ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಹೆಸರು ಮರುನಾಮಕರಣ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಹೆಸರನ್ನು `ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ’ ಅಂತ ಹೆಸರು ಮರುನಾಮಕರಣ ಮಾಡಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶವನ್ನೂ ಹೊರಡಿಸಿದೆ. ಇದನ್ನೂ ಓದಿ: ವಿದ್ಯಾಪೀಠ 5ನೇ ಆವೃತ್ತಿಗೆ ಅದ್ಧೂರಿ ಚಾಲನೆ- ಮೊದಲ ದಿನವೇ ವಿದ್ಯಾರ್ಥಿಗಳು, ಪೋಷಕರ ಸಾಗರ
Advertisement
Advertisement
ಪ್ರಾಥಮಿಕ ಶಿಕ್ಷಣ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಂತ ಕರೆಯಲಾಗುತ್ತಿತ್ತು. ಬ್ರಿಟಿಷರ ಕಾಲದಲ್ಲಿ ಈ ಹೆಸರು ಇಡಲಾಗಿತ್ತು. ಅಂದಿನಿಂದಲೂ ಇದೇ ಹೆಸರು ಬಳಕೆಯಲ್ಲಿತ್ತು. ಈಗ ಇಲಾಖೆಗೆ ಹೆಸರು ಮರುನಾಮಕರಣ ಮಾಡಲಾಗಿದೆ. ಇದನ್ನೂ ಓದಿ: ವಿದ್ಯಾಪೀಠಕ್ಕೆ ಇಂದು ಚಾಲನೆ – 3 ದಿನಗಳ ಶೈಕ್ಷಣಿಕ ಮೇಳಕ್ಕೆ ಬನ್ನಿ
Advertisement
Advertisement
ಅನೇಕ ರಾಜ್ಯಗಳಲ್ಲಿ `ಶಾಲಾ ಶಿಕ್ಷಣ’ ಎಂದೇ ಕರೆಯಲಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ `ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ’ ಎಂದು ಮರುನಾಮಕರಣ ಮಾಡಿ ಆದೇಶ ಹೊರಡಿಸಿದೆ.