ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ತನಿಖೆ ಅಂತಿಮ ಹಂತ ತಲುಪಿದ್ದು, ಹೈದರಾಬಾದ್ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬರೋದು ಮಾತ್ರ ಬಾಕಿ ಇದೆ. ಶೀಘ್ರವೇ ಕೋರ್ಟ್‌ಗೆ ಆರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ (Bengaluru Police Commissioner) ಬಿ. ದಯಾನಂದ್ ತಿಳಿಸಿದ್ದಾರೆ. ಇದನ್ನೂ ಓದಿ: ಟೀಚರ್ ಹೊಡೆದ್ರು ಅಂತಾ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ – ಶಾಲಾ ಬಿಲ್ಡಿಂಗ್‌ನ 3ನೇ ಫ್ಲೋರ್‌ನಿಂದ ಏಕಾಏಕಿ ಜಿಗಿದ ವಿದ್ಯಾರ್ಥಿನಿ!
ಮತ್ತೊಂದು ಕಡೆ ಇತ್ತೀಚಿಗೆ ನಟ ದರ್ಶನ್ (Darshan) ಭೇಟಿಯಾಗಿದ್ದ ನಟ ಚಿಕ್ಕಣ್ಣಗೆ ಸಂಕಷ್ಟ ಎದುರಾದ್ದಂತೆ ಕಾಣ್ತಿದೆ. ಕೋರ್ಟ್‌ನಲ್ಲಿ ಸಿಆರ್‌ಪಿಸಿ 164 ಅಡಿ ಹೇಳಿಕೆ ನೀಡಿದ್ದ ನಟ ಚಿಕ್ಕಣ್ಣ, ನಂತರ ಜೈಲಿಗೆ ತೆರಳಿ ದರ್ಶನ್ ಜೊತೆ ಮಾತುಕತೆ ನಡೆಸಿದ್ದನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‌ಗೆ ಮೋದಿ ಭೇಟಿ – ಝೆಲೆನ್ಸ್ಕಿ ಜೊತೆ ಮಾತುಕತೆ; ಯುದ್ಧದಲ್ಲಿ ಮಡಿದ ಮಕ್ಕಳ ಸ್ಮಾರಕ ವೀಕ್ಷಿಸಿದ ಪ್ರಧಾನಿ!
ನಟ ಚಿಕ್ಕಣ್ಣಗೆ ಮತ್ತೊಮ್ಮೆ ನೊಟೀಸ್ ನೀಡಿ ವಿಚಾರಣೆಗೆ ಒಳಪಡಿಸಲು ತೀರ್ಮಾನಿಸಿದ್ದಾರೆ. ಕಾನೂನಿನ್ವಯ ಕ್ರಮ ತೆಗೆದುಕೊಳ್ಳಲಾಗುತ್ತೆ ಎಂದು ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ. ಇನ್ನೂ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತುಮಕೂರು ಜೈಲಲ್ಲಿರುವ ನಾಲ್ವರು ಆರೋಪಿಗಳಿಗೆ ದರ್ಶನ್ ಪರ ವಕೀಲರಿಂದ ಯಾವುದೇ ನೆರವು ಸಿಕ್ಕಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ಮೊದಲ ಚಾರ್ಜ್‌ಶೀಟ್ ಸಲ್ಲಿಕೆ – 2,144 ಪುಟಗಳ ದೋಷಾರೋಪ ಪಟ್ಟಿಯಲ್ಲೇನಿದೆ?