ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲು ಸೇರಿದ್ದ ಎ13 ಆರೋಪಿ ದೀಪಕ್ ಕುಮಾರ್ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾನೆ.
ಕಳೆದ ಸೋಮವಾರ ಕೋರ್ಟ್‌ನಲ್ಲಿ ದೀಪಕ್ ಕುಮಾರ್‌ಗೆ ಜಾಮೀನು ಮಂಜೂರಾಗಿತ್ತು. ಕೋರ್ಟ್ ನೀಡಿರುವ ಷರತ್ತುಗಳನ್ನು ಪೂರೈಸಿ ಜೈಲಿಗೆ ಬೇಲ್ ಕಾಪಿ ತಲುಪಿತ್ತು. ಬುಧವಾರ ರಾತ್ರಿ ಬೇಲ್ ಕಾಪಿ ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳ ಕೈಸೇರಿತ್ತು. ಈ ಹಿನ್ನೆಲೆ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ದೀಪಕ್ ಕುಮಾರ್ ಬಿಡುಗಡೆಯಾಗಿದ್ದಾನೆ. ಇದನ್ನೂ ಓದಿ: ಹೆಚ್‌ಡಿಕೆ ಚನ್ನಪಟ್ಟಣ ಕ್ಷೇತ್ರವನ್ನು ಯೋಗೇಶ್ವರ್‌ಗೆ ಬಿಟ್ಟುಕೊಡಬೇಕು: ಸಿಪಿವೈ ಪರ ಮುನಿಸ್ವಾಮಿ ಬ್ಯಾಟಿಂಗ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್ (Darshan) ಮತ್ತು ಮೊದಲನೇ ಆರೋಪಿಯಾಗಿರುವ ದರ್ಶನ್ ಗೆಳತಿ ಪವಿತ್ರಾ ಗೌಡ, ದರ್ಶನ್ ಮ್ಯಾನೇಜರ್ ಆಗಿದ್ದ 11ನೇ ಆರೋಪಿ ಆರ್ ನಾಗರಾಜು ಹಾಗೂ 12ನೇ ಆರೋಪಿ ಎಂ ಲಕ್ಷ್ಮಣ್ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ತಿರಸ್ಕರಿಸಿದೆ. ಇದನ್ನೂ ಓದಿ: ಬೈಕ್‌ಗೆ ಬೊಲೆರೋ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ಮಹಿಳೆ ಸಾವು
ಎಂಟನೇ ಆರೋಪಿ ರವಿಶಂಕರ್ ಅಲಿಯಾಸ್ ರವಿ, 13ನೇ ಆರೋಪಿ ದೀಪಕ್ ಕುಮಾರ್ ಅಲಿಯಾಸ್ ದೀಪಕ್‌ಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಕಾರ್ತಿಕ್ ಅಲಿಯಾಸ್ ಕಪ್ಪೆ, ಕೇಶವಮೂರ್ತಿ ಮತ್ತು ನಿಖಿಲ್ ನಾಯಕ್‌ಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು. ಇದರೊಂದಿಗೆ 17 ಆರೋಪಿಗಳ ಪೈಕಿ ಐವರಿಗೆ ಜಾಮೀನು ಮಂಜೂರಾಗಿದೆ. ಇದನ್ನೂ ಓದಿ: ದೀಪಾವಳಿಗೆ ರಾಜ್ಯದಲ್ಲಿ ವಿಶೇಷ ರೈಲು ಸಂಚಾರ: ಸೋಮಣ್ಣ