ಬೆಂಗಳೂರು: ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ (Darshan) ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 4 ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ.
ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಹಾಗೂ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯು ಸೋಮವಾರ 57ನೇ ಸೆಷನ್ ಕೋರ್ಟ್‌ನಲ್ಲಿ ನಡೆಯಿತು. ಇದನ್ನೂ ಓದಿ: ನಮ್ಮ ಪಕ್ಷದಲ್ಲೂ ಷಡ್ಯಂತ್ರಗಳು ನಡೆಯುತ್ತವೆ ಎಂಬುದನ್ನು ತಳ್ಳಿ ಹಾಕುವಂತಿಲ್ಲ: ಕೆಎನ್ ರಾಜಣ್ಣ
ಕಳೆದ ಶುಕ್ರವಾರ ಪವಿತ್ರ ಗೌಡ ಪರ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಿದ್ದರು. ಇಂದಿಗೆ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿತ್ತು.
ಈಗ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನೂ ಮುಂದೂಡಲಾಗಿದೆ. ದರ್ಶನ್ ಮತ್ತು ಲಕ್ಷ್ಮಣ್ ಇಬ್ಬರ ಅರ್ಜಿ ಮುಂದೂಡಲಾಗಿದೆ. ಇದನ್ನೂ ಓದಿ: ಕುಂಟು ನೆಪ ಹೇಳಿ ಕರ್ನಾಟಕ ಐಪಿಎಸ್ ಕೇಡರ್‌ನಲ್ಲಿ ವಿಲೀನ: ಚಂದ್ರಶೇಖರ್ ಅಮಾನತಿಗೆ ಜೆಡಿಎಸ್ ದೂರು