ಸ್ಯಾಂಡಲ್ ವುಡ್ ಹೆಸರಾಂತ ನಟ ಲಕ್ಷ್ಮಣ (Lakshmana) ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ. ಕೆಲ ವರ್ಷಗಳಿಂದ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು. ಇಂದು ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ರಸ್ತೆ ಮಧ್ಯೆದಲ್ಲೇ ಲಕ್ಷ್ಮಣ ಕೊನೆಯುಸಿರು ಎಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಬೆಂಗಳೂರಿನ ಮೂಡಲಪಾಳ್ಯದ ನಿವಾಸದಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಮುನ್ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ಖಳನಟರಾಗಿ ನಟಿಸಿರುವ ಇವರು ಮಲ್ಲ, ಯಜಮಾನ, ಸೂರ್ಯವಂಶ, ಅಂತ ಸೇರಿದಂತೆ ಹಲವು ಸಿನಿಮಾಗಳ ಮೂಲಕ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದರು. ರೆಬಲ್ ಸ್ಟಾರ್ ಅಂಬರೀಶ್ ಅವರ ನೆಚ್ಚಿನ ನಟ ಎನ್ನುವ ಖ್ಯಾತಿಗೂ ಪಾತ್ರರಾಗಿದ್ದರು. ಡಾ.ರಾಜ್ ಕುಮಾರ್, ಡಾ.ಅಂಬರೀಶ್, ಡಾ.ವಿಷ್ಣುವರ್ಧನ್, ರವಿಚಂದ್ರನ್, ಶಿವರಾಜ್ ಕುಮಾರ್ ಹೀಗೆ ಸಾಕಷ್ಟು ದಿಗ್ಗಜ ನಟರೊಂದಿಗೆ ಕೆಲಸ ಮಾಡಿದ ಹೆಗ್ಗಳಿಕೆ ಇವರದ್ದು. ಇದನ್ನೂ ಓದಿ: ಮದುವೆ ಬಳಿಕ ಮಕ್ಕಳನ್ನು ಕರೆದುಕೊಂಡು ಬರುತ್ತೇನೆ, ಪಾಪಾರಾಜಿಗಳಿಗೆ ಸುನೀಲ್ ಶೆಟ್ಟಿ ಅಭಯ
ತಂದೆ ಸೈನಿಕರಾಗಿದ್ದರು. ಸಹೋದರ ಕೂಡ ಪೊಲೀಸ್ ಇಲಾಖೆಯಲ್ಲಿದ್ದರು. ಹಾಗಾಗಿ ಸಹಜವಾಗಿಯೇ ಲಕ್ಷ್ಮಣ ಅವರ ಸೆಳೆತ ಖಾಕಿ ಮೇಲೆಯೇ ಇತ್ತು. ಆದರೆ, ತಾಯಿ ಒಪ್ಪದ ಕಾರಣದಿಂದಾಗಿ ಬಣ್ಣದ ಪ್ರಪಂಚಕ್ಕೆ ಬಂದರು. ಕೆಲವು ಕಾಲ ಫ್ಯಾಕ್ಟರಿಯಲ್ಲೂ ಕೆಲಸ ಮಾಡುತ್ತಿದ್ದರು. ರಂಗಭೂಮಿಯಲ್ಲಿ ಹಲವು ವರ್ಷಗಳ ಕಾಲ ನಟನರಾಗಿ ಸೇವೆ ಸಲ್ಲಿಸಿ, ಆನಂತರ ಸಿನಿಮಾ ರಂಗಕ್ಕೆ ಬಂದರು. ಸಿನಿಮಾದಲ್ಲಿ ಸಾಕಷ್ಟು ಅವಕಾಶಗಳನ್ನು ಪಡೆದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k