ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Case) ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್ & ಗ್ಯಾಂಗ್ ವಿರುದ್ಧ ಕೋರ್ಟ್‌ಗೆ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 24ನೇ ಎಸಿಎಂಎಂ ಕೋರ್ಟ್‌ಗೆ ಸುಮಾರು 3,991 ಪುಟಗಳ ಚಾರ್ಜ್‌ಶೀಟ್ (Charge Sheet) ಸಲ್ಲಿಕೆ ಮಾಡಲಾಗಿದೆ.
Advertisement
ಕಾಮಾಕ್ಷಿಪಾಳ್ಯ ಇನ್‌ಸ್ಪೆಕ್ಟರ್, ರೇಣುಕಾಸ್ವಾಮಿ ಕೊಲೆ ಕೇಸ್ ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ (Chandan Kumar) ನೇತೃತ್ವದಲ್ಲಿ ಕೋರ್ಟ್‌ಗೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ವಾಹನಗಳ ಮೇಲೆ ಬೇಕಾಬಿಟ್ಟಿ ಸ್ಟಿಕ್ಕರ್ ಅಂಟಿಸಿದ್ರೆ ಕಾನೂನು ಕ್ರಮ – ದರ್ಶನ್ ಫ್ಯಾನ್ಸ್‌ಗೆ ಆರ್‌ಟಿಒ ಎಚ್ಚರಿಕೆ!
Advertisement
Advertisement
ಚಾರ್ಜ್‌ಶೀಟ್‌ನಲ್ಲಿ ಏನೇನು ಸಾಕ್ಷ್ಯಗಳಿವೆ?
ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 17 ವ್ಯಕ್ತಿಗಳನ್ನು ದಸ್ತಗಿರಿ ಮಾಡಿ, ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ತನಿಖಾಧಿಕಾರಿಗಳು ಇಲ್ಲಿಯವರೆಗಿನ ತನಿಖೆಯಲ್ಲಿನ ಸಂಗ್ರಹಿಸಿರುವ ಪ್ರತ್ಯಕ್ಷ, ಸಾಧರ್ಭಿಕ, ತಾಂತ್ರಿಕ, ವೈಜ್ಞಾನಿಕ ಹಾಗೂ ಇತರೆ ಸಾಕ್ಷ್ಯಾಧಾರಗಳ ಕುರಿತ ದೋಷಾರೋಪಣಾ ಪಟ್ಟಿಯನ್ನು 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಇದನ್ನೂ ಓದಿ: 1,788 ಕೊಠಡಿ, 257 ಸ್ನಾನಗೃಹ, ಅಮೃತಶಿಲೆಯಿಂದ ಮಾಡಿದ ಮೆಟ್ಟಿಲು – ವಿಶ್ವದ ಅತಿದೊಡ್ಡ ಐಷಾರಾಮಿ ಅರಮನೆಯಲ್ಲಿ ಮೋದಿಗೆ ಆತಿಥ್ಯ
Advertisement
ಈ ದೋಷಾರೋಪಣಾ ಪಟ್ಟಿಯು ಒಟ್ಟು 231 ಸಾಕ್ಷಿದಾರರನ್ನು ಒಳಗೊಂಡಂತೆ ಒಟ್ಟು 3991 ಪುಟಗಳುಳ್ಳ 07 ಸರಿಪುಟಗಳ 10 ಕಡತಗಳನ್ನು ಒಳಗೊಂಡಿರುತ್ತದೆ. ಈ ಪ್ರಕರಣದ ತನಿಖೆಯನ್ನು ಬೆಂಗಳೂರು ನಗರ ಪೊಲೀಸ್ ಆಯಿಕ್ತ ಬಿ.ದಯಾನಂದ, ಹೆಚ್ಚುವರಿ ಆಯುಕ್ತ ಸತೀಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ ಎಸ್. ಗಿರೀಶ್, ನೇತೃತ್ವದಲ್ಲಿ ವಿಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಎನ್. ಚಂದನ್ ಕುಮಾರ್ ಹಾಗೂ ಅಧಿಕಾರಿ, ಸಿಬ್ಬಂದಿಯನ್ನೊಳಗೊಂಡ ತಂಡ ಭೇದಿಸಿದೆ. ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಈ ಪ್ರಕರಣದಲ್ಲಿ ಇನ್ನು ಹೆಚ್ಚಿನ ತನಿಖೆಯನ್ನು ಕೈಗೊಂಡು ಸಂಗ್ರಹವಾಗುವ ಸಾಕ್ಷಾಧಾರಗಳನ್ನು ಕಲಂ- 173(8) ಸಿಆರ್‌ಪಿಸಿ ಅಡಿಯಲ್ಲಿ ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಪೊಲೀಸರು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.
231 ಸಾಕ್ಷಿಗಳು:
ದರ್ಶನ್ & ಗ್ಯಾಂಗ್ ವಿರುದ್ಧ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಒಟ್ಟು 231 ಸಾಕ್ಷಿಗಳನ್ನು ಕಲೆಹಾಕಲಾಗಿದೆ. ಈ ಪೈಕಿ ಪ್ರತ್ಯಕ್ಷ ಸಾಕ್ಷಿದಾರರು 3, FSL/ಸಿಎಫ್‌ಎಸ್‌ಎಲ್ ಸಾಕ್ಷಿಗಳು 8, ಸಿಆರ್‌ಪಿಸಿ ಸೆಕ್ಷನ್ 161 ಮತ್ತು 164 ಅಡಿಯಲ್ಲಿ 97 ಸಾಕ್ಷಿಗಳು (ಸಿಆರ್‌ಪಿಸಿ 164 ಅಡಿಯಲ್ಲಿ 27 ಜನ ಸಾಕ್ಷಿದಾರರು ಸೇರಿ), ಪಂಚರು 59, ಇತರೇ ಸರ್ಕಾರಿ ಅಧಿಕಾರಿಗಳು (ತಜಶೀಲ್ದಾರ್, ವೈದ್ಯರು, ಆರ್‌ಟಿಒ, ಅಭಿಯಂತರರು) 8 ಹಾಗೂ ಪೊಲೀಸರಿಂದ 56 ಸಾಕ್ಷುಗಳನ್ನು ಸಂಗ್ರಹಿಸಿರುವುದಾ ದೋಷಾರೋಪ ಪಟ್ಟಿಯಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಉಪಯೋಗಕ್ಕೆ ಬಾರದ ಗೃಹಜ್ಯೋತಿ ಯೋಜನೆ – ವಿದ್ಯುತ್ ಇಲ್ಲದೇ ನಿತ್ಯ ಕತ್ತಲಲ್ಲೇ ಕಾಲ ಕಳೆಯುತ್ತಿದೆ ಈ ಗ್ರಾಮ