ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ಗೆ (Darshan) ಹೈಕೋರ್ಟ್ ನೀಡಿದ ಜಾಮೀನು ಆದೇಶವನ್ನು ಸುಪ್ರೀಂನಲ್ಲಿ (Supreme Court) ಪ್ರಶ್ನಿಸಲು ಗೃಹ ಸಚಿವಾಲಯ ಗ್ರೀನ್ ಸಿಗ್ನಲ್ ನೀಡಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ.
ಗೃಹ ಸಚಿವಾಲಯ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಸೋಮವಾರದ ಬಳಿಕ ಪೊಲೀಸರು ಮೇಲ್ಮನವಿ ಸಲ್ಲಿಕೆ ಮಾಡುವ ಸಾಧ್ಯತೆಯಿದೆ. ಈ ಪ್ರಕರಣದಲ್ಲಿ ಪೊಲೀಸರ ಪರವಾಗಿ ವಾದ ಮಂಡಿಸಲು ಹಿರಿಯ ವಕೀಲ ವಿಎನ್ ರಘುಪತಿ ಅವರನ್ನು ಗೃಹ ಸಚಿವಾಲಯ ನೇಮಿಸಿದೆ. ಇದನ್ನೂ ಓದಿ: BBK 11: ಹನುಮಂತನ ಪ್ರಪೋಸ್‌ಗೆ ನಾಚಿ ನೀರಾದ ಚಾರು
ಅನಾರೋಗ್ಯದ ಕಾರಣಕ್ಕಾಗಿ ದರ್ಶನ್ ಅವರಿಗೆ ಹೈಕೋರ್ಟ್ (High Court) 6 ವಾರಗಳ ಮಧ್ಯಂತರ ಜಾಮೀನನ್ನು ಮಂಜೂರು ಮಾಡಿತ್ತು. ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ದರ್ಶನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಇನ್ನೂ ಕೂಡ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿಲ್ಲ. ಈ ಎಲ್ಲಾ ಅಂಶಗಳನ್ನು ಪೊಲೀಸರು ಮೇಲ್ಮನವಿ ಅರ್ಜಿಯಲ್ಲಿ ಪ್ರಸ್ತಾಪಿಸಲಿದ್ದಾರೆ.