ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ (Renukaswamy Murder Case) ಸಂಬಂಧ ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವ 14ನೇ ಆರೋಪಿ ಪ್ರದೋಷ್ (Pradosh) ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು 59ನೇ ಸಿಸಿಹೆಚ್ ಕೋರ್ಟ್ ಮುಂದೂಡಿದೆ.
ಹೈಕೋರ್ಟ್‌ನಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆದೇಶ ಇನ್ನೂ ಹೊರಬಾರದ ಹಿನ್ನೆಲೆಯಲ್ಲಿ ವಿಚಾರಣೆಗೆ ಹೆಚ್ಚಿನ ಸಮಯ ನೀಡುವಂತೆ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನಕುಮಾರ್ ನ್ಯಾಯಾಲಯಕ್ಕೆ ಮನವಿ ಮಾಡಿದರು. ಪ್ರದೋಷ್ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಸೋಮವಾರಕ್ಕೆ ಮುಂದೂಡುವಂತೆ ಎಸ್‌ಪಿಪಿ ಪ್ರಸನ್ನಕುಮಾರ್ ಮನವಿ ಮಾಡಿದರು. ಎಸ್‌ಪಿಪಿ ಮನವಿಯನ್ನು ಪರಿಗಣಿಸಿದ ನ್ಯಾಯಾಲಯ, ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಸೋಮವಾರಕ್ಕೆ ಮುಂದೂಡಿದೆ. ಇದನ್ನೂ ಓದಿ: ಆಹಾರ ಸುರಕ್ಷತೆ ಬಗ್ಗೆ ಕಳವಳ – ಪಿಜಿಗಳಲ್ಲಿ ತಪಾಸಣೆಗೆ ಸಚಿವ ಯು.ಟಿ ಖಾದರ್ ಸೂಚನೆ
ಇಂದು ಎ14 ಆರೋಪಿ ಪ್ರದೋಷ್‌ನನ್ನು ಜೈಲು ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯಕ್ಕೆ ಆಗಮಿಸಿದ ಪ್ರದೋಷ್, ಅಗತ್ಯ ಪ್ರಕ್ರಿಯೆ ಪೂರ್ಣಗೊಳಿಸಿ ಸಹಿ ಮಾಡಿ ಹೊರಬಂದರು. ವಿಚಾರಣೆ ಮುಂದೂಡಿಕೆಯಾದ ಹಿನ್ನೆಲೆಯಲ್ಲಿ ಪೊಲೀಸರು ಪ್ರದೋಷ್‌ನನ್ನು ಮತ್ತೆ ಜೈಲಿಗೆ ಕಳುಹಿಸಿದ್ದಾರೆ. ಇದನ್ನೂ ಓದಿ: KPSC Scam | 6 ಮಾದರಿ ಪ್ರಶ್ನೆಪತ್ರಿಕೆ ಮನೆಯಲ್ಲೇ ಪರಿಶೀಲನೆ ಮಾಡ್ತಿದ್ದೆ – ಸಿಐಡಿ ಮುಂದೆ ಗ್ಯಾನೇಂದ್ರ ಸ್ಫೋಟಕ ಹೇಳಿಕೆ
