ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಷ್ (Pradosh) ಮಾಫಿ ಸಾಕ್ಷಿ ಹೇಳಿಕೆ ಬೆನ್ನಲ್ಲೇ ಪಿಎಸ್‌ಐ ವಿನಯ್ ಅವರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ತನಿಖೆಯಲ್ಲಿ ಹಲವು ಸಾಕ್ಷಿಗಳನ್ನ ಸೃಷ್ಟಿಸಲಾಗಿದೆ. ಆರೋಪಿ ಸ್ಥಾನದಿಂದ ಪಿಎಸ್‌ಐ ವಿನಯ್ ಅವರನ್ನು ತಪ್ಪಿಸಲಾಗಿದೆ. ಪ್ರಕರಣದಲ್ಲಿ ವಿನಯ್ ಕೂಡ ಭಾಗಿ ಆಗಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ತನಿಖೆಯಲ್ಲಿ ಲೋಪ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ದೂರು ಹಿನ್ನೆಲೆ, ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ನೇತೃತ್ವದಲ್ಲಿ ಇಲಾಖಾ ತನಿಖೆಗೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ – ಪ್ರದೋಷ್ ಮಾಫಿಸಾಕ್ಷಿಯಾಗಲು ವಿಜಯಲಕ್ಷ್ಮೀ ಪರ ವಕೀಲರ ಆಕ್ಷೇಪ
ಪಿಎಸ್‌ಐ ಅಣತಿಯಂತೆ ರೇಣುಕಾಸ್ವಾಮಿ ಮೃತದೇಹವನ್ನು (Renukaswamy Case) ಆರೋಪಿಗಳು ಬಿಸಾಡಿದ್ದರು ಎನ್ನಲಾಗಿದೆ. ಹೀಗಾಗಿ ವಿನಯ್ ಕೂಡ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಕೇಳಿಬಂದಿದೆ.
ಈ ಸಂಬಂಧ ಡಿಜಿ&ಐಜಿ ಡಾ. ಎಂ ಸಲೀಂ ಅವರಿಗೆ ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ತನಿಖಾಧಿಕಾರಿ ಎಸಿಪಿ ಚಂದನ್ ಹಾಗೂ ಪಿಎಸ್‌ಐ ವಿನಯ್ ವಿರುದ್ಧ ಇಲಾಖಾ ತನಿಖೆಗೆ ಸೂಚಿಸಲಾಗಿದೆ. ಇದನ್ನೂ ಓದಿ: ಪ್ರದೋಷ್ ಮಾಫಿ ಸಾಕ್ಷಿ ಸಂಬಂಧ ದರ್ಶನ್ ಸಲ್ಲಿಸಿದ್ದ 2 ಅರ್ಜಿಗಳು ವಜಾ

