ಕನ್ನಡ ಕಿರುತೆರೆಯ ಖ್ಯಾತ ನಟ ಶ್ರೀಧರ್‌ ನಾಯಕ್‌ ನಿಧನ

Public TV
1 Min Read
Renowned Kannada Serial actor Sridhar Nayak passes away

ಬೆಂಗಳೂರು: ಕನ್ನಡ ಕಿರುತೆರೆ (Kannada Serial) ಮತ್ತು ಚಲನಚಿತ್ರ ನಟ ಶ್ರೀಧರ್ ನಾಯಕ್ (47) ಅವರು ಮೇ 26ರಂದು ನಿಧನರಾದರು.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್ ನಾಯಕ್ (Sreedhar Naik) ಅವರಿಗೆ ಇತ್ತೀಚೆಗೆ ತೀವ್ರ ಅನಾರೋಗ್ಯ ಕಾಡಿತ್ತು. ಶ್ರೀಧರ್ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರು ಎಳೆದಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರ ಮೃತ ಶರೀರವನ್ನು ಇಡಲಾಗಿದೆ.

Renowned Kannada Serial actor Sridhar Nayak passes away 2

ಗುರುತೇ ಸಿಗದಷ್ಟು ಬದಲಾಗಿ ಶ್ರೀಧರ್ ನಾಯಕ್ ಬೆಡ್ ಮೇಲೆ ಮಲಗಿದ್ದು ನೋಡಿ ಹಲವರಿಗೆ ಶಾಕ್ ಆಗಿತ್ತು. ಸಹಾಯ ಮಾಡುವಂತೆ ಅನೇಕರು ಕೋರಿಕೊಂಡಿದ್ದರು.

‘ಪಾರು’ ಮತ್ತು ‘ವಧು’ ಧಾರಾವಾಹಿಗಳಲ್ಲಿ ಅವರ ಪಾತ್ರಗಳು ಜನಪ್ರಿಯವಾಗಿದ್ದವು. ‘ಮ್ಯಾಕ್ಸ್’ ಚಿತ್ರದಲ್ಲೂ ಅವರು ನಟಿಸಿದ್ದರು. ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Share This Article