ನವದೆಹಲಿ: ಸುಪ್ರೀಂ ಕೋರ್ಟ್‌ಗೆ (Supreme Court) ದರ್ಶನ್ ಪರ ವಾದ ಮಂಡಿಸಲು ಇಂದು (ಜು.22) ಹಾಜರಾಗಬೇಕಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ (Kapil Sibal) ಅವರು ಗೈರಾಗಿದ್ದಾರೆ.
ದರ್ಶನ್ ಪರ ವಕೀಲ ಸಿದ್ಧಾರ್ಥ ದವೆ ಹಾಜರಾಗಿದ್ದರು. ಕಪಿಲ್ ಸಿಬಲ್ ಅವರು ಗೈರಾಗಿದ್ದರಿಂದ, ಕೇಸ್ ಬಗ್ಗೆ ಅಧ್ಯಯನ ಮಾಡಲು ಸ್ವಲ್ಪ ಕಾಲವಕಾಶವನ್ನು ಸಿದ್ಧಾರ್ಥ ದವೆ ಕೇಳಿದರು. ಕೆಲಕಾಲವಷ್ಟೇ ವಾದ ಮಂಡನೆಗೆ ನ್ಯಾಯಾಲಯ ಅವಕಾಶ ನೀಡಿತು. ಅಲ್ಲದೇ ಲಿಖಿತ ರೂಪದಲ್ಲಿ ವಾದ ಮಂಡಿಸಲು ಸೂಚನೆ ನೀಡಿ ಗುರುವಾರಕ್ಕೆ ವಿಚಾರಣೆ ಮುಂದೂಡಲಾಯಿತು. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್ ಅರ್ಜಿ ವಿಚಾರಣೆ ಮುಂದೂಡಿಕೆ – ಗುರುವಾರ ಜಾಮೀನು ಭವಿಷ್ಯ
ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Darshan), ಪವಿತ್ರಾಗೌಡ ಸೇರಿ ಇತರ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಇಂದು ನಿಗದಿಪಡಿಸಲಾಗಿತ್ತು. ಬಹತೇಕ ಇಂದು ತೀರ್ಪು ಬರಬಹುದು ಎಂಬ ಚರ್ಚೆ ನಡೆಯುತ್ತಿತ್ತು. ಆದರೆ ದರ್ಶನ್ ಪರ ವಕೀಲರು ವಾದ ಮಂಡಿಸಲು ಕಾಲಾವಕಾಶ ಕೇಳಿದ್ದರಿಂದ ವಿಚಾರಣೆ ಮುಂದೂಡಲಾಯಿತು.
ಕಳೆದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಹೈಕೋರ್ಟ್ ತೀರ್ಪಿನ ಬಗ್ಗೆ ಬೇಸರ ವ್ಯಕ್ತಪಡಿಸಿತ್ತು. ರಾಜ್ಯ ಸರ್ಕಾರ ಸಲ್ಲಿಸಿರುವ ದಾಖಲೆಗಳನ್ನು ಪರಿಶೀಲಿಸಿದ್ದೇವೆ. ಜಾಮೀನು ನೀಡುವಾಗ ಹೈಕೋರ್ಟ್ ಸೂಕ್ತವಾಗಿ ತನ್ನ ವಿವೇಚನೆ ಬಳಸಿಲ್ಲ ಎಂದು ನ್ಯಾ.ಪಾರ್ದಿವಾಲ ಅಭಿಪ್ರಾಯಪಟ್ಟಿದ್ದರು.
ಥಾಯ್ಲೆಂಡ್‍ನಲ್ಲಿ ನಾಲ್ಕು ದಿನಗಳಿಂದ ದರ್ಶನ್ ನಟನೆಯ ಡೆವಿಲ್ ಸಾಂಗ್ ಶೂಟಿಂಗ್ ನಡೆಯುತ್ತಿದೆ. ಕುಟುಂಬ ಸಮೇತ ಥಾಯ್ಲೆಂಡ್‍ಗೆ ತೆರಳಿರುವ ದರ್ಶನ್, ಚಿತ್ರೀಕರಣ ಮುಗಿದ ನಂತರ ನಾಲ್ಕೈದು ದಿನ ಅಲ್ಲೇ ಇದ್ದು, ಜುಲೈ 25ರ ನಂತರ ಭಾರತಕ್ಕೆ ವಾಪಸ್ ಆಗಲಿದ್ದಾರೆ. ಇದನ್ನೂ ಓದಿ: ಥಾಯ್ಲೆಂಡ್‌ನಲ್ಲಿ ಜಾಲಿ ಮೂಡಲ್ಲಿರೋ ದರ್ಶನ್ ಬೇಲ್ ಭವಿಷ್ಯ ಇಂದು?