ಬೆಂಗಳೂರು: ಮೈಸೂರಿಗೆ ದರ್ಶನ್ (Darshan) ತೆರಳಲು ಮತ್ತು ಪವಿತ್ರಾ ಗೌಡಗೆ (Pavithra Gowda) ಹೊರ ರಾಜ್ಯಕ್ಕೆ ಹೋಗಲು ಕೋರ್ಟ್ (Court) ಅನುಮತಿ ನೀಡಿದೆ.
57ನೇ ಸಿಸಿಹೆಚ್ ನ್ಯಾಯಾಧೀಶರ ಮುಂದೆ ದರ್ಶನ್ ಪರ ವಕೀಲರು ಮೈಸೂರಿಗೆ ತೆರಳಲು ಅನುಮತಿ ನೀಡಬೇಕೆಂದು ಕೇಳಿದ್ದರು. ಪವಿತ್ರಾ ಗೌಡ ಪರ ವಕೀಲರು ಹೊರ ರಾಜ್ಯಕ್ಕೆ ತೆರಳಲು ಅನುಮತಿ ನೀಡಬೇಕೆಂದು ಮನವಿ ಮಾಡಿದರು.
Advertisement
ಈ ಎರಡು ಅರ್ಜಿಗಳನ್ನು ಕೋರ್ಟ್ ಮಾನ್ಯ ಮಾಡಿದೆ. ದರ್ಶನ್‌ಗೆ ಜ.12ರಿಂದ 17ರವರೆಗೆ ಮೈಸೂರಿನಲ್ಲಿ ತಂಗಲು ಅನುಮತಿ ನೀಡಿದೆ. ಹೀಗಾಗಿ ಈ ಬಾರಿ ಸಂಕ್ರಾಂತಿಯನ್ನು ಮೈಸೂರಿನಲ್ಲಿ ದರ್ಶನ್ ಆಚರಿಸಲಿದ್ದಾರೆ. ಇದನ್ನೂ ಓದಿ: ಕೋರ್ಟ್‌ನಲ್ಲಿ ಪವಿತ್ರಾ ಭಾವುಕ – ಬೆನ್ನುತಟ್ಟಿ ಸಂತೈಸಿದ ದರ್ಶನ್
Advertisement
Advertisement
ಕೋರ್ಟ್ ಮುಂಬೈ ಮತ್ತು ದೆಹಲಿಗೆ ತೆರಳಲು ಪವಿತ್ರಾ ಗೌಡಗೆ ಅನುಮತಿ ನೀಡಿದೆ. ದೇವಸ್ಥಾನ ಮತ್ತು ವ್ಯವಹಾರ ಸಂಬಂಧ ಒಂದು ತಿಂಗಳ ಕಾಲ ಹೊರ ರಾಜ್ಯಕ್ಕೆ ತೆರಳಲು ಅನುಮತಿ ಕೇಳಿದ್ದರು.
Advertisement
ಆರ್ ಆರ್ ನಗರದಲ್ಲಿ ಇರುವ ರೆಡ್ ಕಾರ್ಪೆಟ್ ಶೋ ರೂಂಗೆ ಸಂಬಂಧಿಸಿದಂತೆ ವಸ್ತುಗಳನ್ನು ತರಲು ಅವಕಾಶ ನೀಡುವಂತೆ ಪವಿತ್ರಾ ಗೌಡ ಅರ್ಜಿಯಲ್ಲಿ ಮನವಿ ಮಾಡಿದ್ದರು.
ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಮಂದಿಗೆ ಕರ್ನಾಟಕ ಹೈಕೋರ್ಟ್ ಡಿ. 13 ರಂದು ಜಾಮೀನು ಮಂಜೂರು ಮಾಡಿತ್ತು. ಆದೇಶದಲ್ಲಿ ಏಳು ಆರೋಪಿಗಳಿಗೆ, ಕೋರ್ಟ್ ಅನುಮತಿ ಇಲ್ಲದೇ ಬೆಂಗಳೂರು (Bengaluru) ಬಿಟ್ಟು ಹೋಗುವಂತಿಲ್ಲ. ಪ್ರತಿ ತಿಂಗಳು ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿತ್ತು.
ಇಂದು ಏನಾಯ್ತು?
ಪವಿತ್ರಾ ಗೌಡ, ಪ್ರದೋಶ್ ಸೇರಿದಂತೆ ಹಲವು ಆರೋಪಿಗಳು ನ್ಯಾಯಾಲಯಕ್ಕೆ ಮೊದಲೇ ಹಾಜರಾಗಿದ್ದರು. ನಟ ದರ್ಶನ್ ಮಾತ್ರ ತುಸು ತಡವಾಗಿ ನ್ಯಾಯಾಲಯದ ಬಳಿ ಬಂದರು. ಎಲ್ಲಾ 17 ಆರೋಪಿಗಳು ಹಾಲ್‌ಗೆ ಬಂದ ನಂತರ ನ್ಯಾಯಾಧೀಶರು ಹಾಜರಿ ಪಡೆದರು. ನ್ಯಾಯಾಧೀಶರು ಅರ್ಜಿ ವಿಚಾರಣೆಯನ್ನು ಫೆ. 25ಕ್ಕೆ ಮುಂದೂಡಿದ ಬಳಿಕ ಪವಿತ್ರಾ ಗೌಡ ಮತ್ತು ದರ್ಶನ್ ಕೋರ್ಟ್‌ನಿಂದ ಒಟ್ಟಿಗೆ ಹೊರಬಂದು ಪ್ರತ್ಯೇಕ ಕಾರಿನಲ್ಲಿ ತೆರಳಿದರು.