ರಮ್ಯಾ (Ramya) ವರ್ಸಸ್ ದರ್ಶನ್ (Darshan) ಫ್ಯಾನ್ಸ್ ಕಾದಾಟ ತಾರಕಕ್ಕೆ ಏರಿದೆ. ತನ್ನ ಬಗ್ಗೆ ಅಶ್ಲೀಲವಾಗಿ ಮೆಸೇಜ್ ಹಾಕಿದ್ದ 11 ಅಭಿಮಾನಿಗಳ ಪೋಸ್ಟ್‌ಗಳನ್ನು ರಮ್ಯಾ ಇನ್‌ಸ್ಟಾ ಸ್ಟೋರಿಯಲ್ಲಿ ಅಪ್ಲೋಡ್ ಮಾಡಿದ್ದಾರೆ.
ರೇಣುಕಾಸ್ವಾಮಿ (Renukaswamy) ಕಳುಹಿಸಿದ ಸಂದೇಶಕ್ಕೂ ಡಿ ಬಾಸ್ ಫ್ಯಾನ್ಸ್ ಕಳುಹಿಸುತ್ತಿರುವ ಸಂದೇಶಕ್ಕೂ ಯಾವುದೇ ವ್ಯತ್ಯಾಸವಿಲ್ಲ. ಇವರೆಲ್ಲಾ ಸ್ತ್ರೀ ದ್ವೇಷಿ ಮನೋಭಾವದವರು. ಇಂತವರಿಂದಲೇ ಹೆಣ್ಮಕ್ಕಳು ದೌರ್ಜನ್ಯ, ಅತ್ಯಾಚಾರಕ್ಕೆ ಒಳಗಾಗುತ್ತಿದ್ದಾರೆ ಎಂದು ಪೋಸ್ಟ್ ಮಾಡಿ ದರ್ಶನ್ ಅಭಿಮಾನಿಗಳ ವಿರುದ್ಧ ರಮ್ಯಾ ಸಿಟ್ಟು ಹೊರಹಾಕಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೇಸ್ – ʻಡಿ ಬಾಸ್ʼ ಫ್ಯಾನ್ಸ್ ವಿರುದ್ಧ ನಟಿ ರಮ್ಯಾ ಕೆಂಡ
ಗಲಾಟೆಗೆ ಕಾರಣ ಏನು?
ದರ್ಶನ್‌ಗೆ ಹೈಕೋರ್ಟ್ (High Court) ನೀಡಿದ ಜಾಮೀನು ಅರ್ಜಿಯನ್ನು ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಈ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಕೋರ್ಟ್ ದರ್ಶನ್ ಪರ ವಕೀಲರಿಗೆ ಖಾರವಾದ ಪ್ರಶ್ನೆಗಳನ್ನು ಕೇಳಿದ್ದರು.
ಅರ್ಜಿ ವಿಚಾರಣೆಯ ನಂತರ ರಮ್ಯಾ ಅವರು, ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (Renukaswamy) ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ. ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣ ಎಂದು ರಮ್ಯಾ ಬರೆದು ಸ್ಟೋರಿ ಹಾಕಿದ್ದರು. ಈ ಸ್ಟೋರಿಗೆ ದರ್ಶನ್ ಅಭಿಮಾನಿಗಳು ಅಶ್ಲೀಲವಾಗಿ ಕಮೆಂಟ್ ಹಾಕಲು ಆರಂಭಿಸಿದ್ದರು.