ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಮತ್ತೊಬ್ಬ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಬಂಧಿತನನ್ನು ಪ್ರದೋಶ್ (Paradosh) ಎಂದು ಗುರುತಿಲಾಗಿದ್ದು, ಈತ ಕೂಡ ಸ್ಯಾಂಡಲ್ ವುಡ್ ನಟನಾಗಿದ್ದಾನೆ. ಕನ್ನಡದ ಕೆಲ ಚಿತ್ರಗಳಲ್ಲಿ ಅಭಿನಯ ಮಾಡಿರುವ ಈತ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ A14 ಆರೋಪಿಯಾಗಿದ್ದಾನೆ. ಇದನ್ನೂ ಓದಿ: ರೇಣುಕಾಸ್ವಾಮಿ ಶವ ಸಾಗಾಟಕ್ಕೆ ಬಳಸಿದ್ದ ಸ್ಕಾರ್ಪಿಯೋ ಸೀಜ್
ದರ್ಶನ್ ಜೊತೆಗಿನ ಬೃಂದಾವನ, ಬುಲ್ ಬುಲ್ ಚಿತ್ರಗಳಲ್ಲಿ ಪ್ರದೋಶ್ ನಟಿಸಿದ್ದಾನೆ. ಅಲ್ಲದೇ ದರ್ಶನ್ ಆಪ್ತ ವಲಯದಲ್ಲಿ ಗುರುತಿಸಿಕೊಂಡು ಹಿಂದೆ ಮುಂದೆ ಓಡಾಡಿಕೊಂಡಿದ್ದ. ಇದಲ್ಲದೆ ಬಿಜೆಪಿ ಸಚಿವರೊಬ್ಬರ ಜೊತೆ ಆಪ್ತ ಸಹಾಯಕನಾಗಿ ಕೂಡ ಕೆಲಸ ಮಾಡಿದ್ದು, ಮಾತ್ರವಲ್ಲದೇ ಬಿಜೆಪಿ ಐಟಿ ವಿಭಾಗದಲ್ಲಿಯೂ ಕೆಲಸ ಮಾಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
ಕೇಸ್‌ನಲ್ಲಿ ಈತನ ಪಾತ್ರವೇನು?: ಜೂನ್ 8ರ ರಾತ್ರಿ 10 ಗಂಟೆ ಸುಮಾರಿಗೆ ತೀವ್ರ ಹಲ್ಲೆಯಿಂದ ರೇಣುಕಾಸ್ವಾಮಿ ಮೃತಪಟ್ಟಿದ್ದಾನೆ. ಈ ವಿಚಾರ ತಿಳಿದ ದರ್ಶನ್, ಆತಂಕಗೊಂಡು ಕೂಡಲೇ ಪಟ್ಟಣಗೆರೆ ಶೆಡ್ ಗೆ ಬಂದಿದ್ದಾರೆ. ನಂತರ ಮೃತದೇಹ ಕಂಡು ಸುಮಾರು 1.5 ಗಂಟೆ ಅಲ್ಲಿಯೇ ಇದ್ದು, ಬಳಿಕ ಶವ ಬೇರೆಡೆ ಸಾಗಣೆಗೆ ಸಂಚು ರೂಪಿಸಿದ್ದಾರೆ.
ಆಗ ದರ್ಶನ್, 30 ಲಕ್ಷ ರೂ. ನೀಡುತ್ತೇನೆ, ಬಾಡಿಯನ್ನು ಬೇರೆ ಎಲ್ಲಾದರೂ ಬಿಸಾಕಿ ಬಿಡಿ ಎಂದು ತನ್ನ ಆಪ್ತ, ಹೋಟೆಲ್ ಉದ್ಯಮಿ ಪ್ರದೋಶ್ ಗೆ ಸೂಚಿಸಿ ದ್ದಾರೆ. ಪ್ರದೋಶ್ ಮತ್ತಿತರರು ದೇಹವನ್ನು ಸ್ಕಾರ್ಪಿಯೋ ಕಾರಿನಲ್ಲಿ ಒಯ್ದು ಸುಮ್ಮನಹಳ್ಳಿಯ ಅಪಾರ್ಟ್‌ಮೆಂಟ್ ಒಂದರ ಮುಂಭಾಗದ ಮೋರಿ ಬಳಿ ಎಸೆದು ಹೋಗಿದ್ದಾರೆ.