ನವದೆಹಲಿ: ಮಹಿಳೆಯರ ಬಟ್ಟೆಯಿಂದ ಪುರುಷರು ಉದ್ರೇಕಕ್ಕೆ ಒಳಗಾಗುತ್ತಾರೆ ಎಂಬ ಹೇಳಿಕೆ ವಿವಾದ ಆಗುತ್ತಿದ್ದಂತೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ಕ್ಷಮೆ ಕೋರಿದರು.
ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ನನ್ನ ಹೇಳಿಕೆಯನ್ನು ಅಪಾರ್ಥವಾಗಿ ತಿಳಿದುಕೊಳ್ಳಬೇಡಿ. ಪ್ರಿಯಾಂಕ ಗಾಂಧಿ ವಾದ್ರಾ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದೇನೆ. ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ಹೇಳಿದರು.
ಈ ಹಿಂದೆ ಮಹಿಳೆಯರು ಬಟ್ಟೆ ನೋಡಿ ಪುರುಷರು ಉದ್ವೇಗಕ್ಕೆ ಒಳಗಾಗುತ್ತಾರೆ. ಮಹಿಳೆಯರ ಬಟ್ಟೆಯಿಂದ ಅತ್ಯಾಚಾರಕ್ಕೆ ಪ್ರಚೋದನೆ ನೀಡುತ್ತದೆ. ವಿದ್ಯಾರ್ಥಿಗಳು ಮೈತುಂಬಾ ಬಟ್ಟೆ ಹಾಕಿಕೊಳ್ಳಬೇಕು. ಮಹಿಳೆಯರ ಬಟ್ಟೆ ನೋಡಿ ಪುರುಷರು ಉದ್ವೇಗಕ್ಕೆ ಒಳಗಾಗುತ್ತಾರೆ. ಇದು ಒಳ್ಳೆಯದಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಮಹಿಳೆಯರ ಬಟ್ಟೆ ನೋಡಿ ಪುರುಷರು ಉದ್ವೇಗಕ್ಕೆ ಒಳಗಾಗುತ್ತಾರೆ: ರೇಣುಕಾಚಾರ್ಯ
ಅತ್ಯಾಚಾರ ಹೆಚ್ಚಾಗಲು ಮಹಿಳೆಯರ ಧರಿಸಿನಿಂದ ಪುರುಷರು ಉದ್ವೇಗಕ್ಕೆ ಒಳಗಾಗುವುದೇ ಕಾರಣ. ಮಹಿಳೆಯರು ಬಟ್ಟೆಯಿಂದ ಅತ್ಯಾಚಾರಕ್ಕೆ ಪ್ರಚೋದನೆ ನೀಡುತ್ತದೆ. ಪ್ರಿಯಾಂಕಾ ಗಾಂಧಿ ಬಿಕಿನಿ ಪದ ಬಳಸಬಾರದಿತ್ತು. ಸಮವಸ್ತ್ರ ವಿಷಯದ ನಡುವೆ ಬಿಕಿನಿ ಪದ ಬಳಕೆ ತಪ್ಪು. ಪ್ರಿಯಾಂಕಾ ಗಾಂಧಿ ಅವರು ಕ್ಷಮೆ ಕೇಳಬೇಕು. ದೇಶದ ಧರ್ಮ, ಸಂಸ್ಕೃತಿ, ಪರಂಪರೆ ಅವರಿಗೆ ಗೊತ್ತಿಲ್ಲ. ಕೇಸರಿ ನಮ್ಮ ಪರಂಪರೆಯಾಗಿದೆ ಎಂದು ಪ್ರಿಯಾಂಕಾ ಗಾಂಧಿ ಅವರ ಟ್ವೀಟ್‍ಗೆ ತೀರುಗೇಟು ನೀಡಲು ಹೋಗಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಬಿಕಿನಿ, ಜೀನ್ಸ್, ಹಿಜಬ್ ಹೀಗೆ ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು : ಪ್ರಿಯಾಂಕಾ ಗಾಂಧಿ