ಥಳೀಯ ಪುರಸಭೆ ಅಧಿಕಾರಿಗಳು ಅಥವಾ ಪಂಚಾಯ್ತಿ ಅಧಿಕಾರಿಗಳು ಪ್ರತಿ 3 ತಿಂಗಳಿಗೊಮ್ಮೆಯಾದ್ರೂ ಬೇಲಿ ಹಾಕಿದ ಆವರಣಗಳನ್ನ ಪರಿಶೀಲಿಸಬೇಕು ಎಂದು ಪೀಠವು ತನ್ನ ಆದೇಶದಲ್ಲಿ ತಿಳಿಸಿದೆ. ಅಲ್ಲದೇ ಇಂದಿನಿಂದ 3 ವಾರಗಳಲ್ಲಿ ಕ್ರಮಗಳ ಸ್ಥಿತಿ ಮತ್ತು ಅನಸರಣೆಗೆ ಕುರಿತು ಎಲ್ಲಾ ರಾಜ್ಯಗಳು ಅಫಿಡವಿಟ್‌ ಸಲ್ಲಿಸಬೇಕು ಎಂದು ಹೇಳಿದೆ.

TAGGED:cattlehighwaysNew DelhiStray Animalsstray dogsSupreme Courtಬಿಡಾಡಿ ದನಗಳುಬೀದಿ ನಾಯಿಗಳುಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Bigg Boss Rakshita Malu Dhruvanth
ರಕ್ಷಿತಾ-ಮಾಳುಗೆ ಧ್ರುವಂತ್‌ ಮೋಸ – ಕ್ಲಾಸ್‌ ತಗೆದುಕೊಳ್ಳುವಂತೆ ಆಗ್ರಹ
Cinema Latest Top Stories TV Shows
Baahubali The Epic 3
ಜಪಾನ್‌ನಲ್ಲಿ `ಬಾಹುಬಲಿ ದಿ ಎಪಿಕ್’ ರಿಲೀಸ್ – ಯಾವಾಗ ಗೊತ್ತಾ..?
Cinema Latest South cinema
Darshan
ʻದಾಸʼನಿಗೆ 82 ಲಕ್ಷ ಹಣದ ತಲೆಬಿಸಿ – ಕೃಷಿ, ಪ್ರಾಣಿ ಮಾರಾಟದಿಂದಲೇ ಹಣ ಸಿಕ್ಕಿದ್ದು ಎಂದ ದರ್ಶನ್‌
Bengaluru City Cinema Districts Karnataka Latest Main Post Sandalwood
Nanda Kishore and bekary raghu
ನಿರ್ದೇಶಕ ನಂದಕಿಶೋರ್‌ಗೆ ಸಾಲ ನೀಡಿದ ಕೇಸ್‌ಗೆ ಟ್ವಿಸ್ಟ್ – ಉದ್ಯಮಿ ಕಿಡ್ನ್ಯಾಪ್ ಹಿಂದೆ ರಘು ಕೈವಾಡ ಸಾಬೀತು
Bengaluru City Cinema Districts Karnataka Latest Sandalwood Top Stories

You Might Also Like

Modi Putin 1
Latest

ನಾವು ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದ್ದೇವೆ – ಪುಟಿನ್‌ ಜೊತೆಗಿನ ಸಂವಾದದಲ್ಲಿ ಮೋದಿ ಮಾತು

Public TV
By Public TV
9 minutes ago
IndiGo 5
Latest

ದೆಹಲಿಯಲ್ಲಿ ಇಂದು ಮಧ್ಯರಾತ್ರಿವರೆಗೆ ಎಲ್ಲಾ ಇಂಡಿಗೋ ದೇಶೀಯ ವಿಮಾನಗಳ ಹಾರಾಟ ರದ್ದು

Public TV
By Public TV
1 hour ago
Indigo Flight
Bengaluru City

1000ಕ್ಕೂ ಹೆಚ್ಚು ವಿಮಾನ ಹಾರಾಟ ರದ್ದು – ಫೆಬ್ರವರಿ ವೇಳೆಗೆ ಸಮಸ್ಯೆಗೆ ಪರಿಹಾರ ಎಂದ ಇಂಡಿಗೋ

Public TV
By Public TV
1 hour ago
home loan
Latest

ಮನೆ, ಕಾರು ಖರೀದಿದಾರರಿಗೆ ಗುಡ್‌ನ್ಯೂಸ್‌ | ರೆಪೋ ದರ ಕಡಿತ – ಇಎಂಐ ಎಷ್ಟು ಇಳಿಕೆಯಾಗುತ್ತೆ?

Public TV
By Public TV
2 hours ago
Metro Suicide
Bengaluru City

ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಟ್ರ‍್ಯಾಕ್‌ಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Public TV
By Public TV
2 hours ago
Bengaluru Rain
Bengaluru City

ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?