ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Case) ಮತ್ತೆ ಜೈಲು ಸೇರೊ ಆತಂಕದಲ್ಲಿದ್ದ ಐವರು ಆರೋಪಿಗಳಿಗೆ ಹೈಕೋರ್ಟ್ (High Court) ಬಿಗ್ ರಿಲೀಫ್ ನೀಡಿದೆ.
ಆರೋಪಿ ದರ್ಶನ್ (Darshan) ಸಹಚರರಾದ ವಿನಯ್, ನಂದೀಶ್, ಧನರಾಜು, ಪವನ್ ಮತ್ತು ರಾಘವೇಂದ್ರ ಸೇರಿದಂತೆ ಐವರು ಆರೋಪಿಗಳ ಜಾಮೀನು ರದ್ದು ಕೋರಿ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಇದನ್ನೂ ಓದಿ: ಪ್ರಾಸಿಕ್ಯೂಷನ್ ವಿರುದ್ಧವೇ ರೇಣುಕಾಸ್ವಾಮಿ ತಾಯಿ ಹೇಳಿಕೆ
ಈ ಹಿಂದೆ, ನಟ ದರ್ಶನ್ ಸೇರಿದಂತೆ ಏಳು ಜನ ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಸುಪ್ರೀಂ ಕೋರ್ಟ್‌ನ ಈ ಆದೇಶದ ಬೆನ್ನಲ್ಲೇ, ಪ್ರಾಸಿಕ್ಯೂಷನ್ ಆಗಸ್ಟ್‌ನಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸುಪ್ರೀಂ ಕೋರ್ಟ್ ಆದೇಶದ ಅನ್ವಯವೇ ಇತರೆ ಐವರು ಆರೋಪಿಗಳ ಜಾಮೀನು ರದ್ದು ಮಾಡುವಂತೆ ಪ್ರಾಸಿಕ್ಯೂಷನ್ ಮನವಿ ಮಾಡಿತ್ತು.
ಹೈಕೋರ್ಟ್ ನ್ಯಾಯಮೂರ್ತಿ ಎಸ್. ರಾಚಯ್ಯ ಅವರ ಪೀಠವು, ಪ್ರಾಸಿಕ್ಯೂಷನ್ ಮತ್ತು ಆರೋಪಿಗಳ ವಾದ ಪ್ರತಿವಾದಗಳನ್ನು ಸುದೀರ್ಘವಾಗಿ ಆಲಿಸಿ ಪ್ರಾಸಿಕ್ಯೂಷನ್ ಅರ್ಜಿಯನ್ನ ವಜಾ ಮಾಡಿದೆ. ಹೀಗಾಗಿ ಜೈಲು ಸೇರುವ ಆತಂಕದಲ್ಲಿದ್ದ ಐವರು ಆರೋಪಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಟ್ವಿಸ್ಟ್ – ಕ್ರಾಸ್ ಎಕ್ಸಾಮಿನ್ ವೇಳೆ ಪೊಲೀಸರ ಎಡವಟ್ಟು
