ಪಂಜಾಬಿ ಖ್ಯಾತ ಗಾಯಕ ಸಿಧು ಮೂಸೆವಾಲಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು ಎಂದು ಶಂಕಿಸಲಾಗಿದ್ದ ಕ್ರಿಮಿನಲ್ ಗಳಿಗೆ ಇಂದು ಗನ್ ಮೂಲಕವೇ ಉತ್ತರ ಕೊಟ್ಟಿದ್ದಾರೆ ಪಂಜಾಬ್ ಪೊಲೀಸರು. ಪಂಜಾಬ್ ನ ಅಮೃತಸರದ ಸಮೀಪದ ಒಂಟಿ ಮನೆಯೊಂದರಲ್ಲಿ ಅವಿತು ಕುಳಿತಿದ್ದ ಅವರ ಮೇಲೆ ಪೊಲೀಸರು ಗುಂಡಿನ ಮಳೆಯನ್ನೇ ಸುರಿದಿದ್ದಾರೆ. ಪಾಕಿಸ್ತಾನ ಗಡಿಯಿಂದ ಕೇವಲ 10 ಕಿಮೀ ದೂರದ ಹಳ್ಳಿಯಲ್ಲಿ ಈ ಎನ್ ಕೌಂಟರ್ ನಡೆದಿದೆ.
Advertisement
ಪೊಲೀಸ್ ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ಅದೊಂದು ರಣಭೀಕರ ಎನ್ ಕೌಂಟರ್ ಆಗಿತ್ತು ಎಂದು ಹೇಳಲಾಗುತ್ತಿದೆ. ಅಟ್ಟಾರಿ ಅಂತಾರಾಷ್ಟ್ರೀಯ ಗಡಿ ಸಮೀಪದ ಹೋಶಿಯಾರ್ ನಗರದ ಭಾಕ್ನಾ ಗ್ರಾಮದಲ್ಲಿ ಗ್ಯಾಂಗ್ ಸ್ಟರ್ ಗಳಾದ ಮನ್ ಪ್ರೀತ್ ಮನ್ನು, ಜಗರೂಪ್ ರೂಪ್ ಸೇರಿದಂತೆ ಒಟ್ಟು ನಾಲ್ಕು ಜನರು ಇದ್ದರು ಎಂದು ಹೇಳಲಾಗುತ್ತಿದೆ. ಸದ್ಯ ಸಿಕ್ಕಿರುವ ಮಾಹಿತಿ ಪ್ರಕಾರ ನಾಲ್ಕೂ ಜನರನ್ನು ಎನ್ ಕೌಂಟರ್ ನಲ್ಲಿ ಹತ್ಯ ಮಾಡಲಾಗಿದೆಯಂತೆ. ಇದನ್ನೂ ಓದಿ:ಪಡ್ಡೆಹುಡುಗರ ಟೆಂಪ್ರೇಚರ್ ಹೆಚ್ಚಿಸಿದ ದಿಶಾ ಪಟಾನಿ ನಯಾ ಫೋಟೋಶೂಟ್
Advertisement
Advertisement
ಸಿಂಧು ಮೂಸೆವಾಲಾ ಹತ್ಯೆಯ ಹಿಂದೆ ಗ್ಯಾಂಗ್ ಸ್ಟರ್ ಲಾರೆನಸ್ ಬಿಶ್ನೋಯಿ ಅವರ ತಂಡದ ಕೈವಾಡವಿದೆ ಎಂದು ಹೇಳಲಾಗಿತ್ತು. ಹತ್ಯೆಯಾದ ಕೆಲವೇ ದಿನಗಳಲ್ಲಿ ಈ ಗ್ಯಾಂಗ್ ನ ಸದಸ್ಯರಾದ ಶಾರ್ಪ್ ಶೂಟರ್ ಅಂಕಿತ್, ಸಚಿನ್ ಭಿವಾನಿ ಎನ್ನುವ ಪ್ರಮುಖ ಆರೋಪಿಗಳನ್ನು ಮೊದಲು ಬಂಧಿಸಿದ್ದರು. ಆನಂತರ ನಾಲ್ವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಮತ್ತಷ್ಟು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿತ್ತು. ಅಲ್ಲದೇ, ನಟ ಸಲ್ಮಾನ್ ಖಾನ್ ಸೇರಿದಂತೆ ಹಲವರಿಗೆ ಇದೇ ಗ್ಯಾಂಗ್ ಜೀವ ಬೆದರಿಕೆ ಕೂಡ ನೀಡಿತ್ತು.
Advertisement
ಇಂದು ನಡೆದ ಎನ್ ಕೌಂಟರ್ ನಲ್ಲಿ ಲಾರೆನ್ಸ್ ಬಿಶ್ನೋಯಿ ತಂಡದ ನಾಲ್ವರ ಸದಸ್ಯರು ಮೃತರಾಗಿದ್ದಾರೆ ಎಂದು ತಿಳಿದು ಬಂದಿದ್ದು, ಒಬ್ಬ ಮಾಧ್ಯಮ ಪ್ರತಿನಿಧಿಗೆ ಕಾಲಿಗೆ ಗುಂಡೇಟು ಬಿದ್ದಿದೆ. ಎನ್ ಕೌಂಟರ್ ನಲ್ಲಿ ಭಾಗಿಯಾದ ಮೂವರು ಪೊಲೀಸರಿಗೂ ಗಾಯಗಳಾಗಿವೆ.