ನವದೆಹಲಿ: ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ರಾಹುಲ್ ಗಾಂಧಿ (Rahul Gandhi) ಜೈಲು ಶಿಕ್ಷೆಗೆ ಗುರಿಯಾದ ಬೆನ್ನಲ್ಲೇ ನಾನು ನರೇಂದ್ರ ಮೋದಿ ವಿರುದ್ಧ ನ್ಯಾಯಾಲಯದಲ್ಲಿ ಮಾನನಷ್ಟ ಕೇಸ್ ಹಾಕುತ್ತೇನೆ ಎಂದು ಕಾಂಗ್ರೆಸ್ ನಾಯಕಿ, ಮಾಜಿ ಸಚಿವೆ ರೇಣುಕಾ ಚೌಧರಿ (Renuka Chowdhury) ಹೇಳಿದ್ದಾರೆ.
ನನ್ನನ್ನು ಶೂರ್ಪನಖಿ (Surpanaka) ಎಂದು ಉಲ್ಲೇಖಿಸಿದ್ದಾರೆ. ಹೀಗಾಗಿ ನಾನು ಮೋದಿ (Narendra Modi) ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ನ್ಯಾಯಾಲಯಗಳು ಎಷ್ಟು ವೇಗವಾಗಿ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ನೋಡೋಣ ಎಂದು ರೇಣುಕಾ ಚೌಧರಿ ಟ್ವೀಟ್ ಮಾಡಿ ತಿಳಿಸಿದ್ದಾರೆ.
Advertisement
This classless megalonaniac referred to me as Surpanakha on the floor of the house.
I will file a defamation case against him. Let's see how fast courts will act now.. pic.twitter.com/6T0hLdS4YW
— Renuka Chowdhury (@RenukaCCongress) March 23, 2023
Advertisement
Advertisement
ಮೋದಿ ಹೇಳಿದ್ದೇನು?
2018ರ ರಾಜ್ಯಸಭಾ (Rajya Sabha) ಕಲಾಪದ ಹಳೆ ವಿಡಿಯೋದಲ್ಲಿ ಆಧಾರ್ ಕಾರ್ಡ್‌ಗೆ (Aadhar Card) ಸಂಬಂಧಿಸಿದಂತೆ ಪ್ರಧಾನಿ ಮೋದಿ ಹೇಳಿಕೆಗೆ ಸಂಸದೆ ರೇಣುಕಾ ಚೌಧರಿ ಜೋರಾಗಿ ನಗುತ್ತಿರುತ್ತಾರೆ. ಈ ಸಂದರ್ಭದಲ್ಲಿ ಸಭಾಧ್ಯಕ್ಷ ವೆಂಕಯ್ಯ ನಾಯ್ಡು (Venkaiah Naidu) ಅವರು, “ನಿಮ್ಮ ಸಮಸ್ಯೆ ಏನು? ನಿಮಗೇನಾದರೂ ಸಮಸ್ಯೆ ಆಗಿದ್ದರೆ ವೈದ್ಯರ ಬಳಿ ಹೋಗಿ, ದಯವಿಟ್ಟು ಸುಮ್ಮನೇ ಕುಳಿತುಕೊಳ್ಳಿ” ಎಂದು ತರಾಟೆಗೆ ತೆಗೆದುಕೊಳ್ಳುತ್ತಾರೆ.
Advertisement
ವೆಂಕಯ್ಯ ನಾಯ್ಡು ಸೂಚನೆಯನ್ನೂ ಧಿಕ್ಕರಿಸಿ ರೇಣುಕಾ ನಗುವುದನ್ನು ಮುಂದುವರಿಸುತ್ತಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, “ಸಭಾಪತಿಜೀ ರೇಣುಕಾಜೀ ಅವರಿಗೆ ನೀವು ನಗಲು ಬಿಡಿ. ರಾಮಾಯಣ (Ramayana) ಧಾರಾವಾಹಿಯ ನಂತರ ಈ ರೀತಿಯ ನಗುವನ್ನು ಕೇಳುವ ಸೌಭಾಗ್ಯ ಇಂದು ನಮಗೆ ಒದಗಿ ಬಂದಿದೆ” ಎಂದು ವ್ಯಂಗ್ಯವಾಡುತ್ತಾರೆ.
