ಚಿತ್ರದುರ್ಗ: ರೇಣುಕಾಸ್ವಾಮಿ (Renukaswamy) ಕೊಲೆ ಪ್ರರಕಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ (Darshan) ಗ್ಯಾಂಗ್‌ನ ನಾಲ್ಕನೇ ಆರೋಪಿ ರಾಘವೇಂದ್ರನ ತಾಯಿ ನಿಧನರಾಗಿದ್ದಾರೆ.
ರಾಘವೇಂದ್ರ ಅಲಿಯಾಸ್ ರಘು ತಾಯಿ ಮಂಜುಳಮ್ಮ (75) ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ರಾಘವೇಂದ್ರ ಚಿತ್ರದುರ್ಗ ದರ್ಶನ್ ಅಭಿಮಾನಿಗಳ ಸಂಘದ ಅಧ್ಯಕ್ಷನಾಗಿದ್ದ. ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಮಳೆ ಅಬ್ಬರ – 3 ಮನೆಗಳು ಧರೆಗೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಮಾನಸಿಕ ಅಸ್ವಸ್ಥತೆ, ವಯೋಸಹಜ ಕಾಯಿಲೆಯಿಂದ ರಾಘವೇಂದ್ರನ ತಾಯಿ ಕೋಳಿಬುರುಜನಹಟ್ಟಿ ಮನೆಯಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ. ಇವರು ರಘು ಸಹೋದರ ಮುರುಳಿ ಮನೆಯಲ್ಲಿದ್ದರು.
ಮುರುಳಿ ಮದುವೆಯಾಗದೇ ತಾಯಿ ಆರೈಕೆ ಮಾಡುತಿದ್ದ. ರಘು ಲವ್ ಮ್ಯಾರೇಜ್ ಆಗಿ ಪತ್ನಿ ಜೊತೆ ಪ್ರತ್ಯೇಕವಾಗಿ ವಾಸವಾಗಿದ್ದ. ಆಗಾಗ್ಗೆ ಆಗಮಿಸಿ ತಾಯಿ ಆರೋಗ್ಯ ವಿಚಾರಿಸುತ್ತಿದ್ದ. ಇದನ್ನೂ ಓದಿ: ಎಕ್ಸ್ ಖಾತೆಯಲ್ಲಿ ಹೆಚ್ಚು ಫಾಲೋವರ್ಸ್ ಹೊಂದಿದ ವಿಶ್ವನಾಯಕ ಮೋದಿಗೆ ಎಲಾನ್ ಮಸ್ಕ್ ಅಭಿನಂದನೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.