ಬೆಂಗಳೂರು: ರೇಣುಕಾಸ್ವಾಮಿ ಕೊಲೆ (Renukaswamy Murder Case) ಗಂಭೀರ ಪ್ರಕರಣವಾಗಿದ್ದು, ಈ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಸಿಗುವವರೆಗೂ ಅಧಿಕಾರಿಗಳು ಚುರುಕುತನ, ನಿಯತ್ತಿನ ತನಿಖೆ ನಡೆಸಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಒತ್ತಾಯಿಸಿದರು.
ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಮಾನವೀಯವಾಗಿ ವರ್ತಿಸುವ ಅಧಿಕಾರ ಯಾರಿಗೂ ಇಲ್ಲ. ಅಧಿಕಾರದಲ್ಲಿ ಇರುವವರು ಆಗಿರಬಹುದು, ಸೆಲೆಬ್ರಿಟಿ ಆಗಬಹುದು. ಯಾರಿಗೂ ವಿಶೇಷ ಅಧಿಕಾರ ಇಲ್ಲ. ಕಾನೂನಿನ ಮುಂದೆ ನಾವೆಲ್ಲರೂ ಸಮಾನರು. ಕಾನೂನನ್ನು ಕೈಗೆತ್ತಿಕೊಳ್ಳುವುದೇ ಅಪರಾಧ. ಅದು ಮರ್ಡರ್ ಆಗುವ ಮಟ್ಟಕ್ಕೆ ಹೋದರೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ಶೀಘ್ರವೇ ಮೊಬೈಲ್ ಸಂಖ್ಯೆ, ಲ್ಯಾಂಡ್‌ಲೈನ್ ಸಂಖ್ಯೆಗೆ ಪಾವತಿಸಬೇಕು ಶುಲ್ಕ!
Advertisement
ಕೊಲೆಯಲ್ಲಿ ಹಲವಾರು ರೀತಿ ಇವೆ. ಇದು ಸಂಚು ಮಾಡಿ ಮರ್ಡರ್ ಮಾಡಿರುವ ಪ್ರಕರಣ. ಇದೊಂದು ಗಂಭೀರ ಪ್ರಕರಣ. ದರ್ಶನ್ (Actor Darshan) ಪ್ರಕರಣದಲ್ಲಿ ಆರಂಭದಲ್ಲಿ ತನಿಖೆ ಚುರುಕಾಗಿ ನಡೆಯುತ್ತಿದೆ. ಕೊನೆಯವರೆಗೂ ಇದೇ ಚುರುಕುತನ, ನಿಯತ್ತು ತನಿಖೆಯಲ್ಲಿರಬೇಕು. ಹಾಗಾದಾಗ ಮಾತ್ರ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂದರು. ಇದನ್ನೂ ಓದಿ: ಮಹಾರಾಷ್ಟ್ರದಿಂದ ಮಾಂಜ್ರಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ; ಬೀದರ್ ರೈತರ ಜಮೀನುಗಳಿಗೆ ನುಗ್ಗಿದ ನೀರು
Advertisement
ಶಿಗ್ಗಾಂವಿಗೆ ಉಪಚುನಾವಣೆ ಪ್ರಕ್ರಿಯೆ ಪ್ರಾರಂಭವಾಗಿಲ್ಲ:
ಇನ್ನು ಶಿಗ್ಗಾಂವಿ (Shiggavi) ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಕ್ರಿಯೆ ಪ್ರಾರಂಭವಾಗಿಲ್ಲ. ನಾನಿನ್ನು ರಾಜೀನಾಮೆ ಕೊಟ್ಟಿಲ್ಲ. ಇಂದಿಗೂ ನಾನು ಶಿಗ್ಗಾಂವಿ ಕ್ಷೇತ್ರದ ಶಾಸಕ. ನಾನು ರಾಜೀನಾಮೆ ಕೊಟ್ಟ ನಂತರ ಉಪಚುನಾವಣೆ ಪ್ರಕ್ರಿಯೆ ಪ್ರಾರಂಭವಾಗುತ್ತದೆ ಎಂದರು. ಇದನ್ನೂ ಓದಿ: ದೋಡಾ ಟೆರರಿಸ್ಟ್ ಅಟ್ಯಾಕ್ – 4 ಉಗ್ರರ ರೇಖಾಚಿತ್ರ ಬಿಡುಗಡೆ
Advertisement
Advertisement
ತಮ್ಮ ಪುತ್ರನಿಗೆ ಉಪಚುನಾವಣೆಯಲ್ಲಿ ಟಿಕೆಟ್ ನೀಡುವ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ, ಟಿಕೆಟ್ ವಿಚಾರದಲ್ಲಿ ಪಕ್ಷ ತೀರ್ಮಾನ ಮಾಡುತ್ತದೆ. ಪಕ್ಷ ಮಾಡುವ ತೀರ್ಮಾನಕ್ಕೆ ನಾವು ಬದ್ಧವಾಗಿರಬೇಕು. ಪಕ್ಷ ಯಾರಿಗೇ ಟಿಕೆಟ್ ಕೊಟ್ಟರೂ ಅವರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಅರುಣಾಚಲ ಪ್ರದೇಶದ ಸಿಎಂ ಆಗಿ ಸತತ 3ನೇ ಅವಧಿಗೆ ಪೆಮಾ ಖಂಡು ಪ್ರಮಾಣವಚನ ಸ್ವೀಕಾರ