ಬೆಂಗಳೂರು: ರಾಜ್ಯದ ಜನರಿಗೆ ಕಾಂಗ್ರೆಸ್ ಸರ್ಕಾರ ಮಕ್ಮಲ್ ಟೋಪಿ ಹಾಕಿದೆ. ಒಂದು ಗುಂಡಿ ಮುಚ್ಚೋ ಯೋಗ್ಯತೆಯೂ ಈ ಸರ್ಕಾರಕ್ಕೆ ಇಲ್ಲ ಎಂದು ಮಾಜಿ ಸಚಿವ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಆಂತರಿಕ ಕಿತ್ತಾಟದ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಜನರಿಗೆ ಮಕ್ಮಲ್ ಟೋಪಿ ಹಾಕಿ ಅಧಿಕಾರಕ್ಕೆ ಬಂದ ಸರ್ಕಾರ ಐಸಿಯುನಲ್ಲಿದೆ. ಸಿದ್ದರಾಮಯ್ಯ ನಾನೇ ಸಿಎಂ ಎನ್ನುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಎಲ್ಲಾ ದೇವರ ಮೊರೆ ಹೋಗುತ್ತಿದ್ದಾರೆ. ಇವರಿಬ್ಬರ ಜಗಳದಲ್ಲಿ ಕೂಸು ಬಡವಾದಂತಾಗಿದೆ ರಾಜ್ಯದ ಸ್ಥಿತಿ. ಗುಂಡಿ ಮುಚ್ಚಲೂ ಇವರ ಬಳಿ ಯೋಗ್ಯತೆ ಇಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಾದಕ ವಸ್ತು, ಶಸ್ತ್ರಾಸ್ತ್ರ ಕೇಸ್‌ಲ್ಲಿ ಕರ್ನಾಟಕದ ಇಬ್ಬರು ಸೇರಿ 9 ಜನ ಅರೆಸ್ಟ್
ರೈತರ ಸಮಸ್ಯೆಗಳಿಗೋಸ್ಕರ ಶುಕ್ರವಾರ ಸಿಎಂ, ಡಿಸಿಎಂ ಅವರನ್ನು ಭೇಟಿ ಮಾಡಿದ್ದೆವು. 21ರಂದು ದಾವಣೆಗೆರೆಯಲ್ಲಿ ಪ್ರತಿಭಟನೆ ಮಾಡಿದಾಗ 1,000 ಪೊಲೀಸರನ್ನು ನಿಯೋಜಿಸಿ ನಮ್ಮನ್ನು ಬಂಧಿಸಿದ್ದರು. ಪೊಲೀಸರು ಸರ್ಕಾರದ ಏಜೆಂಟರಾಗಿ ಕೆಲಸ ಮಾಡಿದ್ದರು ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಕೆಶಿ
ಭದ್ರ ಬಲದಂಡೆ ನಾಲೆ ಸೀಳಿ ನೀರು ತೆಗೆದುಕೊಂಡು ಹೋಗಲು ಯಡಿಯೂರಪ್ಪ ಆದೇಶ ಮಾಡಿಲ್ಲ ಎಂದು ಕಾಂಗ್ರೆಸ್‌ನವರು ಈಗ ಅಪಪ್ರಚಾರ ಮಾಡುತ್ತಿದ್ದಾರೆ. ಈ ಬಗ್ಗೆ ಇಂದು ಯಡಿಯೂರಪ್ಪನವರ ಗಮನಕ್ಕೆ ಕೂಡಾ ತಂದಿದ್ದೇವೆ. ದೊಡ್ಡ ದೊಡ್ಡ ನೀರಾವರಿ ಯೋಜನೆಗಳನ್ನು ಕೊಟ್ಟಿದ್ದು ಬಿಜೆಪಿ ಸರ್ಕಾರ ಎಂದಿದ್ದಾರೆ.
ಸಿಎಂ, ಡಿಸಿಎಂ ಭೇಟಿ ಮಾಡಿ ಎಲ್ಲಾ ವಿಚಾರ ಗಮನಕ್ಕೆ ತಂದಿದ್ದೇವೆ. ಇಂದು ಸಂಜೆ ನಾವು ದಾವಣಗೆರೆಯಲ್ಲಿ ಸಭೆ ಸೇರುತ್ತೇವೆ. ಬುಧವಾರ ದೊಡ್ಡ ಮಟ್ಟದಲ್ಲಿ ಟ್ರ‍್ಯಾಕ್ಟರ್ ರ‍್ಯಾಲಿ ಮಾಡುತ್ತಿದ್ದೇವೆ. ಡಿ.ಕೆ.ಶಿವಕುಮಾರ್ ಸ್ಥಳಕ್ಕೆ ಭೇಟಿ ಕೊಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಬೈ ಮಿಸ್ ಆಗಿ ಹೇಳಿರಬೇಕು, ಕ್ಷಮಿಸಿಬಿಡೋಣ: ನಟಿ ಹರ್ಷಿಕಾ ಪೂಣಚ್ಚ
ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ದಾವಣಗೆರೆ ಜಿಲ್ಲಾ ಬಿಜೆಪಿ ಸಭೆ ವಿಚಾರವಾಗಿ ಮಾತನಾಡಿದ ಅವರು, ಸಂಘಟನೆ ದೃಷ್ಟಿಯಿಂದ ನಮಗೆ ನಿನ್ನೆ ಮಾರ್ಗದರ್ಶನ ಮಾಡಿದ್ದಾರೆ. ಮುಂದಿನ ಚುನಾವಣೆಗಳಿಗೆ ಕಾರ್ಯಕರ್ತರ ನೈತಿಕ ಸ್ಥೈರ್ಯ ಹೆಚ್ಚಿಸಲು ಸೂಚನೆ ಕೊಟ್ಟಿದ್ದಾರೆ. ನಾಲ್ಕು ಗೋಡೆಗಳ ಮಧ್ಯೆ ಏನು ಹೇಳಬೇಕೋ ಹೇಳಿದ್ದೇವೆ. ಜೆ.ಹೆಚ್.ಪಟೇಲರು ಹೇಳಿದಂತೆ ಹೋರಿ ಹೋಗುತ್ತಿತ್ತು, ತೋಳ ಕಾದು ಕೂತಿತ್ತು ಎನ್ನುವ ರೀತಿ ಕಥೆ ಆಗಿದೆ ಎಂದು ಹೇಳಿದ್ದಾರೆ.