ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅರೆಸ್ಟ್ ಆಗಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ದರ್ಶನ್‌ರನ್ನು ಬಂಧಿಸಿದ್ದು, ಇದೀಗ ಮಗನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಕೊಲೆ ಪ್ರಕರಣದಲ್ಲಿ ದರ್ಶನ್ ಹೆಸರು ಕೇಳಿ ಬಂದ ಹಿನ್ನಲೆಯಲ್ಲಿ ಪೋಷಕರು ಹಿಡಿ ಶಾಪ ಹಾಕುತ್ತಿದ್ದಾರೆ.
ಇದೀಗ ಕೊಲೆಯಾದ ರೇಣುಕಾಸ್ವಾಮಿ ಪೋಷಕರು ಕೂಡ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಬಂದಿದ್ದು, ಅಶ್ಲೀಲ ಮೆಸೇಜ್ ಮಾಡಿದ್ರೆ ಕಾನೂನು ಕ್ರಮ ಕೈಗೊಳ್ಳಬಹುದಿತ್ತು. ಅದು ಬಿಟ್ಟು ಕೊಲೆ ಮಾಡಿಸುವ ಮನಸ್ಥಿತಿಗೆ ಯಾಕೆ ಬಂದರು ಎಂದು ದರ್ಶನ್ ವಿರುದ್ಧ ರೇಣುಕಾಸ್ವಾಮಿ ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾನೂನು ಮೂಲಕ ಹೋರಾಟ ಮಾಡಬಹುದಿತ್ತು ಎಂದು ರೇಣುಸ್ವಾಮಿ ಪೋಷಕರಾದ ಶಿವನಗೌಡ ಮತ್ತು ರತ್ನಪ್ರಭಾ ದಂಪತಿ ಕಣ್ಣೀರಿಟ್ಟಿದ್ದಾರೆ.
ಅಂದಹಾಗೆ, ಚಿತ್ರದುರ್ಗದ ರೇಣುಕಾಸ್ವಾಮಿ ಅವರು ಪವಿತ್ರಾ ಗೌಡ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ಮಾಡಿದ ನಂತರ ರೇಣುಕಾಸ್ವಾಮಿರನ್ನು ಜೂನ್ 9ರಂದು ಹತ್ಯೆ ಮಾಡಲಾಗಿತ್ತು. ಕೊಲೆ ಮಾಡಿದ ಇಬ್ಬರು ಅರೋಪಿಗಳ ಜೊತೆ ದರ್ಶನ್ ನಿರಂತರ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿ ಬಂದಿದೆ. ಪೊಲೀಸ್ ವಿಚಾರಣೆಯ ಸಂದರ್ಭದಲ್ಲಿ ಕೊಲೆ ಆರೋಪಿಗಳು ದರ್ಶನ್ ಸೂಚನೆಯಂತೆ ಕೊಲೆ ಮಾಡಿದ್ದೇವೆ. ಕೊಲೆಗೆ ದರ್ಶನ್ ಸುಪಾರಿ ನೀಡಿದ್ದರು ಎಂದು ಆರೋಪಿಗಳು ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ.
ಸದ್ಯ ಈ ಪ್ರಕರಣದ ವಿಚಾರವಾಗಿ ದರ್ಶನ್ ಮತ್ತು ಪವಿತ್ರಾ ಗೌಡ ಇಬ್ಬರನ್ನೂ ಕೂಡ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ.