ಮಂಗಳೂರು: ಕನ್ನಡದ ಖ್ಯಾತ ಸಾಹಿತಿ ಹಾಗೂ ಹಿರಿಯ ವಿದ್ವಾಂಸರಾದ ಪ್ರೊ. ಅಮೃತ ಸೋಮೇಶ್ವರ (Amrutha Someshwara) ಅವರು ತಮ್ಮ 89ನೇ ವಯಸ್ಸಿನಲ್ಲಿ ವಯೋಸಹಜ ಅನಾರೋಗ್ಯದಿಂದ ಶನಿವಾರ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಕನ್ನಡ, ತುಳು, ಮಲೆಯಾಳಂ ಮೂರು ಭಾಷೆಗಳಲ್ಲಿ ದೊಡ್ಡ ವಿದ್ವಾಂಸರಾಗಿದ್ದ ಅವರು ಮಹತ್ವದ ಕಥೆಗಾರರಾಗಿದ್ದರು. ಕರಾವಳಿ ಕರ್ನಾಟಕದ ಯಕ್ಷಗಾನ, ಜಾನಪದ, ಭೂತಾರಾಧನೆ ಕ್ಷೇತ್ರದಲ್ಲಿ ಸಂಶೋಧನೆ ನಡೆಸಿ ನೂರಕ್ಕೂ ಹೆಚ್ಚು ಕೃತಿಗಳನ್ನು ಹೊರತಂದಿದ್ದರು. ಯಕ್ಷಗಾನಕ್ಕಂತೂ ಅವರ ಕೊಡುಗೆ ಅಪಾರ. ಧರ್ಮಸ್ಥಳ ಮೇಳಕ್ಕೆ ಅವರು ಪ್ರತಿ ವರ್ಷ ಹೊಸ ಪ್ರಸಂಗಗಳನ್ನು ಬರೆದು ಕೊಡುತ್ತಿದ್ದರು. ಇದನ್ನೂ ಓದಿ: ಶ್ರೀಕಾಂತ್ ಪೂಜಾರಿಗೆ ರೌಡಿಶೀಟರ್‌ನಿಂದ ಮುಕ್ತಿ ಕೊಟ್ಟಿದ್ದು ನಮ್ಮ ಸರ್ಕಾರ: ದಿನೇಶ್ ಗುಂಡೂರಾವ್
Advertisement
ಇವರಿಗೆ ಮಂಗಳೂರು (Mangaluru) ವಿವಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ ಶತಮಾನೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ 2020ನೇ ಸಾಲಿನ ಗೌರವಶ್ರೀ ಪ್ರಶಸ್ತಿ, ಮಣಿಪಾಲ ಅಕಾಡೆಮಿಯ ಮಾಹೆ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದರು. ತುಳು ಭಾಷೆ ಹಾಗೂ ಸಾಹಿತ್ಯಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ 2016ನೇ ಸಾಲಿನಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಭಾಷಾ ಸಮ್ಮಾನ್ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಇದನ್ನೂ ಓದಿ: ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆ – ಹೆಚ್.ಆರ್.ರಂಗನಾಥ್‌ಗೆ ಆಹ್ವಾನ
Advertisement
Advertisement
ಮೃತರು ಪತ್ನಿ ನರ್ಮದಾ, ಮಕ್ಕಳಾದ ಚೇತನ್ ಸೋಮೇಶ್ವರ, ಜೀವನ್ ಸೋಮೇಶ್ವರ, ಸೊಸೆಯಂದಿರಾದ ರಾಜೇಶ್ವರಿ, ಸತ್ಯ ಜೀವನ್, ಮೊಮ್ಮಕ್ಕಳಾದ ಸೃಜನ್ ಸೋಮೇಶ್ವರ ಹಾಗೂ ಸೃಷ್ಟಿ ಸೋಮೇಶ್ವರ ಅವರನ್ನು ಅಗಲಿದ್ದಾರೆ. ಸೋಮೇಶ್ವರ ಪುರಸಭೆ ಕಚೇರಿ ಬಳಿಯ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಭಾನುವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ದಿನ ರಾಜ್ಯಾದ್ಯಂತ ವಿದ್ಯುತ್ ಸ್ಥಗಿತ – ಕಾಂಗ್ರೆಸ್ ವಿರುದ್ಧ ಬಿಜೆಪಿ ಗಂಭೀರ ಆರೋಪ
Advertisement