ಬೆಂಗಳೂರು: ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Darshan) ಹಾಗೂ ಪವಿತ್ರಾ ಗೌಡರ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ಮುಂದೂಡಿ ಸಿಸಿಹೆಚ್ 57ನೇ ನ್ಯಾಯಾಲಯವು ಆದೇಶ ಹೊರಡಿಸಿದೆ.
ಕೊಲೆ ಪ್ರಕರಣದ ಆರೋಪಿಗಳಾದ ಎ2 ದರ್ಶನ್ ಹಾಗೂ ಎ1 ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆಯು 57ನೇ ಸೆಷನ್ ಕೋರ್ಟ್‌ನಲ್ಲಿ ನಡೆಯಿತು. ಇದೇ ವೇಳೆ ಪವಿತ್ರಾಗೌಡ ಅವರ ಜಾಮೀನು ಅರ್ಜಿಯನ್ನೂ ಕೋರ್ಟ್ ಮುಂದೂಡಿತು. ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ ನಾಗೇಶ್ ಪ್ರಬಲ ವಾದ ಮಂಡಿಸಿದರು. ಇದನ್ನೂ ಓದಿ: ಶ್ರೀರಂಗಪಟ್ಟಣ ದಸರಾ | ಜಂಬೂಸವಾರಿ ವೇಳೆ ಬೆದರಿ ಓಡಿದ ಹಿರಣ್ಯ ಆನೆ – ತಪ್ಪಿದ ಭಾರೀ ಅನಾಹುತ
ಕೊನೆಯಲ್ಲಿ ರಿಕವರಿ ಮತ್ತು ಸ್ವಇಚ್ಚಾ ಹೇಳಿಕೆಯ ಸಂದೇಹ & ವ್ಯತ್ಯಾಸಗಳ ಬಗ್ಗೆ ಸಿ.ವಿ ನಾಗೇಶ್ ವಾದ ಮಂಡಿಸಿದರು. ಇಲ್ಲಿ ಪೊಲೀಸ್ ರಿಕವರಿ ಸ್ವೀಕರಿಸುವಂತಹದ್ದು ಅಲ್ಲ, ಹೇಳಿಕೆಯೂ ಸಹ ಸ್ವಿಕರಿಸುವಂತಹದ್ದಲ್ಲ. ಇಲ್ಲಿ ಸಮಾನ್ಯ ನಿಯಮವನ್ನು ಪೊಲೀಸರು ಅನುಸರಿಸಬೇಕು. ಸಾಕ್ಷಿಯೂ ಪ್ಲಾಂಟೆಂಡ್ ಸಾಕ್ಷಿಯಾಗಿದೆ. 37 ಲಕ್ಷ ಹಣವನ್ನು ಸೀಜ್ ಮಾಡಿದ್ದಾರೆ. ಸಾಕ್ಷಿಗಳ ಕೊಂಡುಕೊಳ್ಳಲು ಹಣ ಬೇಕು ಎಂದಿದ್ದಾರೆ ಎಂದು ಹೇಳಿ ನಾಳೆಗೆ ವಾದ ಮುಂದುವರಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಸಿಎಂ ಪರ ಜಿಟಿಡಿ ಬ್ಯಾಟಿಂಗ್ | ಕಳ್ಳರು ಕಳ್ಳರು ಒಂದಾಗಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ವ್ಯಂಗ್ಯ
ಇದಕ್ಕೆ ಜಡ್ಜ್ ಎಸ್‌ಪಿಪಿ ನೀವು ವಾದ ಮಾಡ್ತೀರಾ ಎಂದು ಪ್ರಶ್ನೆ ಮಾಡಿದರು, ಜಡ್ಜ್ ಪ್ರಶ್ನೆಗೆ ಉತ್ತರಿಸಿದ ಎಸ್‌ಪಿಪಿ ಪ್ರಸನ್ನ ಕುಮಾರ್, ಎಲ್ಲರದ್ದೂ ಮುಗಿದ ಮೇಲೆ ನಾನು ವಾದ ಮಾಡ್ತೀನಿ ಎಂದರು. ನಂತರ ಜಡ್ಜ್ ಶನಿವಾರ ಮಧ್ಯಾಹ್ನ 12:30ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿ ಆದೇಶಿಸಿದರು. ಇದನ್ನೂ ಓದಿ: ದಸರಾ ಉದ್ಘಾಟನೆ ವೇದಿಕೆ ರಾಜಕೀಯವಾಗಿ ಬಳಸಿದ ಸಿಎಂ; ಜಿಟಿಡಿ ಹೇಳಿಕೆ ಸಿಎಂ ಓಲೈಕೆಗಾಗಿ – ಛಲವಾದಿ ನಾರಾಯಣಸ್ವಾಮಿ