ದಾವಣಗೆರೆ: ಹಾಲಿ ಶಾಸಕ ರೇಣುಕಾಚಾರ್ಯ (Renukacharya) ಸಹೋದರನ ಮಗ ಚಂದ್ರಶೇಖರ್ (Chandru) ಸಾವು ಪ್ರಕರಣ ಅಂತಿಮ ಹಂತಕ್ಕೆ ಬಂದಿದೆ. ಈಗಾಗಲೇ ಮರಣೋತ್ತರ ಪರೀಕ್ಷೆ ವರದಿ ಪೊಲೀಸರ ಕೈ ಸೇರಿದೆ. ಮರಣೋತ್ತರ ಪರೀಕ್ಷೆಯ ಪ್ರಕಾರ ಶ್ವಾಸಕೋಶದ ಒಳಗೆ ನೀರು ನುಗ್ಗಿ ಸಾವನ್ನಪ್ಪಿದ್ದಾರೆ ಎಂದು ವರದಿಯನ್ನು ಕೊಟ್ಟಿದ್ದಾರೆ. ಇದನ್ನೂ ಓದಿ: ನನ್ನ ತೆಗೆಯಲು ನಿಖಿಲ್‍ರನ್ನು ಬಲಿ ಕೊಟ್ರು: ಎಲ್.ಆರ್.ಶಿವರಾಮೇಗೌಡ
Advertisement
ಆದರೆ ಆಕ್ಸಿಡೆಂಟ್ ಸಂಭವಿಸಿದ್ಯಾ ಎಂಬುದನ್ನು ತಿಳಿಯಲು ವಿಧಿ ವಿಜ್ಞಾನ ಪ್ರಯೋಗಾಲಯದ (FSL) ವರದಿಗೆ ಪೊಲೀಸರು ಕಾಯುತ್ತಾ ಇದ್ರು. ಈಗ ಎಫ್‍ಎಸ್‍ಎಲ್ ಅಧಿಕಾರಿಗಳು ಕೂಡ ವರದಿ ನೀಡಿದ್ದಾರೆ. ಈಗಾಗಲೇ ಸರ್ಕಾರಿ ಎಫ್‍ಎಸ್‍ಎಲ್ ಕೂಡ ವರದಿ ನೀಡಿದೆ. ಇದರ ಪ್ರಕಾರ ಕಾರು ಅತಿಯಾದ ಸ್ಪೀಡ್‍ನಿಂದ ಡಿಕ್ಕಿ ಹೊಡೆದು ನೀರಿಗೆ ಬಿದ್ದಿದೆ ಎಂದಿದ್ದಾರೆ. ಪ್ರಕರಣದ ಮರುಸೃಷ್ಟಿಗೆ ತೆರಳಿದ್ದ ಖಾಸಗಿ ವಿಧಿ ವಿಜ್ಞಾನ ತಜ್ಞ ಫಣೀಂದ್ರ ಕೂಡ 40 ಪುಟಗಳ ವರದಿಯನ್ನು ನೀಡಿದ್ದಾರೆ. ವರದಿಯ ಪ್ರಕಾರ ಅಪಘಾತ ಸಂಭವಿಸಿದೆ ಎಂದು ವರದಿ ನೀಡಿದ್ದಾರೆ. ಇನ್ನು ಒಂದು ಹಂತದ ಪರೀಕ್ಷೆ ಬಾಕಿ ಇದೆ ಎಂದು ಫಣೀಂದ್ರ ಸ್ಪಷ್ಟಪಡಿಸಿದ್ದಾರೆ.
Advertisement
Advertisement
ಏನಿದು ಪ್ರಕರಣ?
ಅ.30ರ ಭಾನುವಾರ ಸಂಜೆ ಚಿಕ್ಕಮಗಳೂರು ಜಿಲ್ಲೆಯ ಗೌರಿಗದ್ದೆಗೆ ಹೋಗಿ ವಿನಯ್ ಗುರೂಜಿ ಆಶೀರ್ವಾದ ಪಡೆದಿದ್ದ ಚಂದ್ರು ರಾತ್ರಿ ಊರಿಗೆ ಮರಳಿದ್ದರು. ರಾತ್ರಿ 11 ಗಂಟೆ ಸುಮಾರಿಗೆ ದೆಹಲಿಯ ಸ್ನೇಹಿತರ ಜೊತೆ ಕೊನೆಯದಾಗಿ ಮಾತಾಡಿ ಬಳಿಕ ರಾತ್ರಿ 11:30ಕ್ಕೆ ಹೊನ್ನಾಳಿ ಪಟ್ಟಣದಲ್ಲಿ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಅಲ್ಲಿಂದ ಸಿಗ್ನಲ್ ಪತ್ತೆಯಾಗಿರಲಿಲ್ಲ. ಶಿವಮೊಗ್ಗದಿಂದ ನ್ಯಾಮತಿ ತಾಲೂಕಿನ ಸುರಹೊನ್ನೆಗೆ ಬಂದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಲಭ್ಯವಾಗಿತ್ತು. ಆದಾದ ಬಳಿಕ ನ.3 ರಂದು ಚಂದ್ರಶೇಖರ್ ಅವರ ಕ್ರೇಟಾ ಕಾರು ಸೊರಟೂರು ಬಳಿ ಇರುವ ತುಂಗಾಭದ್ರ ಕಾಲುವೆಯಲ್ಲಿ ಪತ್ತೆಯಾಗಿತ್ತು. ಹೊನ್ನಾಳಿ ಹಾಗೂ ನ್ಯಾಮತಿ ಮಾರ್ಗ ಮಧ್ಯೆ ಇರುವ ಕಾಲುವೆಯಲ್ಲಿ ಪತ್ತೆಯಾದ ಕಾರನ್ನು ಮೇಲಕ್ಕೆತ್ತಿದಾಗ ಕಾರಿನಲ್ಲೇ ಚಂದ್ರು ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆ ಬಳಿಕ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ಇದನ್ನೂ ಓದಿ: ಚಂದ್ರು ದೇಹದಲ್ಲಿ ಒಳ ಉಡುಪು ಇರಲಿಲ್ಲ – ಸ್ನೇಹಿತರ ಸಲಿಂಗಕಾಮಕ್ಕೆ ಬಲಿಯಾದ್ರಾ ಯುವ ನಾಯಕ?