ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ನಟ ದರ್ಶನ್ (Darshan) ಹಾಗೂ 17 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ (Charge Sheet) ಸಲ್ಲಿಕೆಗೆ ವಿಶೇಷ ತನಿಖಾ ತಂಡದ (SIT) ಪೊಲೀಸರು ತಯಾರಿ ನಡೆಸಿದ್ದಾರೆ.
ಬಹುತೇಕ ಆಗಸ್ಟ್ ತಿಂಗಳಿನಲ್ಲಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳ ಕ್ರೋಢೀಕರಣದಲ್ಲಿ ತೊಡಗಿದ್ದಾರೆ.
Advertisement
ಮೂಲಗಳ ಪ್ರಕಾರ ಪೊಲೀಸರ ಕೈಗೆ ಯಾವುದೇ ವರದಿ ಸೇರಿಲ್ಲ. ಸಿಸಿಟಿವಿ ದೃಶ್ಯ, ಬಟ್ಟೆ, ಸ್ಥಳದಲ್ಲಿ ಸಂಗ್ರಹಿಸಿದ ಸ್ಯಾಂಪಲ್‌ಗಳ ರಿಪೋರ್ಟ್, ಮರಣೋತ್ತರ ಪರೀಕ್ಷೆ, ಮೊಬೈಲ್ ಕರೆ ಮತ್ತು ದತ್ತಾಂಶ ಸಂಗ್ರಹ ಸೇರಿ ವಿಧಿ ವಿಜ್ಞಾನ ಪ್ರಯೋಗಾಲಯದ ಅಂತಿಮ ವರದಿಗೆ ಕಾಯುತ್ತಿದ್ದಾರೆ. ಇದನ್ನೂ ಓದಿ: ಮುಸ್ಲಿಮರ ಓಲೈಕೆಗೆ ರಾಮನಗರ ಹೆಸರು ಬದಲಾವಣೆ: ಈಶ್ವರಪ್ಪ
Advertisement
Advertisement
ಶೀಘ್ರವೇ ವರದಿ ನೀಡುವಂತೆ ಎಫ್‌ಎಸ್‌ಎಲ್ ಹಾಗೂ ಸಿಐಡಿ ಟೆಕ್ನಿಕಲ್ ಸೆಲ್‌ಗೆ ಮನವಿ ಮಾಡಿದ್ದು ಇನ್ನೂ ಕೆಲವು ವರದಿಗಳು ಹೈದರಾಬಾದ್ ಎಫ್‌ಎಸ್‌ಎಲ್‌ನಿಂದ ಬರಬೇಕಿದೆ. ಇದನ್ನೂ ಓದಿ: IPL 2025: ಮುಂದಿನ ಐಪಿಎಲ್‌ನಲ್ಲೂ ಮಹಿ ಕಣಕ್ಕಿಳಿಯೋದು ಫಿಕ್ಸ್?
Advertisement
ಇನ್ನೊಂದೆಡೆ ಪ್ರಕರಣ ಸಂಬಂಧ ಹಲವಾರು ಮಂದಿಯ ವಿಚಾರಣೆ ನಡೆಸಿದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದ ಪ್ರತ್ಯಕ್ಷ, ಪರೋಕ್ಷ ಸಾಕ್ಷಿಗಳ ವಿಚಾರಣೆ ನಡೆಸಿದ್ದಾರೆ. ಈಗಾಗಲೇ ಪ್ರಕರಣ ದಾಖಲಾಗಿ ಒಂದೂವರೆ ತಿಂಗಳಿಗೂ ಅಧಿಕ ಕಾಲವಾಗಿದೆ. ಸೆಪ್ಟೆಂಬರ್ 8ರೊಳಗೆ ಆರೋಪ ಪಟ್ಟಿ ಸಲ್ಲಿಕೆ ಮಾಡಬೇಕು. ಹೀಗಾಗಿ ಕೊನೆಯವರೆಗೆ ಕಾಯದೇ ಆದಷ್ಟು ಬೇಗ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರು ನಿರ್ಧಾರ ಮಾಡಿದ್ದಾರೆ.