ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renuka Swamy) ದರ್ಶನ್ (Darshan) ಮತ್ತು ಪವಿತ್ರಾ ಗೌಡರನ್ನು (Pavithra Gowda) ಪೊಲೀಸರು ವಿಡಿಯೋವನ್ನು ಆಧಾರಿಸಿ ಬಂಧನ ಮಾಡಿದ್ದಾರೆ.
ಹೌದು, ಚಿತ್ರದುರ್ಗದಿಂದ ಅಪಹರಣ ಮಾಡಿದ ಬಳಿಕ ರೇಣುಕಾಸ್ವಾಮಿಯನ್ನು ಆರ್‌ಆರ್ ನಗರದಲ್ಲಿರುವ ಪಟ್ಟಣಗೆರೆ ಶೆಡ್‌ಗೆ ಕರೆ ತಂದಿದ್ದರು. ಈ ಶೆಡ್‌ನಲ್ಲಿ ದರ್ಶನ್ ಗ್ಯಾಂಗ್ (Darshan Gang) ಹಲ್ಲೆ ನಡೆಸಿ ಹತ್ಯೆ ನಡೆಸಿತ್ತು.
- Advertisement -
ದರ್ಶನ್ ಗ್ಯಾಂಗ್ ಹಲ್ಲೆ ನಡೆಸುತ್ತಿರುವ ದೃಶ್ಯ ಶೆಡ್‌ನಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ (CCTV) ಸೆರೆಯಾಗಿತ್ತು. ದರ್ಶನ್ ಮತ್ತು ಪವಿತ್ರಾ ಗೌಡ ಇಬ್ಬರು ಸೇರಿ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ- ಚಿಕ್ಕಣ್ಣ ಬಳಿಕ ಮತ್ತೊಬ್ಬ ನಟನಿಗೆ ವಿಚಾರಣೆ ಭೀತಿ!
- Advertisement -
- Advertisement -
ಪ್ರಕರಣ ಬೆಳಕಿಗೆ ಬಂದಾಗ ಆರೋಪಿಗಳ ಹೇಳಿಕೆ ನೀಡಿ ಪೊಲೀಸರು ದರ್ಶನ್ ಅವರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು. ಆದರೆ ಪೊಲೀಸರು ಸಿಸಿಟಿವಿ ದೃಶ್ಯವನ್ನು ಆಧಾರಿಸಿ ಬಂಧಿಸಿದ್ದಾರೆ ಎಂಬ ವಿಚಾರ ಈಗ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
- Advertisement -
ದರ್ಶನ್, ಪವಿತ್ರಗೌಡ ಇಬ್ಬರೂ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಇಬ್ಬರೂ ಒಟ್ಟೊಟ್ಟಿಗೆ ಬಂದು ಹೋಗಿರುವ ದೃಶ್ಯಗಳು ಸೆರೆಯಾಗಿದೆ. ಸದ್ಯ ಪೊಲೀಸರ ಬಳಿಕ 30 ನಿಮಿಷದ ವಿಡಿಯೋವಿದ್ದು ಇದೇ ಪ್ರಕರಣಕ್ಕೆ ಪ್ರಮುಖ ಸಾಕ್ಷಿಯಾಗಲಿದೆ. ಸಿಸಿಟಿವಿ ವಿಚಾರವನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದ ಬಳಿಕ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಹಲ್ಲೆಯ ತೀವ್ರತೆಗೆ ಪ್ರಜ್ಞೆ ತಪ್ಪಿದ್ದ ರೇಣುಕಾಸ್ವಾಮಿ ಕೈ, ಕಿವಿ, ಹೊಟ್ಟೆಗೆ ಕರೆಂಟ್ ಶಾಕ್
ಕೆಲ ದಿನಗಳ ಹಿಂದೆ ಪೊಲೀಸ್ ಅಧಿಕಾರಿಯೊಬ್ಬರು ಸ್ನೇಹಿತನ ಜೊತೆ ಮಾತನಾಡಿದ್ದರು. ಮಾತುಕತೆಯ ವೇಳೆ ಅಧಿಕಾರಿ ದರ್ಶನ್ ಮತ್ತು ಗ್ಯಾಂಗ್ (Darshan Gang) ಬರೆ ಹಾಕಿಸಿ ಸಿಕ್ಕಾಪಟ್ಟೆ ಟಾರ್ಚರ್ ನೀಡಿದ್ದಾರೆ. ಎಲೆಕ್ಟ್ರಿಕ್ ಶಾಕ್ ನೀಡಿ ಕೋಳಿ ಎಸೆದಂತೆ ಎಸೆದು ಮಿನಿ ಟ್ರಕ್‌ಗೆ ಗುದ್ದಿ ಹತ್ಯೆ ಮಾಡಿದ್ದಾರೆ ಎಂದು ವಿವರಿಸಿದ್ದರು.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪವಿತ್ರಾ ಗೌಡ ಮೊದಲ ಆರೋಪಿಯಾಗಿದ್ದರೆ ದರ್ಶನ್ ಎರಡನೇ ಆರೋಪಿಯಾಗಿದ್ದಾರೆ.