ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರ ಸ್ಥಿರವಾಗಿಲ್ಲ ಎನ್ನುವ ವಿಷಯವನ್ನು ಡೈವರ್ಟ್ ಮಾಡಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ಮಾಡಿದ್ದಾರೆ ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ವ್ಯಂಗ್ಯವಾಡಿದ್ದಾರೆ.
ಡಾಲರ್ಸ್ ಕಾಲೋನಿಯ ಬಿಎಸ್‍ವೈ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ ಆಂತರಿಕ ಕಚ್ಚಾಟವು ಗೊತ್ತಾಗಬಾರದೆನ್ನುವ ಉದ್ದೇಶದಿಂದ ಪೆಟ್ರೋಲ್ ಹಾಗೂ ಡೀಸೆಲ್ ದರಗಳ ಮೇಲೆ ಪ್ರತಿ ಲೀಟರ್‍ಗೆ 2 ರೂಪಾಯಿ ಇಳಿಕೆ ಮಾಡಿದ್ದಾರೆ. ಒಂದು ವೇಳೆ ಇವರು ಮಾಡುವುದಾದರೆ ಕನಿಷ್ಟ 10 ರೂಪಾಯಿಯನ್ನು ಇಳಿಕೆ ಮಾಡಬೇಕಾಗಿತ್ತು. ತಮ್ಮಲ್ಲಿನ ಆಂತರಿಕ ಕಿತ್ತಾಟವನ್ನು ಮರೆಮಾಚಲು ಕಿಂಗ್‍ಪಿನ್ ಎನ್ನುವ ಏನೇನೋ ಕಥೆ ಹೇಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
Advertisement
Advertisement
ಸಿಎಂ ಕುಮಾರಸ್ವಾಮಿಯವರಿಗೆ ತಾಕತ್ ಇದ್ದರೆ ಅವರು ಮಾಡಿರುವ ಆರೋಪಕ್ಕೆ ಸಂಬಂಧಪಟ್ಟವರನ್ನು ಶೀಘ್ರವೇ ಬಂಧಿಸಲಿ. ನಾವು ಬರೀ ರಾಜಕಾರಣ ಮಾಡಿದರೆ ನಮ್ಮ ಕ್ಷೇತ್ರದ ಜನ ನಮ್ಮನ್ನ ಕ್ಷಮಿಸುವುದಿಲ್ಲ. ಹೀಗಾಗಿ ನಾವು ಮೊದಲು ನಮ್ಮ ಕ್ಷೇತ್ರಗಳ ಅಭಿವೃದ್ಧಿಯ ಕಡೆ ಗಮನ ನೀಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಸಿಹಿ ಸುದ್ದಿ ನೀಡಿದ ಕುಮಾರಣ್ಣ-ಲೀಟರ್ ಪೆಟ್ರೋಲ್, ಡೀಸೆಲ್‍ಗೆ 2 ರೂ. ಇಳಿಕೆ
Advertisement
ಬಿಎಸ್‍ವೈ ನಿವಾಸಕ್ಕೆ ಸಂಕೇಶ್ವರ್, ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ನಾಯಕರು ಭೇಟಿ ನೀಡಿದ್ದು, ಪ್ರಸಕ್ತ ರಾಜ್ಯ ರಾಜಕೀಯ ಬೆಳವಣಿಗೆಗಳ ಚರ್ಚೆ ನಡೆಸಿದ್ದಾರೆ. ಅಲ್ಲದೇ ಚರ್ಚೆಯ ಬಳಿಕ ಯಡಿಯೂರಪ್ಪನವರು ಕೈ ನೋವಿನ ಚಿಕಿತ್ಸೆ ಪಡೆಯಲು ಜಿಂದಾಲ್ ಆಸ್ಪತ್ರೆಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv