ಬೆಳಗಾವಿ: ಚಿತ್ರದುರ್ಗದ (Chitradurga) ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) 14ನೇ ಆರೋಪಿ ಪ್ರದೋಶ್‌ನನ್ನು ಪೊಲೀಸರು ಬೆಳಗಾವಿ ಹಿಂಡಲಗಾ ಜೈಲಿನಿಂದ (Hindalaga Jail) ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದಾರೆ.
ಹೈಕೋರ್ಟ್ ಆದೇಶ ಹಿನ್ನೆಲೆ ಗುರುವಾರ ಬಿಗಿ ಭದ್ರತೆಯಲ್ಲಿ ಪ್ರದೋಶ್‌ನನ್ನು ಪೊಲೀಸರು ಬೆಂಗಳೂರು ಜೈಲಿಗೆ ಶಿಫ್ಟ್ ಮಾಡಿದ್ದಾರೆ. ಆಗಸ್ಟ್ 28ರಂದು ಬೆಳಗಾವಿ ಹಿಂಡಲಗಾ ಜೈಲಿಗೆ ಪೊಲೀಸರು ಆರೋಪಿಯನ್ನು ಕರೆತಂದಿದ್ದರು. 44 ದಿನಗಳ ಬಳಿಕ ಮತ್ತೆ ಪರಪ್ಪನ ಅಗ್ರಹಾರಕ್ಕೆ (Parappana Agrahara) ಪ್ರದೋಶ್‌ನನ್ನು ರವಾನಿಸಲಾಗಿದೆ. ಇದನ್ನೂ ಓದಿ: ಮಾನಸಿಕ ಅಸ್ವಸ್ಥೆಯ ಹತ್ಯೆಗೈದು ಅತ್ಯಾಚಾರ – ಸೈಕೋ ಕಿಲ್ಲರ್ ಅರೆಸ್ಟ್
ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ರಾಜ್ಯಾತಿಥ್ಯ ವಿಚಾರವಾಗಿ ದರ್ಶನ್ ಸೇರಿ ಹಲವರನ್ನು ರಾಜ್ಯದ ವಿವಿಧ ಜೈಲಿಗೆ ಪೊಲೀಸರು ಶಿಫ್ಟ್ ಮಾಡಿದ್ದರು. ಬೆಳಗಾವಿಯಿಂದ ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಹೋಗುವ ವೇಳೆ ಪ್ರದೋಶ್ ಪೊಲೀಸ್ ವಾಹನದಲ್ಲಿ ಕುಳಿತು ನಗೆ ಬೀರಿದ್ದಾನೆ. ಇದನ್ನೂ ಓದಿ: ರತನ್ ಟಾಟಾ ಅಂತಿಮ ದರ್ಶನ ಪಡೆದ ಕ್ರಿಕೆಟ್ ದೇವರು