ಬಹುನಿರೀಕ್ಷಿತ ರಾಮಾಯಣ (Ramayana) ಸಿನಿಮಾದ ಮತ್ತೊಂದು ಪಾತ್ರ ಈಗ ಸಿನಿಪ್ರಿಯರ ಕುತೂಹಲ ಹೆಚ್ಚಿಸಿದೆ. ಶೂರ್ಪನಖಿ ಪಾತ್ರದಲ್ಲಿ ನಟಿಸಿರುವ ರಕುಲ್ ಪ್ರೀತ್ ಸಿಂಗ್ ಅಭಿನಯಕ್ಕೆ ರಾಕಿಂಗ್ ಸ್ಟಾರ್ ಯಶ್ (Yash) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಿತೇಶ್ ತಿವಾರಿ ನಿರ್ದೇಶನದ ರಾಮಾಯಣ ಸಿನಿಮಾದಲ್ಲಿ ಶೂರ್ಪನಖಿ ಪಾತ್ರದಲ್ಲಿ ರಕುಲ್ ಪ್ರೀತ್ ಸಿಂಗ್ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾ ಬಿಡುಗಡೆಯಾಗುವ ಮುನ್ನವೇ ಅವರ ಪಾತ್ರದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈಗ ರಾವಣನ ಪಾತ್ರದಲ್ಲಿ ನಟಿಸಿರುವ ಕನ್ನಡದ ನಟ ಯಶ್ ಕೂಡ ರಕುಲ್ ಅಭಿನಯವನ್ನು ಬಹಿರಂಗವಾಗಿ ಹೊಗಳಿದ್ದಾರೆ.
ದೆಹಲಿದಲ್ಲಿ ನಡೆದ ‘ರಾಮಾಯಣ: ಪ್ರಥಮ್ ಸಂಕಲ್ಪ’ ಕಾರ್ಯಕ್ರಮದಲ್ಲಿ ಮಾತನಾಡಿದ ಯಶ್, ಶೂರ್ಪನಖಿ ಪಾತ್ರವನ್ನು ಅವರು ನಿರ್ವಹಿಸಿದ ರೀತಿ ನಿಜಕ್ಕೂ ಗಮನಾರ್ಹವಾಗಿದೆ ಎಂದು ಹೊಗಳಿದ್ದಾರೆ. ಯಶ್ ಅವರ ಈ ಮಾತು ಅಭಿಮಾನಿಗಳಲ್ಲಿ ಸಿನಿಮಾ ಮೇಲೆ ಮತ್ತಷ್ಟು ನಿರೀಕ್ಷೆ ಮೂಡಿಸಿದೆ.
ಸಾಮಾನ್ಯವಾಗಿ ಶೂರ್ಪನಖಿ ಪಾತ್ರವನ್ನು ಒಂದೇ ದೃಷ್ಟಿಕೋನದಲ್ಲಿ ತೋರಿಸಲಾಗುತ್ತದೆ. ಆದರೆ, ಈ ಸಿನಿಮಾದಲ್ಲಿ ಆ ಪಾತ್ರವನ್ನು ಹೆಚ್ಚು ಭಾವನಾತ್ಮಕವಾಗಿ ಮತ್ತು ವಿಭಿನ್ನವಾಗಿ ಕಟ್ಟಿಕೊಡಲಾಗಿದೆ. ರಕುಲ್ ಪ್ರೀತ್ ಸಿಂಗ್ ತಮ್ಮ ಅಭಿನಯದ ಮೂಲಕ ಪಾತ್ರಕ್ಕೆ ಹೊಸ ಅರ್ಥ ಕೊಟ್ಟಿದ್ದಾರೆ.
ಸಿನಿಮಾದಲ್ಲಿ ರಕುಲ್ ಅವರ ಲುಕ್ ಕೂಡ ಈಗಾಗಲೇ ಅಭಿಮಾನಿಗಳ ಗಮನ ಸೆಳೆದಿದೆ. ಕಾರ್ಯಕ್ರಮದಲ್ಲಿ ಅವರು ಕಾಣಿಸಿಕೊಂಡ ಅವರ ಡ್ರೆಸ್ ಮತ್ತು ಲುಕ್‌ಗೆ ಸೋಷಿಯಲ್ ಮೀಡಿಯಾದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಶೂರ್ಪನಖಿ ಪಾತ್ರಕ್ಕೆ ರಕುಲ್ ಸೂಕ್ತ ಆಯ್ಕೆ ಎಂದು ಅನೇಕರು ಕಾಮೆಂಟ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಜೆಡಿ ವ್ಯಾನ್ಸ್-ಉಷಾ ದಂಪತಿಗೆ ನಾಲ್ಕನೇ ಮಗುವಿನ ಜನನ; ಅಮೆರಿಕ ರಾಜಕೀಯದಲ್ಲಿ ಅಪರೂಪದ ದಾಖಲೆ
ರಾಮಾಯಣ ಸಿನಿಮಾದಲ್ಲಿ ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ, ಕನ್ನಡ ನಟ ಯಶ್ ರಾವಣನಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಬಹುನಿರೀಕ್ಷಿತ ಸಿನಿಮಾ ಈಗಾಗಲೇ ಭಾರೀ ಹೈಪ್ ಸೃಷ್ಟಿಸಿದೆ. ಇದನ್ನೂ ಓದಿ: ಕಾಂಜೀವರಂ ಸೀರೆಯಲ್ಲಿ ಮಿಂಚಿದ ಸಾಯಿ ಪಲ್ಲವಿ; ಸಿಂಪಲ್ ಲುಕ್‌ಗೆ ಫಿದಾ ಆದ ಫ್ಯಾನ್ಸ್