ಮೋದಿ ರಾಮಾಯಣದ ಉದಾಹರಣೆ ನೀಡಿ ರೇಣುಕಾ ಚೌಧರಿ ಅವರ ಕಾಲೆಳೆಯುತ್ತಿದ್ದಂತೆ ಬಿಜೆಪಿ ಸಂಸದರು ಬೆಂಚನ್ನು ಕುಟ್ಟಿ ಜೋರಾಗಿ ಬಿದ್ದು ಬಿದ್ದು ನಗಲು ಶುರು ಮಾಡುತ್ತಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನೂ ಓದಿ: ಮೋದಿಗೆ ನಿದ್ರಾಹೀನತೆಯ ಕಾಯಿಲೆಯಿದೆ: ಕೇಜ್ರಿವಾಲ್
Three things:
1. Modiji didn’t call you Surpanakha;
2. Nothing said in the parliament can be taken to court; &
3. You calling Modiji “megalomaniac” is nothing but a desperate attempt to come into the notice of Gandhi family.
— Shashank Shekhar Jha (@shashank_ssj) March 23, 2023
ಕೇಸ್ ಹಾಕಲು ಸಾಧ್ಯವೇ?
ಸಾಮಾಜಿಕ ಜಾಲತಾಣದಲ್ಲಿ ಈಗ ಕಾಂಗ್ರೆಸ್ ನಾಯಕರು ಈ ಹೇಳಿಕೆಯ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದರೆ ಕೆಲವರು ಈ ಹೇಳಿಕೆ ವಿರುದ್ಧ ನ್ಯಾಯಾಲಯದಲ್ಲಿ ಕೇಸ್ ದಾಖಲಿಸಲು ಬರುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮೊದಲನೆಯದಾಗಿ ಮೋದಿ ಎಲ್ಲಿಯೂ ನೇರವಾಗಿ ರೇಣುಕಾ ಚೌಧರಿ ಅವರನ್ನು ʼಶೂರ್ಪನಖಿʼ ಎಂದು ಸಂಬೋಧನೆ ಮಾಡಿಲ್ಲ. ಎರಡನೇಯದಾಗಿ ಮೋದಿ ರಾಜ್ಯಸಭಾ ಕಲಾಪದಲ್ಲಿ ಮಾತನಾಡಿದ್ದಾರೆ. ಸಂಸತ್ತು ಅಥವಾ ರಾಜ್ಯದ ಶಾಸನ ಸಭೆಯಲ್ಲಿ ಸದಸ್ಯರ ವಿರುದ್ಧ ಏನೇ ಮಾತನಾಡಿದರೂ ಆ ಹೇಳಿಕೆಯನ್ನು ಪ್ರಶ್ನಿಸಿ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ. ಸದನದಲ್ಲಿ ಮಾತನಾಡಿ ಹಕ್ಕು ಚ್ಯುತಿಯಾಗಿದ್ದರೆ ಅದನ್ನು ಸದನದಲ್ಲೇ ಪ್ರಶ್ನೆ ಮಾಡಬೇಕು. ಈ ವಿಚಾರದಲ್ಲಿ ಅಂತಿಮ ನಿರ್ಧಾರ ಸ್ಪೀಕರ್ ತೆಗೆದುಕೊಳ್ಳಬಹುದೇ ವಿನಾ: ನ್ಯಾಯಾಧೀಶರಿಗೆ ತೆಗೆದುಕೊಳ್ಳಲು ಬರುವುದಿಲ್ಲ. ಹೀಗಾಗಿ ಈ ರೇಣುಕಾ ಚೌಧರಿ ಈ ವಿಷಯವನ್ನು ಯಾವ ಆಧಾರದಲ್ಲಿ ಕೋರ್ಟ್‌ನಲ್ಲಿ ಪ್ರಶ್ನೆ ಮಾಡುಬಹುದು ಎಂಬ ಕುತೂಹಲ ಈಗ ಹೆಚ್ಚಾಗಿದೆ.
ಮೋದಿ ಮಾತನಾಡಿದ್ದು 2018ರಲ್ಲಿ. ಅಲ್ಲಿಂದ ಇಲ್ಲಿಯವರೆಗೂ ಎಲ್ಲಿಯೂ ಕೇಸ್ ಹಾಕದ ನೀವು ಈಗ ದೂರು ನೀಡುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ರೇಣುಕಾ ಚೌಧರಿ ಅವರಿಗೆ ನೆಟ್ಟಿಗರು ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ.